ಗುಂಡ್ಲುಪೇಟೆ: ಅರಿಶಿಣ ಬೆಳೆಗೆ ಬೆಂಬಲ ಬೆಲೆ ಘೋಷಿಸಬೇಕು ಎಂದು ಶಾಸಕ ಸಿ.ಎಸ್.ನಿರಂಜನ್ ಕುಮಾರ್ ಸರ್ಕಾರವನ್ನು ಒತ್ತಾಯಿಸಿದರು.
ವಿಧಾನಸೌಧದಲ್ಲಿ ನಡೆದ ಅಧಿವೇಶನದಲ್ಲಿ ಅರಿಶಿಣ ಬೆಳೆಗಾರರ ಸಮಸ್ಯೆಗಳ ಕುರಿತು ಪ್ರಸ್ತಾಪಿಸಿದ ಅವರು, ಅರಿಶಿಣ ಬೆಳೆಯನ್ನು ಚಾಮರಾಜನಗರ ಜಿಲ್ಲಾ ಬೆಳೆಯಾಗಿ ಘೋಷಣೆ ಮಾಡಿದ್ದಾರೆ. ಆದರೆ ಮಾರುಕಟ್ಟೆಗೆ ತಮಿಳುನಾಡಿನ ಈರೋಡ್ ಅನ್ನು ಅವಲಂಬಿಸುವ ಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಸಮಸ್ಯೆಯಾಗಿದೆ ಎಂದರು.
ಅರಿಶಿಣ ಬೆಳೆಯ ಉತ್ಪಾದನಾ ವೆಚ್ಚ ಹೆಚ್ಚಾಗಿದೆ. ಒಂದು ಎಕರೆಗೆ ಸುಮಾರು 2 ಲಕ್ಷ ರೂ. ವೆಚ್ಚ ಮಾಡಿ ಬೆಳೆ ಬೆಳೆದರೆ ಕ್ವಿಂಟಾಲ್‌ಗೆ ಐದು ಸಾವಿರ ರೂ. ಬೆಲೆ ಇರುವುದರಿಂದ ಉತ್ಪಾದನೆ ವೆಚ್ಚವೇ ಹೆಚ್ಚಾಗಿ ರೈತನಿಗೆ ಹೊರೆಯಾಗಿದೆ. ಆದ್ದರಿಂದ ಬೆಂಬಲ ಬೆಲೆ ಘೋಷಿಸಬೇಕೆಂದು ಆಗ್ರಹಿಸಿದರು.