ಪಾಂಡವಪುರ: ಮೈಸೂರು-ಬೆಂಗಳೂರು ಹೆದ್ದಾರಿ ರಸ್ತೆ ಅಭಿವೃದ್ಧಿಪಡಿಸುವ ವೇಳೆ ಅಧ್ವಾನಗೊಂಡಿರುವ ಮೇಲುಕೋಟೆ ಕ್ಷೇತ್ರ ವ್ಯಾಪ್ತಿಯ ರಸ್ತೆಗಳನ್ನು ಅಭಿವೃದ್ದಿಪಡಿಸದೆ ಹೋದರೆ ಮೈಸೂರು ಸಂಸದ ಪ್ರತಾಪ್‌ಸಿಂಹ ವಿರುದ್ಧ ಮನೆ ಮುಂದೆ ಪ್ರತಿಭಟನೆ ನಡೆಸಲಾಗುವುದು ಎಂದು ಶಾಸಕ ಸಿ.ಎಸ್.ಪುಟ್ಟರಾಜು ಎಚ್ಚರಿಕೆ ನೀಡಿದರು.
ಪಟ್ಟಣದ ಪಾಂಡವ ಕ್ರೀಡಾಂಗಣದಲ್ಲಿ ಅಪ್ಪುನಮನ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಸುದ್ದಿಗೋಷ್ಠಿ ನಡೆಸಿ ಅವರು ಮಾತನಾಡಿದರು. ಬೆಂಗಳೂರು-ಮೈಸೂರು ಹೆದ್ದಾರಿ ನಿರ್ಮಾಣ ಮಾಡುವ ಸಂದರ್ಭದಲ್ಲಿ ರಸ್ತೆ ಅಭಿವೃದ್ಧಿಗಾಗಿ ಮಣ್ಣು, ಕಲ್ಲಿನ ಕಚ್ಚಾವಸ್ತುಗಳ ಸಾಗಾಣಿಕೆ ಮಾಡಿರುವ ಮೇಲುಕೋಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ದುದ್ದ ಹೋಬಳಿ ಸೇರಿದಂತೆ ಹಲವಾರು ರಸ್ತೆಗಳು ಸಂಪೂರ್ಣವಾಗಿ ಅಧ್ವಾನಗೊಂಡಿವೆ. ರಸ್ತೆ ನಿರ್ಮಾಣದ ವೇಳೆ ಲಾರಿಗಳನ್ನು ತಡೆದಂತಹ ಸಂದರ್ಭದಲ್ಲಿ ಮೈಸೂರು ಸಂಸದ ಪ್ರತಾಪ್‌ಸಿಂಹ ನನಗೆ ದೂರವಾಣಿ ಕರೆ ಮಾಡಿ, ಅಣ್ಣಾ ಲಾರಿ ಸಂಚಾರದಿAದ ಹಗದೆಟ್ಟ ರಸ್ತೆಗಳನ್ನು ಅಭಿವೃದ್ಧಿ ಮಾಡಿಸುವುದಾಗಿ ಭರವಸೆ ನೀಡಿ ರಸ್ತೆ ಅಭಿವೃದ್ಧಿಪಡಿಸುವುದಾಗಿ ಅಗ್ರಿಮೆಂಟ್ ಸಹ ಮಾಡಿಕೊಟ್ಟಿದ್ದರು. ಆದರೆ, ಇದೀಗ ಬೆಂಗಳೂರು-ಮೈಸೂರು ರಸ್ತೆ ಕಾಮಗಾರಿ ಪೂರ್ಣಗೊಳ್ಳುವ ಹಂತಕ್ಕೆ ಬಂದರೂ ಸಹ ಈವರೆಗೂ ರಸ್ತೆಗಳನ್ನು ಅಭಿವೃದ್ಧಿಪಡಿಸಿಲ್ಲ. ಮೈಸೂರು-ಬೆಂಗಳೂರು ರಸ್ತೆ ಅಭಿವೃದ್ಧ್ದಿಪಡಿಸುವುದಕ್ಕೆ ನನ್ನ ವಿರೋಧವಿಲ್ಲ. ನಾನು ಸಂಸದನಾಗಿ ಕೆಲಸ ಮಾಡುವ ಸಂದರ್ಭದಲ್ಲಿ ಮೈಸೂರು-ಬೆಂಗಳೂರು ರಸ್ತೆಯನ್ನು ಅಭಿವೃದ್ದಿಪಡಿಸುವಂತೆ ಸಂಸತ್‌ನಲ್ಲಿ ಪ್ರಸ್ತಾಪಿಸಿದ್ದೇ ನಾನು. ಒಂದು ವಾರದೊಳಗೆ ನಮ್ಮ ವ್ಯಾಪ್ತಿಯಲ್ಲಿ ಲಾರಿ ಸಂಚಾರದಿAದ ಹದಗೆಟ್ಟ ರಸ್ತೆಗಳನ್ನು ಅಭಿವೃದ್ಧ್ದಿಪಡಿಸದಿದ್ದರೆ ಸಂಸದ ಪ್ರತಾಸ್‌ಸಿಂಹ ಅವರ ಮನೆಯ ಎದುರು ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಹೆದ್ದಾರಿ ಕಾಮಗಾರಿ ಅವೈಜ್ಞಾನಿಕ:
ಮೈಸೂರು-ಬೆಂಗಳೂರು ಹೆದ್ದಾರಿ ಕಾಮಗಾರಿಯೊಂದು ಅವೈಜ್ಞಾನಿಕವಾದ ಕಾಮಗಾರಿಯಾಗಿದೆ. ಈ ಹೆದ್ದಾರಿ ಕಾಮಗಾರಿಯಿಂದ ಮಂಡ್ಯ ಭಾಗದ ಜನರ ವ್ಯಾಪಾರ ವೈಹಿವಾಟಿಗೆ ತೊಡಕಾದಂತಾಗಿದೆ. ಹೆದ್ದಾರಿ ಕಾಮಗಾರಿ ಸಾಕಷ್ಟು ಕಳಪೆ ಗುಣಮಟ್ಟದಿಂದ ಕೂಡಿದೆ. ಎಸ್.ಎಂ.ಕೃಷ್ಣ ಅವರ ಕಾಲದಲ್ಲಿ ನಡೆದಿದ್ದ ಬೆಂಗಳೂರು-ಮೈಸೂರು ಮುಖ್ಯರಸ್ತೆಯ ಗುಣಮಟ್ಟದಷ್ಟು ಈ ಕಾಮಗಾರಿ ಗುಣಮಟ್ಟವಿಲ್ಲ. ಸಂಪೂರ್ಣವಾಗಿ ಕಳಪೆಯಿಂದ ಕೂಡಿದೆ ಎಂದು ಕಿಡಿಕಾರಿದರು.
ರಾಜ್ಯದಲ್ಲಿ ೨೦೨೩ಕ್ಕೆ ಎಚ್.ಡಿ.ಕುಮಾರಸ್ವಾಮಿ ನೇತೃತ್ವದ ಜಾ.ದಳ ಪಕ್ಷ ಅಧಿಕಾರಕ್ಕೆ ಬರುವುದು ನಿಶ್ಚಿತ ಎಂದು ಶಾಸಕ ಸಿ.ಎಸ್.ಪುಟ್ಟರಾಜು ವಿಶ್ವಾಸ ವ್ಯಕ್ತಪಡಿಸಿದರು.
ರಾಜ್ಯದಲ್ಲಿ ಜಾ.ದಳ ಪರವಾದ ಒಲವು ಇದೆ ಎನ್ನುವುದಕ್ಕೆ ಕೋಲಾರದಲ್ಲಿ ನಡೆದ ಪಂಚರತ್ನ ಕಾರ್ಯಕ್ರಮದಲ್ಲಿ ಸೇರಿದ ಜನಸ್ತೋಮವೇ ಸಾಕ್ಷಿ. ೨೦೨೩ಕ್ಕೆ ಎಚ್.ಡಿ.ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಆಗೋದನ್ನು ಯಾರಿಂದಲೂ ತಡೆಯಲು ಸಾಧ್ಯವಿಲ್ಲ. ಪಕ್ಷ ಬಿಟ್ಟು ಹೋಗಿದ್ದ ನಾಯಕರೆಲ್ಲ ಮತ್ತೆ ಪಕ್ಷಕ್ಕೆ ವಾಪಸ್ಸಾಗುತ್ತಿದ್ದಾರೆ. ಮಂಡ್ಯ ಜಿಲ್ಲೆಯ ಏಳು ಕ್ಷೇತ್ರದಲ್ಲಿ ಜಾ.ದಳ ಗೆಲುವು ಸಾಧಿಸಲಿದೆ ಎಂದು ತಿಳಿಸಿದರು.
ಕೆಆರ್‌ಎಸ್ ಬೃಂದಾವನಕ್ಕೆ ಚಿರತೆ ನುಗ್ಗಿದೆ ಎನ್ನುವ ಕಾರಣಕ್ಕೆ ಪ್ರವಾಸಿಗರನ್ನು ನಿಷೇಧಿಸಿರುವುದು ಸರಿಯಲ್ಲ. ರಾಜ್ಯ, ಹೊರ ರಾಜ್ಯಗಳಿಂದ ನೂರಾರು ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುತ್ತಿದ್ದಾರೆ. ಬೃಂದಾವನಕ್ಕೆ ನುಗ್ಗಿರುವ ಚಿರತೆಯನ್ನು ಹೊರಗಡೆ ಓಡಿಸಿ ಬೃಂದಾವನವನ್ನು ತೆರೆಯುವುದನ್ನು ಬಿಟ್ಟು ಗಾರ್ಡ್ನ್ ಮುಚ್ಚಿರುವುದು ಸರಿಯಲ್ಲ. ಈ ಭಾಗದ ಪ್ರವಾಸೋಧ್ಯವವನ್ನು ಅಭಿವೃದ್ಧಿಪಡಿಸಬೇಕು ಎಂಬ ಉದ್ದೇಶದಿಂದ ನಾನು ಜಿಲ್ಲಾ ಉಸ್ತುವಾರಿ ಸಚಿವನಾಗಿದ್ದ ಸಂದರ್ಭದಲ್ಲಿ ಕೆಆರ್‌ಎಸ್‌ಗೆ ಡಿಸ್ನಿ ಲ್ಯಾಂಡ್ ತರಲು ಮುಂದಾಗಿದ್ದೆವು. ಡಿಸ್ನಿಲ್ಯಾಂಡ್ ಬಂದಿದ್ದರೆ ಈ ಭಾಗದ ಜನರ ಬದುಕು ಹಸನಾಗುತ್ತಿತ್ತು. ಕೆಲವರು ಅದಕ್ಕೂ ವಿರೋಧ ವ್ಯಕ್ತಪಡಿಸಿ ನಿಲ್ಲಿಸಿದರು. ನಿಲ್ಲಿಸಿದವರಿಗೆ ಭಗವಂತ ಒಳ್ಳೆಯದು ಮಾಡಲ್ಲ ಬಿಡಿ ಎಂದು ಸುದ್ದಿಗಾರರ ಕೇಳಿದ ಪ್ರಶ್ನೆಗೆ ಉತ್ತರಿಸಿದರು.
ಗೋಷ್ಠಿಯಲ್ಲಿ ಜಿಪಂ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ಸಿ.ಅಶೋಕ್, ಪುರಸಭೆ ಅಧ್ಯಕ್ಷೆ ಅರ್ಚನಚಂದ್ರು, ಸದಸ್ಯರಾದ ಶಿವಣ್ಣ. ಬಾಬು, ಚಂದ್ರ, ಶಿವಕುಮಾರ್, ಇಮ್ರಾನ್, ಕಸಾಪ ಅಧ್ಯಕ್ಷ ಮೇನಾಗರ ಪ್ರಕಾಶ್, ಎಸ್.ನಾರಾಯಣಗೌಡ ಉಪಸ್ಥಿತರಿದ್ದರು.
ಪಾಟ್ನಾ: ಬಿಹಾರದ ಸಿಎಂ ಆಗಿ 10ನೇ ಬಾರಿಗೆ ಪ್ರಮಾಣವಚನ ಸ್ವೀಕರಿಸಿದ ಕೇವಲ ನಾಲ್ಕು ತಿಂಗಳಿನಲ್ಲೇ ನಿತೀಶ್ ಕುಮಾರ್ ಅವರು ಇಂದು…
ಬೆಂಗಳೂರು: ಹತ್ತು ಹಲವಾರು ನಿರೀಕ್ಷೆಗಳೊಂದಿಗೆ ಹಣಕಾಸು ಖಾತೆಯನ್ನು ಹೊಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಾಳೆ 17ನೇ ಐತಿಹಾಸಿಕ ಬಜೆಟ್ ಮಂಡನೆಯ…
ರಾಮನಗರ: ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಖಾತೆ ಸಚಿವ ವಿ.ಸೋಮಣ್ಣ ಅವರ ಸಹೋದರಿ ಮಹಾದೇವಮ್ಮ ನಿಧನರಾಗಿದ್ದಾರೆ. ಕನಕಪುರ ತಾಲ್ಲೂಕಿನ…
ಹಾಸನ: ಭ್ರಷ್ಟಾಚಾರದ ಆರೋಪಗಳ ಹಿನ್ನೆಲೆಯಲ್ಲಿ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇಂದು ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಂಗಳೂರು, ಮೈಸೂರು, ಬಾಗಲಕೋಟೆ,…
ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ಬೆಳ್ಳಂಬೆಳಿಗ್ಗೆ ಭ್ರಷ್ಟ ಅಧಿಕಾರಿಗೆ ಲೋಕಾಯುಕ್ತ ಅಧಿಕಾರಿಗಳು ಶಾಕ್ ನೀಡಿದ್ದಾರೆ. ಪಿಡಬ್ಲ್ಯೂಡಿ ಎಇಇ ಸತೀಶ್ ಮನೆ…
ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಬೇಸಿಗೆಯ ಬಿಸಿಲು ದಿನದಿಂದ ದಿನಕ್ಕೆ ಏರುತ್ತಿದ್ದು, ಮನುಷ್ಯರಂತೆ ಮೃಗಾಲಯದ ವನ್ಯಜೀವಿಗಳೂ ಕೂಡ ತತ್ತರಿಸಿವೆ. ಪ್ರಾಣಿ-ಪಕ್ಷಿಗಳಿಗೆ…