ಹನೂರು : ಪಟ್ಟಣದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಮೋದಿಯವರ ಹುಟ್ಟುಹಬ್ಬದ ಪ್ರಯುಕ್ತ ಸೆಪ್ಟೆಂಬರ್ 18 ರಂದು ಬೃಹತ್ ಋಣಸಂದಾಯ ಆರೋಗ್ಯ ಶಿಬಿರವನ್ನು ಹಮ್ಮಿಕೊಳ್ಳಲಾಗಿದ್ದು ಹನೂರು ಕ್ಷೇತ್ರದ ಜನತೆ ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಬಿಜೆಪಿ ಜಿಲ್ಲಾ ಒಬಿಸಿ ಸಂಯೋಜಕ
ಜನಧ್ವನಿ ಬಿ. ವೆಂಕಟೇಶ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕ್ಷೇತ್ರ ವ್ಯಾಪ್ತಿಯಲ್ಲಿ ಗುಡ್ಡಗಾಡು ಪ್ರದೇಶಗಳು ಹೆಚ್ಚಿರುವುದರಿಂದ ಈ ಪ್ರದೇಶದಲ್ಲಿನ ಪ್ರತಿಯೊಬ್ಬರಿಗೂ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಬೃಹತ್ ಋಣ ಸಂದಾಯ ಆರೋಗ್ಯ ಶಿಬಿರ ಹಮ್ಮಿಕೊಳ್ಳಲಾಗಿದೆ.
ಈ ಶಿಬಿರದಲ್ಲಿ ಪ್ರತಿಷ್ಠಿತ ಆಸ್ಪತ್ರೆಗಳ ನುರಿತ ವೈದ್ಯರು ಆಗಮಿಸಲಿದ್ದಾರೆ.
ಶಿಬಿರದಲ್ಲಿ ಸಿಗುವ ಸೌಲಭ್ಯಗಳು : ಬಿಪಿ ಮತ್ತು ಶುಗರ್ ತಪಾಸಣೆ’ ಕಣ್ಣಿನ ತಪಾಸಣೆ ಮತ್ತು ಶಸ್ತ್ರಚಿಕಿತ್ಸೆ, ಉಚಿತ ಕನ್ನಡಕ ವಿತರಣೆ,ಡಯಾಬಿಟಿಕ್ ರೆಟಿನಪಥಿ, ಎಲ್ಲಾ ರೀತಿಯ ಕ್ಯಾನ್ಸರ್ ತಪಾಸಣೆ ಮತ್ತು ಶಸ್ತ್ರ ಚಿಕಿತ್ಸೆ,ಹೃದಯ ರೋಗ ತಪಾಸಣೆ ಮತ್ತು ಉಚಿತ ಶಸ್ತ್ರಚಿಕಿತ್ಸೆ, ಇಸಿಜಿ ಎಕೋ ಉಚಿತ ತಪಾಸಣೆ,ಫೈಲ್ಸ್ ಮತ್ತು ಹರ್ನಿಯಾ ಉಚಿತ ಶಸ್ತ್ರಚಿಕಿತ್ಸೆ,ಮೂಳೆ ಮತ್ತು ಕೀಲು ತಪಾಸಣೆ, ಉಚಿತ ಎಕ್ಸ್ ರೇ, ಅಪೆಂಡಿಕ್ಸ್ ಕಿಡ್ನಿ ಸ್ಟೋನ್ ಉಚಿತ ಸ್ಕ್ಯಾನಿಂಗ್,ಮಹಿಳೆಯರಿಗೆ ಸ್ತನ ಕ್ಯಾನ್ಸರ್ ಮೆಮೋ ಗ್ರಾಫಿಕ್, ಗರ್ಭಕೋಶ ತಪಾಸಣೆ,ಕಿವಿ ಮತ್ತು ಮಾತಿನ ತೊಂದರೆಯ ಪರೀಕ್ಷೆ ಮಾಡಿ ಉಚಿತವಾಗಿ 1ಸಾವಿರ ಜನರಿಗೆ ಶ್ರವಣ ಯಂತ್ರ ವಿತರಣೆ,ಮೂಗಿನ ಪರೀಕ್ಷೆ ಮತ್ತು ಶಸ್ತ್ರಚಿಕಿತ್ಸೆ ಗಂಟಲಿನ ತಪಾಸಣೆ ಮತ್ತು ಶಸ್ತ್ರಚಿಕಿತ್ಸೆ, ಸಾಮಾನ್ಯ ಆರೋಗ್ಯ ತಪಾಸಣೆ, ನುರಿತ ಮಕ್ಕಳ ತಜ್ಞರಿಂದ ಮಕ್ಕಳಿಗೆ ಉಚಿತ ತಪಾಸಣೆ, ಉಚಿತ ಆಯುರ್ವೇದ ತಪಾಸಣೆ ಮತ್ತು ಔಷಧಿ ವಿತರಣೆ, ರಕ್ತದಾನ ಶಿಬಿರ ಉಚಿತ ಡಯಾಬಿಟಿಕ್ ರೆಟಿನೋಪತಿ ಪರೀಕ್ಷೆ ಮತ್ತು ಲೇಸರ್ ಟ್ರೀಟ್ ಮೆಂಟ್ ಗ್ಲೊಕೊಮಾ ಪರೀಕ್ಷೆ ಮತ್ತು ಚಿಕಿತ್ಸೆ ಶಿಬಿರವನ್ನು ಹಮ್ಮಿಕೊಳ್ಳಲಾಗಿದ್ದು ಪ್ರತಿಯೊಬ್ಬರು ಈ ಶಿಬಿರದಲ್ಲಿ ಭಾಗವಹಿಸಿ ತಮ್ಮ ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಶಿಬಿರದಲ್ಲಿ ಭಾಗವಹಿಸಬೇಕು ಎಂದು ಜಿಲ್ಲಾ ಬಿಜೆಪಿ ಸಂಯೋಜಕ ಜನಧ್ವನಿ ಬಿ ವೆಂಕಟೇಶ್ ಪತ್ರಿಕಾ ಪ್ರಕಟಣೆಯಲ್ಲಿ ಮನವಿ ಮಾಡಿಕೊಂಡಿದ್ದಾರೆ .
ಬೆಂಗಳೂರು: ಹೈಕೋರ್ಟ್‌ಗೆ ಡಿಸೆಂಬರ್.20ರಿಂದ 31ರವರೆಗೆ ಎರಡು ವಾರ ಚಳಿಗಾಲದ ರಜೆ ಇರುತ್ತದೆ. ಹೊಸ ವರ್ಷದ ಮೊದಲ ದಿನ ರಜೆ ಇರಲಿದ್ದು,…
ಬೆಂಗಳೂರಿನಲ್ಲಿ ಮಾಜಿ ಸಚಿವ ಕೆ.ಎನ್ ರಾಜಣ್ಣ ಅವರ ನಿವಾಸಕ್ಕೆ ತೆರಳಿದ ಡಿಕೆ ಅವರು ಭೇಟಿ ಮಾಡಿ ಸಮಾಲೋಚನೆ ನಡೆಸಿದ್ದಾರೆ .…
ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದ 108 ಅಡಿ ಪ್ರತಿಮೆ ಮುಂಭಾಗದಲ್ಲಿ ರೀಲ್ಸ್ ಮಾಡಿದ್ದ ಮಹಿಳೆ ಹಾಗೂ ಹಿಟಾಚಿ…
ಕರ್ನಾಟಕದಲ್ಲಿ ದಿನದಿಂದ ದಿನಕ್ಕೆ ಚಳಿಯ ಅಬ್ಬರ ಅಧಿಕವಾಗಿದ್ದು ರಾಜ್ಯದ ಹಲವು ಭಾಗಗಳಲ್ಲಿ ತೀವ್ರ ಚಳಿ ಕಂಡುಬರುತ್ತಿದೆ . ಹವಮಾನ ಇಲಾಖೆಯ…
ಕರ್ನಾಟಕದಾದ್ಯಂತ ಇಂದು ರಾಷ್ಟ್ರೀಯಾ ಪಲ್ಸ್ ಪೋಲಿಯೋ ಅಭಿಯಾನ 2025 ಚಾಲನೆ ಹೊರಡಿಸಲಾಗಿದ್ದು , ಡಿ.24 ವರೆಗೆ ಈ ಅಭಿಯಾನದಲ್ಲಿ 5…
ದೆಹಲಿ ಕಣ್ಣೋಟ -ಶಿವಾಜಿ ಗಣೇಶನ್ ಹತ್ತೊಂಬತ್ತು ದಿನಗಳ ಸಂಸತ್ತಿನ ಚಳಿಗಾಲದ ಅಧಿವೇಶನ ಮುಕ್ತಾಯಗೊಂಡಿದೆ. ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರ ಎಂದಿನಂತೆ…