ಜಿಲ್ಲೆಗಳು

ಮೋದಿ ಹುಟ್ಟುಹಬ್ಬದ ಪ್ರಯುಕ್ತ ವಿವಿಧ ಕಾರ್ಯಕ್ರಮ : ಒಬಿಸಿ ರಾಜ್ಯಾಧ್ಯಕ್ಷ ನೆ. ಲ ನರೇಂದ್ರ ಬಾಬು

ಹನೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಹುಟ್ಟು ಹಬ್ಬದ ಅಂಗವಾಗಿ ರಾಜ್ಯಾದ್ಯಂತ ಸೆ.17 ರಿಂದ ಅ.2 ರವರೆಗೆ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಆದ್ದರಿಂದ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಬಿಜೆಪಿ ಒಬಿಸಿ ಮೋರ್ಚಾದ ರಾಜ್ಯಾಧ್ಯಕ್ಷ ನೆ.ಲ ನರೇಂದ್ರ ಬಾಬು ತಿಳಿಸಿದರು.

ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಗುರುವಾರ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನರೇಂದ್ರ ಮೋದಿ ಅವರು ದೇಶದ ಜನತೆಗೆ ಉತ್ತಮ ಆಡಳಿತ ನೀಡಿದ್ದು, ಜನಮನ್ನಣೆ ಪಡೆದ ನಾಯಕರಾಗಿದ್ದಾರೆ. ಈ ದಿಸೆಯಲ್ಲಿ ಅವರ ಹುಟ್ಟು ಹಬ್ಬದ ಹಿನ್ನಲೆ ರಾಜ್ಯದ್ಯಂತ ಹಮ್ಮಿಕೊಂಡಿರುವ ವಿವಿಧ ಕಾರ್ಯಕ್ರಮಗಳು ರಾಷ್ಟ್ರಕ್ಕೆ ಸಂದೇಶ ನೀಡುವ ವಿಶೇಷ ಕಾರ್ಯಕ್ರಮವಾಗಿದ್ದು, ಜೆ.ಪಿ ನಡ್ಡಾ ಅವರ ಸೂಚನೆ ಮೇರೆಗೆ ವಿಶೇಷವಾಗಿ ಅರಳಿಮರದ ಸಸಿ ನೆಡಲಾಗುತ್ತದೆಯಲ್ಲದೇ ಬೀಜದ ಹುಂಡೆ ಬಿತ್ತನೆ ಮಾಡಲಾಗುತ್ತದೆ.

ಅಲ್ಲದೇ ಹನೂರು ವಿಧಾನಸಭಾ ಕ್ಷೇತ್ರದಲ್ಲಿ ಒಬಿಸಿ ಮೋರ್ಚಾದ ವತಿಯಿಂದ ಬೃಹತ್ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿದ್ದು, ಪಟ್ಟಣದ ಆರ್.ಎಸ್ ದೊಡ್ಡಿ ಬಳಿಯ ಗೌರಿ ಶಂಕರ ಕಲ್ಯಾಣ ಮಂಟಪದಲ್ಲಿ ನಡೆಯಲಿದೆ. ಈ ಶಿಬಿರದಲ್ಲಿ 14 ಕ್ಕೂ ಆಸ್ಪತ್ರೆಯ 200ಕ್ಕೂ ವೈದ್ಯ ಸಿಬ್ಬಂದಿಗಳು ಭಾಗವಹಿಸಲಿದ್ದಾರೆ. ಈ ಕಾರ್ಯಕ್ರಮಕ್ಕೆ ಬಿಜೆಪಿ ಒಬಿಸಿ ಮೋಚಾದ ರಾಷ್ಟ್ರಧ್ಯಕ್ಷ ಲಕ್ಷ್ಮಣ್, ಉಪಾಧ್ಯಕ್ಷೆ ಅರುಣಾ ದೇವಿ ಹಾಗೂ ರಾಜ್ಯದ ಹಿರಿಯ ನಾಯಕರು ಆಗಮಿಸಲಿದ್ದಾರೆ. ಆಗಮಿಸುವ ಇವರನ್ನು ಪೂರ್ಣ ಕುಂಭಮೇಳದೊಂದಿಗೆ ಬರಮಾಡಿಕೊಳ್ಳಲಾಗುತ್ತದೆ. ಆದ್ದರಿಂದ ಪಕ್ಷದ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವುದರ ಮೂಲಕ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಮನವಿ ಮಾಡಿದರು. ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಸುಂದರ್, ಉಪಾಧ್ಯಕ್ಷ ಡಾ.ಎಸ್ ದತ್ತೇಶ್‍ಕುಮಾರ್, ಪ್ರಧಾನ ಕಾರ್ಯದರ್ಶಿ ಮಂಗಲ ಶಿವಕುಮಾರ್, ಮಾಜಿ ಶಾಸಕಿ ಪರಿಮಳ ನಾಗಪ್ಪ, ಒಬಿಸಿ ಮೋರ್ಚಾದ ಜಿಲ್ಲಾ ಸಂಯೋಜಕ ಜನಧ್ವನಿ ಬಿ.ವೆಂಕಟೇಶ್, ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯ ನೂರೊಂದು ಶೆಟ್ಟಿ, ಸೇವಾ ಸಂಚಾಲಕ ರಾಮಚಂದ್ರು, ವಿವಿಧ ಮಂಡಲದ ಅಧ್ಯಕ್ಷರು ಹಾಗೂ ಕಾರ್ಯಕರ್ತರು ಇದ್ದರು.

andolanait

Recent Posts

ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಒ

ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…

7 hours ago

ಅರ್ಥಪೂರ್ಣವಾಗಿ ಕನ್ನಡ ರಾಜ್ಯೋತ್ಸವ ಆಚರಣೆ – ಡಾ. ಪಿ ಶಿವರಾಜ್

ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…

7 hours ago

ನಗರದ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ: ಜಿ ಟಿ ದೇವೇಗೌಡ

ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…

8 hours ago

ಹನೂರು: ಗುಂಡಿಮಯವಾದ ರಸ್ತೆ, ಸಾಮಾಜಿಕ ಜಾಲತಾಣ ಮೂಲಕ ಯುವಕ ವ್ಯಂಗ್ಯ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…

8 hours ago

ಇಶಾ ಫೌಂಡೇಶನ್‌ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂಕೋರ್ಟ್‌

ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್‌ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್‌ವಾಶ್‌ ಮಾಡಲಾಗಿದೆ ಎಂಬ…

10 hours ago

ಮಡಿಕೇರಿ: ಮಗನಿಂದಲೇ ತಂದೆಯ ಹತ್ಯೆ..

ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…

10 hours ago