ಹನೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಹುಟ್ಟು ಹಬ್ಬದ ಅಂಗವಾಗಿ ರಾಜ್ಯಾದ್ಯಂತ ಸೆ.17 ರಿಂದ ಅ.2 ರವರೆಗೆ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಆದ್ದರಿಂದ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಬಿಜೆಪಿ ಒಬಿಸಿ ಮೋರ್ಚಾದ ರಾಜ್ಯಾಧ್ಯಕ್ಷ ನೆ.ಲ ನರೇಂದ್ರ ಬಾಬು ತಿಳಿಸಿದರು.
ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಗುರುವಾರ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನರೇಂದ್ರ ಮೋದಿ ಅವರು ದೇಶದ ಜನತೆಗೆ ಉತ್ತಮ ಆಡಳಿತ ನೀಡಿದ್ದು, ಜನಮನ್ನಣೆ ಪಡೆದ ನಾಯಕರಾಗಿದ್ದಾರೆ. ಈ ದಿಸೆಯಲ್ಲಿ ಅವರ ಹುಟ್ಟು ಹಬ್ಬದ ಹಿನ್ನಲೆ ರಾಜ್ಯದ್ಯಂತ ಹಮ್ಮಿಕೊಂಡಿರುವ ವಿವಿಧ ಕಾರ್ಯಕ್ರಮಗಳು ರಾಷ್ಟ್ರಕ್ಕೆ ಸಂದೇಶ ನೀಡುವ ವಿಶೇಷ ಕಾರ್ಯಕ್ರಮವಾಗಿದ್ದು, ಜೆ.ಪಿ ನಡ್ಡಾ ಅವರ ಸೂಚನೆ ಮೇರೆಗೆ ವಿಶೇಷವಾಗಿ ಅರಳಿಮರದ ಸಸಿ ನೆಡಲಾಗುತ್ತದೆಯಲ್ಲದೇ ಬೀಜದ ಹುಂಡೆ ಬಿತ್ತನೆ ಮಾಡಲಾಗುತ್ತದೆ.
ಅಲ್ಲದೇ ಹನೂರು ವಿಧಾನಸಭಾ ಕ್ಷೇತ್ರದಲ್ಲಿ ಒಬಿಸಿ ಮೋರ್ಚಾದ ವತಿಯಿಂದ ಬೃಹತ್ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿದ್ದು, ಪಟ್ಟಣದ ಆರ್.ಎಸ್ ದೊಡ್ಡಿ ಬಳಿಯ ಗೌರಿ ಶಂಕರ ಕಲ್ಯಾಣ ಮಂಟಪದಲ್ಲಿ ನಡೆಯಲಿದೆ. ಈ ಶಿಬಿರದಲ್ಲಿ 14 ಕ್ಕೂ ಆಸ್ಪತ್ರೆಯ 200ಕ್ಕೂ ವೈದ್ಯ ಸಿಬ್ಬಂದಿಗಳು ಭಾಗವಹಿಸಲಿದ್ದಾರೆ. ಈ ಕಾರ್ಯಕ್ರಮಕ್ಕೆ ಬಿಜೆಪಿ ಒಬಿಸಿ ಮೋಚಾದ ರಾಷ್ಟ್ರಧ್ಯಕ್ಷ ಲಕ್ಷ್ಮಣ್, ಉಪಾಧ್ಯಕ್ಷೆ ಅರುಣಾ ದೇವಿ ಹಾಗೂ ರಾಜ್ಯದ ಹಿರಿಯ ನಾಯಕರು ಆಗಮಿಸಲಿದ್ದಾರೆ. ಆಗಮಿಸುವ ಇವರನ್ನು ಪೂರ್ಣ ಕುಂಭಮೇಳದೊಂದಿಗೆ ಬರಮಾಡಿಕೊಳ್ಳಲಾಗುತ್ತದೆ. ಆದ್ದರಿಂದ ಪಕ್ಷದ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವುದರ ಮೂಲಕ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಮನವಿ ಮಾಡಿದರು. ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಸುಂದರ್, ಉಪಾಧ್ಯಕ್ಷ ಡಾ.ಎಸ್ ದತ್ತೇಶ್‍ಕುಮಾರ್, ಪ್ರಧಾನ ಕಾರ್ಯದರ್ಶಿ ಮಂಗಲ ಶಿವಕುಮಾರ್, ಮಾಜಿ ಶಾಸಕಿ ಪರಿಮಳ ನಾಗಪ್ಪ, ಒಬಿಸಿ ಮೋರ್ಚಾದ ಜಿಲ್ಲಾ ಸಂಯೋಜಕ ಜನಧ್ವನಿ ಬಿ.ವೆಂಕಟೇಶ್, ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯ ನೂರೊಂದು ಶೆಟ್ಟಿ, ಸೇವಾ ಸಂಚಾಲಕ ರಾಮಚಂದ್ರು, ವಿವಿಧ ಮಂಡಲದ ಅಧ್ಯಕ್ಷರು ಹಾಗೂ ಕಾರ್ಯಕರ್ತರು ಇದ್ದರು.
ಚಿತ್ರದುರ್ಗ : ದಶಕಗಳಿಂದ ಬರಗಾಲದ ಬೇಗೆಯಲ್ಲಿ ಬೆಂದ ಬಯಲುಸೀಮೆಗೆ ಭದ್ರಾ ಮೇಲ್ದಂಡೆ ಯೋಜನೆ ಹೊಸ ಭರವಸೆ ಮೂಡಿಸಿದೆ. ಅರಣ್ಯ ಇಲಾಖೆ…
ಭಾರತೀಯ ಚಿತ್ರರಂಗದ ಹಲವಾರು ಭಾಷೆಗಳಲ್ಲಿ ಸಹಜ ನಟನೆಯ ಪ್ರಸದ್ಧಿ ಪಡೆದು... ಮೇರುನಟರಾಗಿ ಕಲಾಸೇವೆಗಾಗಿ ತಮನ್ನು ತಾವು ಮುಡಿಪಿಟ್ಟು ಭಾರತೀಯ ಚಿತ್ರರಂಗದ…
ಜನನ ಹಾಗೂ ಮರಣ ಪ್ರಮಾಣ ಪತ್ರ ಪಡೆಯಲು ಜನರು ಮೈಸೂರು ಮಹಾ ನಗರ ಪಾಲಿಕೆಗೆ ಅರ್ಜಿ ಸಲ್ಲಿಸಿ ಪದೇ ಪದೇ…
ದೇಶದಾದ್ಯಂತ ಸಣ್ಣ ಪುಟ್ಟ ವ್ಯಾಪಾರಗಳಿಂದ ಹಿಡಿದು ದೇಶದ ಬಹುದೊಡ್ಡ ವ್ಯಾಪಾರ ವಹಿವಾಟಿನವರೆಗೆ ಯುಪಿಐ ಮೂಲಕವೇ ಹಣ ಪಾವತಿಸಲು ಕೇಂದ್ರ ಸರ್ಕಾರ…
ಡಾ. ಬಸವರಾಜ್ ಇಟ್ನಾಳ ಇತ್ತೀಚೆಗೆ ಬ್ರಿಕ್ಸ್ ಶೃಂಗ ಸಭೆ ದೆಹಲಿಯಲ್ಲಿ ನಡೆಯಿತು. ಬ್ರಿಕ್ಸ್ ದೇಶಗಳ ಪರಸ್ಪರ ಸಹಕಾರ ಮತ್ತು ಸ್ಥಳೀಯ…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಕಳೆದ ಹನ್ನೊಂದು ವರ್ಷಗಳಿಂದ ಆಡಳಿತ ನಡೆಸುತ್ತಿರುವ ಬಿಜೆಪಿ…