ಜಿಲ್ಲೆಗಳು

ಪ್ರಧಾನಿ ನರೇಂದ್ರ ಮೋದಿಯವರ ಹುಟ್ಟುಹಬ್ಬದ ಪ್ರಯುಕ್ತ ರಕ್ತದಾನ ಶಿಬಿರ

ಹನೂರು: ಪ್ರಧಾನಿ ನರೇಂದ್ರ ಮೋದಿ ಅವರು ಹಲವು ಜನಪರ ಕಾರ್ಯಕ್ರಮಗಳನ್ನು ಜಾರಿಗೊಳಿಸುವುದರ ಮೂಲಕ ಉತ್ತಮ ಆಡಳಿತ ನೀಡಿ ಜನತೆಯ ಮೆಚ್ಚುಗೆ ಪಾತ್ರರಾಗಿದ್ದಾರೆಯಲ್ಲದೇ ವಿಶ್ವ ನಾಯಕರೆನಿಸಿದ್ದಾರೆ ಎಂದು ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಡಾ. ದತ್ತೇಶ್‍ಕುಮಾರ್ ಬಣ್ಣಿಸಿದರು.

ತಾಲೂಕಿನ ರಾಮಾಪುರ ಗ್ರಾಮದ ಮಹದೇಶ್ವರ ಕಲ್ಯಾಣ ಮಂಟಪದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ 72ನೇ ಹುಟ್ಟು ಹಬ್ಬದ ಅಂಗವಾಗಿ ಏರ್ಪಡಿಸಿದ್ದ ರಕ್ತದಾನ ಶಿಬಿರದಲ್ಲಿ ಅವರು ಮಾತನಾಡಿದರು.

ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟು ಹಬ್ಬದ ಹಿನ್ನಲೆ ಬಿಜೆಪಿ ವತಿಯಿಂದ ಇಡೀ ದೇಶಾದ್ಯಂತ ಸೆ.17 ರಿಂದ ಅ.2ರವರೆಗೆ ಸೇವಾ ಪ್ರಾಕ್ಷಿಕೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಜನಧನ್ ಯೋಜನೆ, ಕೃಷಿ ಸಮ್ಮಾನ್, ಉಜ್ವಲ ಯೋಜನೆ ಸೇರಿದಂತೆ ಇನ್ನಿತರೆ ಜನಪ್ರಿಯ ಯೋಜನೆಗಳನ್ನು ಅನುಷ್ಠಾನಗೊಳಿಸುವುದರ ಮೂಲಕ ದೇಶದ ಜನತೆಗೆ ಉತ್ತಮ ಆಡಳಿತವನ್ನು ನೀಡಿದ್ದಾರೆ. ಅಲ್ಲದೇ ಕೋವಿಡ್ ಸಮಯದಲ್ಲಿ ಹೆಚ್ಚಿನ ಜಾವಬ್ದಾರಿಯನ್ನು ಹೊತ್ತು ದೇಶದ ಜನರಿಗೆ ಸೋಂಕು ತಗುಲದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸಿ ಉತ್ತಮ ಆರೋಗ್ಯ ಸೇವೆಯನ್ನು ಒದಗಿಸಿದ್ದು, ಇದುವರೆಗೂ 200 ಕೋಟಿ ಜನರಿಗೆ ಉಚಿತ ಕೋವಿಡ್ ಲಸಿಕೆ ನೀಡಿರುವುದು ಇವರ ಆಡಳಿತದ ಕಾರ್ಯ ವೈಖರಿಗೆ ಹಿಡಿದ ಕೈಗನ್ನಡಿ. ಆಗಾಗಿ ದೇಶಕ್ಕೆ ಮಾತ್ರ ಪ್ರಧಾನಿಯಲ್ಲ ಇಡೀ ವಿಶ್ವಕ್ಕೆ ನಾಯಕರು ಎಂದು ತಿಳಿಸಿದರು.

ಇದೇ ವೇಳೆ ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡಿದವರಿಗೆ ಶಾಲು, ಹಾರ ಹಾಕಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಬಿಜೆಪಿ ಮಂಡಲದ ಪ್ರಧಾನ ಕಾರ್ಯದರ್ಶಿಗಳಾದ ಮಂಜುನಾಥ್, ನವೀನ್ ಒಬಿಸಿ ಮೋರ್ಚಾದ ಅಧ್ಯಕ್ಷ ರವಿ, ಮುಖಂಡರಾದ ಶಿವಪ್ಪ ಮಾಸ್ಟರ್, ಅಶ್ವಥ್, ಚಾಂದ್, ನಾಗೇಂದ್ರಪ್ರಭು, ಕೃಷ್ಣಮೂರ್ತಿ, ಶಿವಕುಮಾರ್ ಹಾಗೂ ಕಾಮಗೆರೆ ಹೋಲಿಕ್ರಾಸ್ ಆಸ್ಪತ್ರೆ, ರೆಡ್‍ಕ್ರಾಸ್ ಸಂಸ್ಥೆಯ ವೈದ್ಯರು, ಶ್ರುಷೂಶಿಕಿಯರು ಹಾಗೂ ಇನ್ನಿತರರು ಉಪಸ್ಥಿತರಿದ್ದರು.

andolanait

Recent Posts

ದಿಢೀರ್‌ ಕುಸಿದುಬಿದ್ದ ಲೋಕಾಯುಕ್ತ ನಿ.ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ, ಆಸ್ಪತ್ರೆಗೆ ದಾಖಲು

ಬೆಂಗಳೂರು : ಕರ್ನಾಟಕದ ಲೋಕಾಯುಕ್ತ ನಿವೃತ್ತ ನ್ಯಾಯಮೂರ್ತಿ ಎನ್.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರೆ ಉಂಟಾಗಿ ಕುಸಿದು ಬಿದ್ದಿದ್ದು, ಆಸ್ಪತ್ರೆಗೆ…

51 mins ago

ರೋಹಿಣಿ ಸಿಂಧೂರಿ ವಿರುದ್ಧ ತನಿಖೆ : ಮಾಜಿ ಸಚಿವ ಸಾ.ರಾ.ಮಹೇಶ್‌ ಹೇಳಿದಿಷ್ಟು?

ಮೈಸೂರು : ಬಟ್ಟೆ ಬ್ಯಾಗ್ ಖರೀದಿಯಲ್ಲಿ ಆಗಿರುವ ಅವ್ಯವಹಾರದ ಬಗ್ಗೆ ತನಿಖೆ ನಡೆಸಲು ಹೈಕೋರ್ಟ್ ಅನುಮತಿ ನೀಡಿರುವ ಕುರಿತು ಪ್ರತಿಕ್ರಿಯಿಸಿದ…

2 hours ago

ಆರ್‌ಸಿಬಿ ವಿರುದ್ಧದ ಪಂದ್ಯಕ್ಕೆ ಧೋನಿ ಲಭ್ಯ?

ಬೆಂಗಳೂರು : ಮಹೇಂದ್ರ ಸಿಂಗ್ ಧೋನಿ ಅವರು ಚೆನ್ನೈ ಸೂಪರ್ ಕಿಂಗ್ಸ್ ಅಭಿಮಾನಿಗಳಲ್ಲಿ ಹೊಸ ಆಶಾಕಿರಣ ಮೂಡಿಸಿದ್ದಾರೆ. ಸ್ನಾಯು ಸೆಳೆತದಿಂದ…

2 hours ago

24 ಗಂಟೆಗಳಲ್ಲಿ ಅಮೆರಿಕದ ಎರಡು F-35 ಜೆಟ್‌ಗಳನ್ನು ಹೊಡೆದುರುಳಿಸಿದ್ದೇವೆ : ಇರಾನ್

ಟೆಹ್ರಾನ್ : ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಕಳೆದ 24 ಗಂಟೆಗಳಲ್ಲಿ ಅಮೆರಿಕದ ಎರಡು F-35 ಸ್ಟೆಲ್ತ್…

3 hours ago

ಬಿಜೆಪಿಯವರು ಸುಳ್ಳು ಹೇಳುವುದರಲ್ಲಿ ನಿಸ್ಸೀಮರು : ಮುಖ್ಯಮಂತ್ರಿ ಟೀಕೆ

ಬಾಗಲಕೋಟೆ : ಸೋಮಣ್ಣ ಬಿಜೆಪಿಯಲ್ಲಿ ಕೆಲಸವಿಲ್ಲದಿರುವ ಮಂತ್ರಿ. ಅವರಿಗೆ ಯಾವ ಕಡತವೂ ಹೋಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದರು.…

3 hours ago

ಹೊಸ ಸುಂಕ ಸಾರಿದ ಅಮೆರಿಕ, ಈ ಬಾರಿ ಯಾವುದರ ಮೇಲೆ ಟ್ರಂಪ್‌ ಕಣ್ಣು?

ವಾಷಿಂಗ್ಟನ್ : ಇರಾನ್ ವಿರುದ್ಧದ ಯುದ್ಧದ ನಡುವೆಯೂ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಹೊಸದಾಗಿ ಸುಂಕ ಸಮರ ಆರಂಭಿಸಿದ್ದಾರೆ.…

3 hours ago