ಚಾಮರಾಜನಗರ: ಕೊಳ್ಳೇಗಾಲ ತಾಲ್ಲೂಕಿನಲ್ಲಿ ಗೋಶಾಲೆ ತೆರೆಯದೆ ೪ ಕೋಟಿ ರೂ. ದುರುಪಯೋಗ ಮಾಡಿಕೊಂಡ ಅಂದಿನ ತಹಶೀಲ್ದಾರ್ ಕಾಮಾಕ್ಷಮ್ಮ ಅವರ ವಿರುದ್ದ ಕ್ರಮ ಕೈಗೊಳ್ಳದೆ ವಿಳಂಬ ಮಾಡಲಾಗುತ್ತಿದೆ ಎಂದು ಆರ್‌ಟಿಐ ಕಾರ್ಯಕರ್ತ ಆರ್.ಗೋವಿಂದರಾಜ್ ಆರೋಪಿಸಿದ್ದಾರೆ.
೨೦೧೬ ರಿಂದ ೨೦೧೭-೧೮ನೇ ಸಾಲಿನಲ್ಲಿ ಜಿಲ್ಲೆಯಲ್ಲೂ ಮಳೆಯಾಗದೆ ಬರ ಪರಿಸ್ಥಿತಿಯಿತ್ತು. ಆಗ ಕೊಳ್ಳೇಗಾಲ ತಾಲ್ಲೂಕಿನಲ್ಲಿ ಜಾನುವಾರುಗಳಿಗೆ ಗೋಶಾಲೆ ತೆರೆಯಲು, ಮೇವು ನಿಧಿ ಸ್ಥಾಪಿಸಲು ಮತ್ತು ಕುಡಿಯುವ ನೀರು ಪೂರೈಕೆ ರಾಜ್ಯ ಸರ್ಕಾರ ೪ ಕೋಟಿ ರೂ. ನೀಡಿತ್ತು ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಕಾಮಾಕ್ಷಮ್ಮ ಅವರು ಒಂದು ಗೋಶಾಲೆ ತೆರೆಯಲಿಲ್ಲ. ಸರ್ಕಾರದ ಹಣವನ್ನು ದುರುಪಯೋಗ ಮಾಡಿಕೊಂಡಿದ್ದರು. ಈ ಬಗ್ಗೆ ೨೦೨೧ರ ನವೆಂಬರ್ ೩೦ ರಂದು ಸೂಕ್ತ ದಾಖಲೆಗಳ ಜೊತೆ ಉಪ ವಿಭಾಗಾಧಿಕಾರಿಗಳಿಗೆ ದೂರು ನೀಡಲಾಗಿತ್ತು ಎಂದರು.
ಈ ಕುರಿತು ತನಿಖೆ ವಿಚಾರಣೆ ನಡೆಸಿದ ಉಪ ವಿಭಾಗಾಧಿಕಾರಿಗಳು ವರದಿಯನ್ನು ಜಿಲ್ಲಾಧಿಕಾರಿಗಳಿಗೆ ಮತ್ತು ಸರ್ಕಾರಕ್ಕೆ ಸಲ್ಲಿಸಿದ್ದರು. ಇಲ್ಲಿಯ ತನಕ ಯಾವುದೇ ಕ್ರಮ ವಹಿಸಿಲ್ಲ. ಈಗ ಕಾಮಾಕ್ಷಮ್ಮ ನಿವೃತ್ತರಾಗಿದ್ದಾರೆ. ಇನ್ನಾದರೂ ಕಾನೂನು ಕ್ರಮ ಜರುಗಿಸಬೇಕೆಂದು ಆಗ್ರಹಿಸಿದರು.
ದಸಂಸ ಮುಖಂಡರಾದ ಚಂದ್ರಶೇಖರ್, ಮಹೇಶ್, ಶ್ರೇಯಸ್ ಹಾಜರಿದ್ದರು.
ಕೆ.ಆರ್.ಪೇಟೆ : ತಾಲ್ಲೂಕಿನ ಬೂಕನಕೆರೆ ಹೋಬಳಿಯ ಮುದುಗೆರೆ ಗ್ರಾಮದ ಬಳಿ ರೈತರ ಸಾಕು ಪ್ರಾಣಿಗಳನ್ನು ತಿಂದು ಹಾಕುತ್ತಾ ರೈತರಿಗೆ ನಿತ್ಯ…
ಮೈಸೂರು : ವಿಶ್ವವಿಖ್ಯಾತ ಮೈಸೂರು ಶ್ರೀ ಚಾಮರಾಜೇಂದ್ರ ಮೃಗಾಲಯದಲ್ಲಿ ಚುರುಕಿನ ಚಟುವಟಿಕೆಯಿಂದ ಸದಾ ಸಂದರ್ಶಕರ ಗಮನ ಸೆಳೆಯುತ್ತಿದ್ದ ಸುಮಾರು ಸುಮಾರು…
ಮೈಸೂರು : ಗುರುವಾರ ಸಂಜೆ ಮೈಸೂರಿನ ಅಂಬಾವಿಲಾಸ ಅರಮನೆ ಮುಂಭಾಗ ಸಂಭವಿಸಿದ ಹಿಲೀಯಂ ಸಿಲಿಂಡರ್ ಸ್ಪೋಟ ಪ್ರಕರಣ ಸಂಬಂಧ ನಗರದ…
ಎಚ್.ಡಿ.ಕೋಟೆ : ತಾಲ್ಲೂಕಿನಲ್ಲಿ ಶೈಕ್ಷಣಿಕ ಪ್ರಗತಿಗೆ ಅಗತ್ಯವಾದ ಮಾದರಿ ಕಾರ್ಯಕ್ರಮಗಳನ್ನು ಹಗಲಿರುಳು ಎನ್ನದೆ ಶಿಕ್ಷಣ ಇಲಾಖೆಯವರು ನಡೆಸುತ್ತಿದ್ದಾರೆ ಎಂದು ಶಾಸಕ…
ಹನೂರು : ಕರ್ನಾಟಕದ ನಯಾಗಾರ ಎಂದೇ ಪ್ರಖ್ಯಾತಿ ಪಡೆದಿರುವ ಹೊಗೇನಕಲ್ ಜಲಪಾತ ನೋಡಲು ತಮಿಳುನಾಡಿನ ಭಾಗದಿಂದ ಪ್ರವಾಸಿಗರ ದಂಡೇ ಹರಿದುಬರುತ್ತಿದ್ದು,…
ಹೈದರಾಬಾದ್ : ಪುಷ್ಪ-2 ಸಿನಿಮಾ ವಿಶೇಷ ಪ್ರದರ್ಶನದ ವೇಳೆ ಉಂಟಾದ ಕಾಲ್ತುಳಿತ ಪ್ರಕರಣದಲ್ಲಿ ವರ್ಷದ ಬಳಿಕ ಇದೀಗ ಪೊಲೀಸರು ಕೋರ್ಟ್ಗೆ…