Mysore
24
overcast clouds

Social Media

ಶನಿವಾರ, 22 ಆಗಸ್ಟ್ 2026
Light
Dark

ಸಿಎಂ ಪರಿಹಾರ ನಿಧಿಯಿಂದ ಅನುದಾನ ಕೊಡಿಸಿದ ಸಂಸದ ಪ್ರತಾಪ್‌ ಸಿಂಹ

ಮೈಸೂರು: ವಿವಿಧ ಕಾಯಿಲೆಗಳಿಗೆ ತುತ್ತಾಗಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 17 ಮಂದಿ ರೋಗಿಗಳ ಚಿಕಿತ್ಸೆಗಾಗಿ ಸಂಸದ ಪ್ರತಾಪ್ ಸಿಂಹ ಅವರ ಶಿಫಾರಸ್ಸಿನ ಮೇರೆಗೆ ಮುಖ್ಯಮಂತ್ರಿ ಪರಿಹಾರ ನಿಧಿಯಡಿ 4,85,883 ರೂ.ಗಳನ್ನು ಬಿಡುಗಡೆ ಮಾಡಿಸಿದ್ದಾರೆ.
ವಿವಿಧ ಕಾಯಿಲೆಗೆ ತುತ್ತಾಗಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಹಣಕಾಸಿನ ಆಭಾವದಿಂದ ಚಿಕಿತ್ಸೆಗೆ ತಗಲುವ ವೆಚ್ಚವನ್ನು ಭರಿಸಲು ಸಾಧ್ಯವಾಗದ ಕಾರಣ ಸಂಸದ ಪ್ರತಾಪ್ ಸಿಂಹ ಅವರ ಮೊರೆ ಹೋದರು. ಇದಕ್ಕೆ ಕೂಡಲೇ ಸ್ಪಂದಿಸಿದ ಸಂಸದರು, ಅವರ ಚಿಕಿತ್ಸೆಗೆ ತಗಲುವ ವೆಚ್ಚವನ್ನು ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಭರಿಸುವ ವ್ಯವಸ್ಥೆ ಮಾಡಿದ್ದಾರೆ ಸಂಸದರ ಶಿಫಾರಸ್ಸಿನ ಮೇರೆಗೆ 17  ಮಂದಿ ರೋಗಿಗಳ ಚಿಕಿತ್ಸೆಗಾಗಿ ಮುಖ್ಯಮಂತ್ರಿ ಪರಿಹಾರ ನಿಧಿಯಡಿ ಬಿಡುಗಡೆಯಾದ 4,85,883 ರೂ.ಗಳ ಅನುದಾನದ ಅನುಮೋದನೆ ಪ್ರತಿಯನ್ನು ಸಂಸದ ಪ್ರತಾಪ್ ಸಿಂಹ ಅವರು ರೋಗಿಯ ಮನೆಯವರಿಗೆ ನೀಡಿ ಬಡ ಕುಟುಂಬಗಳಿಗೆ ನೆರವಾಗಿ ಚಿಕಿತ್ಸೆಯು ಯಶಸ್ವಿಯಾಗಲಿ ಎಂದು ಹಾರೈಸಿದ್ದಾರೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!