ಮೈಸೂರು: ವಿವಿಧ ಕಾಯಿಲೆಗಳಿಗೆ ತುತ್ತಾಗಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 17 ಮಂದಿ ರೋಗಿಗಳ ಚಿಕಿತ್ಸೆಗಾಗಿ ಸಂಸದ ಪ್ರತಾಪ್ ಸಿಂಹ ಅವರ ಶಿಫಾರಸ್ಸಿನ ಮೇರೆಗೆ ಮುಖ್ಯಮಂತ್ರಿ ಪರಿಹಾರ ನಿಧಿಯಡಿ 4,85,883 ರೂ.ಗಳನ್ನು ಬಿಡುಗಡೆ ಮಾಡಿಸಿದ್ದಾರೆ.
ವಿವಿಧ ಕಾಯಿಲೆಗೆ ತುತ್ತಾಗಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಹಣಕಾಸಿನ ಆಭಾವದಿಂದ ಚಿಕಿತ್ಸೆಗೆ ತಗಲುವ ವೆಚ್ಚವನ್ನು ಭರಿಸಲು ಸಾಧ್ಯವಾಗದ ಕಾರಣ ಸಂಸದ ಪ್ರತಾಪ್ ಸಿಂಹ ಅವರ ಮೊರೆ ಹೋದರು. ಇದಕ್ಕೆ ಕೂಡಲೇ ಸ್ಪಂದಿಸಿದ ಸಂಸದರು, ಅವರ ಚಿಕಿತ್ಸೆಗೆ ತಗಲುವ ವೆಚ್ಚವನ್ನು ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಭರಿಸುವ ವ್ಯವಸ್ಥೆ ಮಾಡಿದ್ದಾರೆ ಸಂಸದರ ಶಿಫಾರಸ್ಸಿನ ಮೇರೆಗೆ 17 ಮಂದಿ ರೋಗಿಗಳ ಚಿಕಿತ್ಸೆಗಾಗಿ ಮುಖ್ಯಮಂತ್ರಿ ಪರಿಹಾರ ನಿಧಿಯಡಿ ಬಿಡುಗಡೆಯಾದ 4,85,883 ರೂ.ಗಳ ಅನುದಾನದ ಅನುಮೋದನೆ ಪ್ರತಿಯನ್ನು ಸಂಸದ ಪ್ರತಾಪ್ ಸಿಂಹ ಅವರು ರೋಗಿಯ ಮನೆಯವರಿಗೆ ನೀಡಿ ಬಡ ಕುಟುಂಬಗಳಿಗೆ ನೆರವಾಗಿ ಚಿಕಿತ್ಸೆಯು ಯಶಸ್ವಿಯಾಗಲಿ ಎಂದು ಹಾರೈಸಿದ್ದಾರೆ.
ಮೈಸೂರು: ಸಕ್ಕರೆ ನಾಡು ಮಂಡ್ಯದಲ್ಲಿ ಇಂದಿನಿಂದ (ಡಿ.20) 87ನೇ ಕನ್ನಡ ಸಾಹಿತ್ಯ ಸಮ್ಮೇಳನ ಶುರುವಾಗಿದೆ. ಆದರೆ ಈ ಸಮ್ಮೇಳನವನ್ನು ಯಾವ…
ಮಂಡ್ಯ: ಹಾಸ್ಯ ಸಾಹಿತ್ಯ ಆಧುನಿಕ ಬದುಕಿನಗೆ ಔಷಧಿಯಾಗಿದೆ ಎಂದು ಪ್ರಾಧ್ಯಾಪಕ ಡಾ.ಜೆ.ಕರಿಯಪ್ಪ ಮಾಳಿಗೆ ಹೇಳಿದರು. 87ಅಖಿಲ ಭಾರತ ಕನ್ನಡ ಸಾಹಿತ್ಯ…
ಮಡಿಕೇರಿ: ಸಿ ಮತ್ತು ಡಿ ಭೂಮಿಗೆ ಸಂಬಂಧಿಸಿದಂತೆ ಕಂದಾಯ ಸಚಿವರು ಉನ್ನತ ಮಟ್ಟದ ಸಮಿತಿ ರಚನೆಗೆ ಮುಂದಾಗಿದ್ದು, ಸಮಸ್ಯೆ ಪರಿಹಾರವಾಗಲಿ…
ಬೆಂಗಳೂರು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಅಕ್ಷೇಪಾರ್ಹ ಪದ ಬಳಸಿದ್ದಾರೆ ಎಂಬ ಆರೋಪದ ಮೇಲೆ ಎಂಎಲ್ಸಿ ಸಿ.ಟಿ.ರವಿಯವರನ್ನು ಪೊಲೀಸರೇ ಕೊಲೆ…
ವಿರಾಜಪೇಟೆ: ಗೋಣಿಕೊಪ್ಪ-ಕೇರಳ ಹೆದ್ದಾರಿಯ ಬಿಟ್ಟಂಗಾಲ ಆಟೋ ನಿಲ್ದಾಣದ ಬಳಿ ಚಿರತೆ ಬೆಕ್ಕೊಂದು ಅಪಘಾತಕೀಡಾಗಿ ಸಾವನಪ್ಪಿದ ಘಟನೆ ಶುಕ್ರವಾರ ರಾತ್ರಿ 9…
ಮೈಸೂರು: ನಟ ದರ್ಶನ್ ಅವರು ಮೈಸೂರಿನ ತಿ.ನರಸೀಪುರ ಮುಖ್ಯರಸ್ತೆಯಲ್ಲಿರುವ ಕೆಂಪಯ್ಯನಹುಂಡಿ ಬಳಿಯ ತಮ್ಮ ಫಾರ್ಮ್ಹೌಸ್ನಲ್ಲಿ ವಾಸ್ತವ್ಯ ಹೂಡಿದ್ದಾರೆ. ಶುಕ್ರವಾರ ಇಲ್ಲಿಗ…