Mysore
22
overcast clouds

Social Media

ಮಂಗಳವಾರ, 30 ಜೂನ್ 2026
Light
Dark

ಮೂಡಿಗೆರೆ ಶಾಸಕರ ಮೇಲೆ ಆನೆ ಸಂತ್ರಸ್ತರಿಂದ ಹಲ್ಲೆ

ಚಿಕ್ಕಮಗಳೂರು: ಆನೆ ದಾಳಿಯಿಂದ ತತ್ತರಿಸಿದ ಗ್ರಾಮಸ್ಥರು ಮೂಡಿಗೆರೆ ಬಿಜೆಪಿ ಶಾಸಕ ಎಂ.ಪಿ ಕುಮಾರ ಸ್ವಾಮಿ ಅವರ ಮೇಲೆ ಹಲ್ಲೆ ನಡೆಸಿದ ಘಟನೆ ಭಾನುವಾರ ನಡೆದಿದೆ.

ಆನೆ ದಾಳಿಯ ನಿಯಂತ್ರಣಕ್ಕೆ ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿದ್ದ ಸ್ಥಳಕ್ಕೆ ಹೋಗಿದ್ದ ಶಾಸಕರು ಮತ್ತು ಗ್ರಾಮಸ್ಥರ ಮಧ್ಯೆ ವಾಗ್ವಾದ ನಡೆದಿತ್ತು. ಈ ಮಧ್ಯೆ ಕೆಲವರು ಶಾಸಕರ ಮೇಲೆ ಕೈ ಮಾಡಿದ್ದಾರೆ ಎನ್ನಲಾಗಿದೆ.

ಪೊಲೀಸರು ಲಾಠಿ ಬೀಸಿ ಉದ್ರಿಕ್ತ ಜನರನ್ನು ಚದುರಿಸಿದ್ದಾರೆ. ಶಾಸಕರನ್ನು ವಾಹನದತ್ತ ಕರೆ ತಂದು ರಕ್ಷಿಸಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಶಾಸಕರು ನನಗೆ ರಕ್ಷಣೆ ನೀಡಲು ಪೊಲೀಸರು ವಿಫಲರಾಗಿದ್ದಾರೆ ಎಂದು ದೂರಿದ್ದಾರೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!