ಜಿಲ್ಲೆಗಳು

ಮುಡ್ನಾಕೂಡು ಪ್ರಕಾಶ್ ಹೇಳಿಕೆಗೆ ಕುಲಗಾಣ ಮಹೇಶ್‌ ಟಾಂಗ್‌

ಗುಂಡ್ಲುಪೇಟೆ: ಕಾಂಗ್ರೆಸ್‌ ಪಕ್ಷದ ಮುಖಂಡ ಗಣೇಶ್‌ ಪ್ರಸಾದ್‌ ಅವರ ಬಗ್ಗೆ ಬಿಜೆಪಿ ಜಿಲ್ಲಾ ಎಸ್ಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ಮುಡ್ನಾಕೂಡು ಪ್ರಕಾಶ್ ಅವರು ಜನವಿರೋಧಿ ಎಂದು ಹೇಳಿಕೆಗಳನ್ನು ಪತ್ರಿಕೆಗಳಲ್ಲಿ ನೀಡಿದ್ದರು. ಈ ವಿಚಾರವಾಗಿ ಇಂದು ಚಾಮರಾಜನಗರ ಜಿಲ್ಲಾ ಸಾಮಾಜಿಕ ಜಾಲತಾಣ ವಿಭಾಗದ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾದ ಕುಲಗಾಣ ಮಹೇಶ್ ರವರು ಗುಂಡ್ಲುಪೇಟೆ ಕ್ಷೇತ್ರದ ಶಾಸಕ ನಿರಂಜನ್ ಕುಮಾರ್ ರವರ ಜನವಿರೋಧಿ ಶಾಸಕರು ಎಂದು ಕ್ಷೇತ್ರದ ಜನತೆ ಗೂತ್ತಿದೆ. ನೆನ್ನೆಯಷ್ಟೇ ಗಣೇಶ್ ಪ್ರಸಾದ್ ರವರ ವಿರುದ್ಧ ಪತ್ರಿಕೆ ಹೇಳಿಕೆ ನೀಡಿರುವ ಮುಡ್ನಾಕೂಡು ಪ್ರಕಾಶ್ ರವರೇ ಶಾಸಕರಾದ ನಿರಂಜನ್ ಕುಮಾರ್ ರವರು ಸಂಸದ ವಿ.ಶ್ರೀನಿವಾಸ ಪ್ರಸಾದ್ ರವರ ಹುಟ್ಟುಹಬ್ಬವನ್ನು ಅದ್ದೂರಿಯಾಗಿ ಮೂರು ನಾಲ್ಕು ವರ್ಷಗಳಿಂದ ಆಚರಿಸಿದ್ದಾರೆಯೇ ? ದಲಿತರಿಗೆ ಬಿಜೆಪಿಯ ಕೂಡುಗೆ ಎನು ? ಜನಪರವಾದ ಯಾವ ಅಭಿವೃದ್ಧಿ ಕೆಲಸಗಳನ್ನು ಮಾಡದೆ ಕೈಕಟ್ಟಿ ಕುಳಿತಿರುವ ಶಾಸಕರ ಬಗ್ಗೆ ನೀವೇಕೆ ದ್ವನಿ ಎತ್ತುತ್ತಿಲ್ಲಾ.

ಯಾವ ಅಧಿಕಾರವೂ ಇಲ್ಲದೆ ಜನಪರವಾಗಿ ಜನಸೇವೆ ಮಾಡುತ್ತಿರುವ ಯುವ ಮುಖಂಡರಾದ ಗಣೇಶ್ ಪ್ರಸಾದ್ ರವರ ಬಗ್ಗೆ ಮಾತನಾಡುವ ನೈತಿಕತೆ ನಿಮಗೆ ಇದೀಯಾ ? 

ಎಂದು ಪ್ರಶ್ನಿಸುವ ಮೂಲಕ ಪ್ರಕಾಶ್‌ ಅವರ ಹೇಳಿಕೆಗೆ ಟಾಂಗ್‌ ನೀಡಿದ್ದಾರೆ.

 

andolanait

Recent Posts

ಹುಲಿಕಲ್ ಘಾಟ್‌ನಲ್ಲಿ ಗುಡ್ಡ ಕುಸಿತ ; ಮೂವರು ಕಾರ್ಮಿಕರು ಸಾವು.

ಶಿವಮೊಗ್ಗ : ಜಿಲ್ಲೆಯ ಹೊಸನಗರ ತಾಲೂಕಿನ ಹುಲಿಕಲ್ ಘಾಟ್ ಪ್ರದೇಶದಲ್ಲಿ ರಸ್ತೆ ಅಗಲೀಕರಣ ಮತ್ತು ತಡೆಗೋಡೆ ದುರಸ್ತಿ ಕಾಮಗಾರಿ ನಡೆಯುತ್ತಿರುವಾಗ…

58 mins ago

ಇಂದಿನಿಂದ ಟೋಲ್‌ಗಳಲ್ಲಿ ಕ್ಯಾಷ್‌ ಇಲ್ಲ ; ಡಿಜಿಟಲ್‌ ಪಾವತಿ ಮಾತ್ರ.

ಬೆಂಗಳೂರು : ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯದ ನಿರ್ಧಾರದಂತೆ, ಇಂದಿನಿಂದ ಎಲ್ಲಾ ರಾಷ್ಟ್ರೀಯ ಹೆದ್ದಾರಿ ಟೋಲ್ ಪ್ಲಾಜಾಗಳಲ್ಲಿ ನಗದು…

2 hours ago

ಓದುಗರ ಪತ್ರ: ಫಲಪ್ರದವಾಗಲಿ ಮಾತುಕತೆ!

ಕೊನೆಗೂ ಘೋಷಣೆಯಾಗಿದೆ ತಾತ್ಕಾಲಿಕ ಕದನ ವಿರಾಮ ತೆರೆಬಿದ್ದಿದೆ ಕೊಲ್ಲಿ ಯುದ್ಧಕೆ ನಿಟ್ಟುಸಿರು ಬಿಟ್ಟಿದೆ ಜನಜಗ! ಸಿಟ್ಟು ಸೆಡವು ಬದಿಗಿರಿಸಿ ನಡೆಯಲಿ…

5 hours ago

ಓದುಗರ ಪತ್ರ: ಆಟೋ ಗ್ಯಾಸ್ ಅಭಾವ ಕೃತಕವೋ? ನೈಜವೋ?

ಕೊಲ್ಲಿ ಯುದ್ಧದ ನೆಪದಲ್ಲಿ ಬಂಡವಾಳಶಾಹಿಗಳು  ಕೆಜಿಗೆ ರೂ. ೮೯ ಇದ್ದ  ಆಟೋ ಗ್ಯಾಸ್ ಗ್ಯಾಸ್ ಅನ್ನು ರೂ. ೧೭೦ಕ್ಕೆ ಮಾರುತ್ತಾ…

5 hours ago

ಓದುಗರ ಪತ್ರ: ಯುದ್ಧ ಪೂರ್ಣ ನಿಲ್ಲಲಿ, ಶಾಂತಿ ನೆಲೆಸಲಿ

ಇರಾನ್ ಮೇಲೆ ಇಸ್ರೇಲ್-ಅಮೆರಿಕ ಕಳೆದ ೪೦ ದಿನಗಳಿಂದ ನಡೆಸುತ್ತಿದ್ದ ಯುದ್ಧಕ್ಕೆ   ಅಲ್ಪ ವಿರಾಮವನ್ನು ಘೋಷಿಸಲಾಗಿದೆ.  ಈ  ಯುದ್ಧದಿಂದಾಗಿ ಜಾಗತಿಕ ಆರ್ಥಿಕತೆಯ…

5 hours ago

ಓದುಗರ ಪತ್ರ: ಆರೋಗ್ಯ ಕೇಂದ್ರಕ್ಕೆ ಆಂಬ್ಯುಲೆನ್ಸ್  ಸೌಲಭ್ಯ ಕಲ್ಪಿಸಿ

ಮೈಸೂರು ಜಿಲ್ಲೆಯ ಸರಗೂರನ್ನು ತಾಲ್ಲೂಕು ಕೇಂದ್ರವನ್ನಾಗಿ ಘೋಷಿಸಲಾಗಿದ್ದರೂ ಸರಗೂರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ೧೦೮ ಆಂಬ್ಯುಲೆನ್ಸ್ ಸೌಲಭ್ಯವಿಲ್ಲದೇ ತುರ್ತು ಸಂದರ್ಭದಲ್ಲಿ…

5 hours ago