ಜಿಲ್ಲೆಗಳು

ಮಾಜಿ ಐಬಿ ಅಧಿಕಾರಿ ಕೊಲೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್

ಚಾಮುಂಡಿ ತಪ್ಪಲಿನಲ್ಲಿ ಆರ್. ಎನ್.ಕುಲಕರ್ಣಿ ಅಂತ್ಯಕ್ರಿಯೆ

ಮೈಸೂರು: ಮಾನಸಗಂಗೋತ್ರಿ ಕ್ಯಾಂಪಸ್ ನಲ್ಲಿ ಅಪರಿಚಿತರಿಂದ ಕೊಲೆಗೀಡಾಗಿರುವ ಕೇಂದ್ರ ಗುಪ್ತಚರ ಇಲಾಖೆಯ ನಿವೃತ್ತ ಅಧಿಕಾರಿ, ಟಿ.ಕೆ. ಲೇ ಔಟ್ ನಿವಾಸಿ ಆರ್. ಎನ್.ಕುಲಕರ್ಣಿ ಅವರ ಅಂತ್ಯಕ್ರಿಯೆ ಸೋಮವಾರ ಬೆಳಿಗ್ಗೆ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿರುವ ಹರಿಶ್ಚಂದ್ರ ಘಾಟ್ನಲ್ಲಿ ನೆರವೇರಿತು.
ಈ ನಡುವೆ ಕೊಲೆ ಪ್ರಕರಣದ ಸಂಬಂಧ ವಶಕ್ಕೆ ಪಡೆದಿರುವ ಮೂವರ ವಿಚಾರಣೆ ಮುಂದುವರಿದಿದೆ. ಪೊಲೀಸರು ಬೇರೆ ಬೇರೆ ಆಯಾಮಗಳಲ್ಲಿ ತನಿಖೆ ನಡೆಸುತ್ತಿದ್ದಾರೆ. ಕುಲಕರ್ಣಿ ಅವರು ಭಾರತದಲ್ಲಿ ಭಯೋತ್ಪಾದನೆ ಹೆಚ್ಚುತ್ತಿರುವ ಬಗ್ಗೆ ಪುಸ್ಕಕವೊಂದನ್ನು ಬರೆದಿದ್ದು ಇದರಲ್ಲಿ ಜಿಹಾದ್ ಬಗ್ಗೆಯೂ ಉಲ್ಲೇಖವಿದೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿಯೂ ತನಿಖೆಯ ಜಾಡು ಮುಂದುವರಿದಿದೆ. Sins of National Conscience ಮತ್ತು Facets of Terrorism in India ಪುಸ್ತಕದಲ್ಲಿ ಅವರು ತಮ್ಮ ವೃತ್ತಿ ಅನುಭವಗಳನ್ನೂ ದಾಖಲಿಸಿದ್ದರು. ಎರಡನೇ ಪುಸ್ತಕವನ್ನು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮೂರು ವರ್ಷಗಳ ಹಿಂದಷ್ಟೇ ಬಿಡುಗಡೆ ಮಾಡಿದ್ದರು.

ಶುಕ್ರವಾರ ಸಂಜೆ ಗಂಗೋತ್ರಿ ಆವರಣದಲ್ಲಿ ನಡೆದ ಅಪಘಾತದಲ್ಲಿ ಮೃತಪಟ್ಟಿದ್ದರು. ಶನಿವಾರ ಬೆಳಿಗ್ಗೆ 8.45ರ ಸುಮಾರಿನಲ್ಲಿ ಕುಲಕರ್ಣಿ ಅವರ ಅಳಿಯ, ಇದು ಅಪಘಾತವಲ್ಲ, ಕೊಲೆ. ಹತ್ಯೆ ಮಾಡುವ ಉದ್ದೇಶದಿಂದಲೇ ಅಪಘಾತ ಮಾಡಲಾಗಿದೆ ಎಂದು ಜಯಲಕ್ಷ್ಮೀಪುರಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಭಾರತೀಯ ದಂಡ ಸಂಹಿತೆ 302 ರಡಿ ಪ್ರಕರಣ ದಾಖಲಾಗಿತ್ತು. ಮರಣೋತ್ತರ ಪರೀಕ್ಷೆಯ ನಂತರ ಶವವನ್ನು ಕುಟುಂಬದವರಿಗೆ ಹಸ್ತಾಂತರಿಸಲಾಗಿತ್ತು. ಆದರೆ, ಮಗ ರೋಹನ್ ಕುಲಕರ್ಣಿ ಮತ್ತು ಮಗಳು ಪರಿಣಿತಾ ಕುಲಕರ್ಣಿ ಅವರು ವಿದೇಶದಿಂದ ಬರಬೇಕಿದ್ದರಿಂದ ಶವವನ್ನು ಖಾಸಗಿ ಆಸ್ಪತ್ರೆಯ ಶವಾಗಾರದಲ್ಲಿ ಇಡಲಾಗಿತ್ತು. ಭಾನುವಾರ ರಾತ್ರಿ ಇಬ್ಬರೂ ಮೈಸೂರಿಗೆ ಬಂದ ಹಿನ್ನೆಲೆಯಲ್ಲಿ ಸೋಮವಾರ ಬೆಳಿಗ್ಗೆ 8 ಗಂಟೆ ಸುಮಾರಿಗೆ ಶವವನ್ನು ಮನೆಗೆ ತಂದು, ಸುಮಾರು ಬೆಳಗ್ಗೆ 9.30ರವರೆಗೂ ಅಂತಿಮ ದರ್ಶನಕ್ಕೆ ಇಡಲಾಗಿತ್ತು. ಬಳಿಕ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿರುವ ಹರಿಶ್ಚಂದ್ರ ಘಾಟ್ ಚಿತಾಗಾರದಲ್ಲಿ ಅಂತ್ಯಕ್ರಿಯೆ ನಡೆಸಲಾಯಿತು.

andolanait

Recent Posts

ಬಿಜೆಪಿ ಮುಖಂಡ ರಘು ಕೌಟಿಲ್ಯ ವಿರುದ್ಧ ಲೋಕಾಯುಕ್ತಕ್ಕೆ ದೂರು

ಮೈಸೂರು: ಕಾನೂನು ಬಾಹಿರವಾಗಿ ಸಿ.ಎ ನಿವೇಶನ ಪಡೆದಿದ್ದಾರೆ ಎಂದು ಆರೋಪಿಸಿ ಬಿಜೆಪಿ ಮುಖಂಡ ರಘು ಕೌಟಿಲ್ಯ ವಿರುದ್ಧ ನಾಗೇಂದ್ರ ಎಂಬುವವರು…

15 mins ago

ಕಪಿಲಾ ನದಿಗೆ ಮತ್ತೊಂದು ಸೇತುವೆ

ನಂಜನಗೂಡು: ವರುಣ ಕ್ಷೇತ್ರ ಹಾಗೂ ನಂಜನಗೂಡು ವಿಧಾನಸಭಾ ಕ್ಷೇತ್ರವನ್ನು ಸಂಪರ್ಕಿಸಲು ಕಪಿಲಾ ನದಿಗೆ ಮತ್ತೊಂದು ಸೇತುವೆ ಮಂಜೂರಾಗಿದೆ. ತಾಲ್ಲೂಕಿನ ನಂಜನಗೂಡು-ಹುಲ್ಲಹಳ್ಳಿ…

38 mins ago

ಮುಡಾ ಕೇಸ್‌ನಲ್ಲಿ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿಗೆ ಸಂಕಷ್ಟ

ಮೈಸೂರು: ಮೈಸೂರು ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಅವರಿಗೆ ಭಾರೀ ಸಂಕಷ್ಟ ಎದುರಾಗಿದೆ ಎಂಬ ಮಾಹಿತಿ…

43 mins ago

ಮೆಟ್ರಿಕ್‌ ನಂತರದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

ಮೈಸೂರು: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಮೆಟ್ರಿಕ್ ನಂತರದ ಕೋರ್ಸ್‌ಗಳಾದ ಸ್ನಾತಕೋತ್ತರ ಪದವಿ, ವೃತ್ತಿಪರ ಪದವಿ ಮತ್ತು ವೃತ್ತಿಪರ…

1 hour ago

ನಿಜ್ಜರ್ ಹತ್ಯೆ ಪ್ರತಿಧ್ವನಿ-ಕೆನಡಾ ಭಾರತೀಯರಲ್ಲಿ ಆತಂಕ

ಅಮಿತ್ ಶಾ, ಅಜಿತ್‌ ದೋವಲ್ ಮೇಲೆಯೂ ಆರೋಪ ಡಿ.ವಿ.ರಾಜಶೇಖರ ಖಾಲಿಸ್ತಾನ್ ಉಗ್ರವಾದಿ ನಾಯಕ ಹರದೀಪ್‌ ಸಿಂಗ್ ನಿಜ್ಜರ್ ಹತ್ಯೆಯ ನಂತರದ…

1 hour ago

ಸೈಕಲ್ ಎಂಬ ಮಾಯಾಂಗನೆಯನೇರಿ..!

ಮೂಲ : ಪೂಜ ಹರೀಶ್‌, ಮೈಸೂರು ಅನುವಾದ: ಎನ್.ನರಸಿಂಹಸ್ವಾಮಿ, ನಾಗಮಂಗಲ ಜೀವನ ಒಂದು ಸೈಕಲ್ ಸವಾರಿಯಂತೆ, ಆಯ ತಪ್ಪದಿರಲು ಮುಂದೆ…

1 hour ago