ಚಾಮುಂಡಿಬೆಟ್ಟ ಸೇರಿ ಹಲವೆಡೆ ಬಿಗಿ ಪೊಲೀಸ್ ಬಂದೋಬಸ್ತ್
ಮೈಸೂರು: ದಸರಾ ಮಹೋತ್ಸವಕ್ಕೆ ಚಾಲನೆ ನೀಡಲಿರುವ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸೆ.೨೬ರಂದು ಸೋಮವಾರ ಹೊಸದಿಲ್ಲಿಯ ಪಾಲಂ ವಿಮಾನ ನಿಲ್ದಾಣದಿಂದ ಮೈಸೂರಿಗೆ ನೇರವಾಗಿ ಆಗಮಿಸಲಿದ್ದಾರೆ. ರಾಷ್ಟ್ರಪತಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಸಾಂಸ್ಕೃತಿಕ ನಗರಿಗೆ ಮೊದಲ ಬಾರಿಗೆ ಆಗಮಿಸುತ್ತಿರುವ ಅವರನ್ನು ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಗಣ್ಯರು ಸ್ವಾಗತಿಸಲಿದ್ದಾರೆ.
೨೬ರಂದು ಬೆಳಿಗ್ಗೆ ೫.೫೦ಕ್ಕೆ ರಾಷ್ಟ್ರಪತಿ ಭವನದಿಂದ ಹೊರಟು ೬.೦೫ಕ್ಕೆ ಪಾಲಂ ವಿಮಾನ ನಿಲ್ದಾಣ ತಲುಪಲಿದ್ದಾರೆ. ೬.೧೫ಕ್ಕೆ ಹೊರಟು ೯ ಗಂಟಗೆ ಮೈಸೂರು ವಿಮಾನ ನಿಲ್ದಾಣಕ್ಕೆ ಬಂದಿಳಿಯಲಿದ್ದಾರೆ. ೯.೧೦ಕ್ಕೆ ವಿಮಾನ ನಿಲ್ದಾಣದಿಂದ ಹೊರಟು ೯.೩೦ಕ್ಕೆ ಚಾಮುಂಡೇಶ್ವರಿ ದೇವಸ್ಥಾನ ತಲುಪಲಿದ್ದಾರೆ. ನಂತರ, ೨೦ ನಿಮಿಷಗಳ ಕಾಲ ಚಾಮುಂಡೇಶ್ವರಿ ದೇವಾಲಯದಲ್ಲಿ ಇರಲ್ಲಿದ್ದಾರೆ. ೯.೫೦ಕ್ಕೆ ದೇವಸ್ಥಾನದಿಂದ ಹೊರಟು ೯.೫೫ಕ್ಕೆ ವೇದಿಕೆಯನ್ನೇರಲಿದ್ದಾರೆ. ೧೦ರಿಂದ ೧೦.೪೫ರ ವೇಳೆ ನಾಡಹಬ್ಬಕ್ಕೆ ಚಾಲನೆ ನೀಡಲಿರುವ ರಾಷ್ಟ್ರಪತಿಗಳು ೪೫ ನಿಮಿಷಗಳ ಕಾಲ ಸಮಾರಂಭದಲ್ಲಿ ಹಾಜರಿರುತ್ತಾರೆ. ೧೦.೪೫ಕ್ಕೆ ಚಾಮುಂಡಿಬೆಟ್ಟದಿಂದ ಹೊರಟು ೧೧.೦೫ಕ್ಕೆ ಮೈಸೂರು ವಿಮಾನ ನಿಲ್ದಾಣ ತಲುಪಲಿದ್ದಾರೆ. ಬಳಿಕ ಜಿಲ್ಲಾಡಳಿತದಿಂದ ಬೀಳ್ಕೊಡುಗೆ ಸ್ವೀಕರಿಸಿ ೧೧.೧೫ಕ್ಕೆ ವಿಶೇಷ ವಿಮಾನದಲ್ಲಿ ಹುಬ್ಬಳ್ಳಿ ವಿಮಾನ ನಿಲ್ದಾಣ ತಲುಪಲಿದ್ದಾರೆ.
ಬೆಂಡರವಾಡಿ ಕೆರೆಗೆ ಹಾರಿ ಮಂಡ್ಯ ಜಿಲ್ಲೆಯ ವ್ಯಕ್ತಿ ಆತ್ಮಹತ್ಯೆ ಚಾಮರಾಜನಗರ: ಜೀವನದಲ್ಲಿ ಜಿಗುಪ್ಸೆಗೊಂಡು ವ್ಯಕ್ತಿಯೊಬ್ಬರು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ…
ಹೈದರಾಬಾದ್: ತಮಿಳುನಾಡು ಮಾಜಿ ಸಿಎಂ ಜಯಲಲಿತಾ ಅವರ ಹೈದರಾಬಾದ್‌ನಲ್ಲಿ ಅವರ ಮನೆಗೆ ಅಧಿಕಾರಿಗಳು ಬೀಗ ಹಾಕಿದ್ದಾರೆ. 2016ರಲ್ಲಿ ನಿಧನರಾದ ಜಯಲಲಿತಾ…
ಬೆಂಗಳೂರು: ಎರಡು ಕ್ಷೇತ್ರಗಳ ಉಪಚುನಾವಣೆಯಲ್ಲಿ ಬಿಜೆಪಿ ಗೆಲುವು ಪಕ್ಕಾ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ…
ಬೆಂಗಳೂರು: ಇಲ್ಲಿನ ಯಲಹಂಕ ಠಾಣೆ ಪೊಲೀಸರು, ಸುಮಾರು 2 ಕೋಟಿ ರೂ ಮೌಲ್ಯದ ಡ್ರಗ್ಸ್ ಜಪ್ತಿ ಮಾಡಿದ್ದು, ನೈಜೀರಿಯಾ ಮೂಲದ…
ಕೋಲ್ಕತ್ತಾ: ಪಶ್ಚಿಮ ಬಂಗಾಳ ಚುನಾವಣೆಗೆ ದಿನಗಣನೆ ಆರಂಭವಾಗಿರುವ ಬೆನ್ನಲ್ಲೇ ಭಾರತೀಯ ಟೆನಿಸ್ ಐಕಾನ್ ಲಿಯಾಂಡರ್ ಪೇಸ್ ಇಂದು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.…
ಬೆಂಗಳೂರು: ಖಾಸಗಿ ಶಾಲೆಗಳು ಪರೀಕ್ಷೆಗಳು ಮುಗಿಯುತ್ತಿದ್ದಂತೆಯೇ 2026-27ನೇ ಸಾಲಿನ ಶುಲ್ಕವನ್ನು 5-10%, ಮತ್ತೆ ಕೆಲವು 10-15% ವರೆಗೆ ಏರಿಕೆ ಮಾಡಿವೆ.…