ಮೈಸೂರು: ಪ್ರೌಢಶಾಲಾ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ಕಿರುಕುಳ ಆರೋಪಕ್ಕೆ ಸಂಬಂಧಪಟ್ಟಂತೆ ಚಿತ್ರದುರ್ಗ ಮುರುಘಾ ಮಠದ ಶಿವಮೂರ್ತಿ ಮುರುಗ ಶರಣರನ್ನು ಬಂಧಿಸಿರುವ ವಿಚಾರಕ್ಕೆ ಸಂಬಂಧಪಟ್ಟಂತೆ ಒಡನಾಡಿ ಸಂಸ್ಥೆಯ ನಿರ್ದೇಶಕರಾದ ಸ್ಟ್ಯಾನ್ಲಿ ಅವರು ಮಾತನಾಡಿದ್ದಾರೆ.
ಇದು ಎರಡು ಜನ ಮಕ್ಕಳದ್ದು ಸಮಸ್ಯೆ ಅಲ್ಲ 12 ವರ್ಷಗಳ ಹಿಂದೆಯೇ ದೊಡ್ಡ ಪತ್ರಕರ್ತರು ಈ ಶರಣರ ಬಗ್ಗೆ ಬರೆಯುತ್ತಾರೆ. ಮಠದಲ್ಲೇ ವಾತಾವರಣದಲ್ಲಿ ಪತ್ರಿಕೆ ನಡೆಸುವಂತಹ ಕರೆದ ಪತ್ರಕರ್ತರ ನಮಗೆ ತಿಳಿಸಿದ್ದಾರೆ. ರಾತ್ರಿಯಲ್ಲಿ ಬೇರೆ ಬೇರೆ ಚಟುವಟಿಕೆಗಳನ್ನು ನಡೆಸುತ್ತಿದ್ದನ್ನು ನೋಡಿದ್ದೇವೆ ಅಂತ ಬರೆದಿದ್ದಾರೆ. ಶರಣರೆ ಮಾನ ನಷ್ಟ ಮೊಕದ್ದಮೆ ಹೂಡುತ್ತಾರೆ. ನ್ಯಾಯಾಧೀಶರು ಕರೆದರೂ ಶರಣರು ಹೋಗುವುದಿಲ್ಲ. ಹೈಕೋರ್ಟಿನಲ್ಲಿ ಕೇಸು ಖುಲಾಸೆ ಆಗುತ್ತದೆ. 12 ವರ್ಷದಿಂದ ಎಷ್ಟು ನಡೆದಿರಬಹುದು, ಅದಕ್ಕಿಂತಲೂ ಎಷ್ಟು ನಡೆದಿರಬಹುದು. ಕಣ್ಣೀರು ಹಾಕಿದವರಿಗೆ ನ್ಯಾಯ ಸಿಗಬೇಕು. ಸಮುದ್ರದ ಮಂಜುಗಡ್ಡೆ ತೇಲುವುದರ ತನಿಖೆ ಆಗಬೇಕು. ಇದು ಜನರ ಕ್ಷಿಪ್ರ ಹೋರಾಟಕ್ಕೆ ಸಿಕ್ಕ ಜಯ. ಇದು ಇಬ್ಬರು ಹೆಣ್ಣು ಮಕ್ಕಳಿಗೆ ಸಿಕ್ಕ ಸಾಂತ್ವಾನ ಅಲ್ಲ, ಇನ್ನಷ್ಟು ಹೆಣ್ಣು ಮಕ್ಕಳಿಗೆ ನ್ಯಾಯ ಸಿಗಬೇಕಿದೆ ಎಂದು ಸ್ಟ್ಯಾನ್ಲಿ ಅವರು ಪ್ರತಿಕ್ರಿಯೆ ವ್ಯಕ್ತಪಡಿಸಿದ್ದಾರೆ.
ಬೆಂಗಳೂರು: ಪೈರಸಿ ವಿರುದ್ಧ ನವರಸ ನಾಯಕ ಜಗ್ಗೇಶ್ ಸಮರ ಸಾರಿದ್ದು, ಕೋಣ ಸಿನಿಯಾ ಪೈರಸಿ ವಿರುದ್ಧ ಚಂದ್ರಾ ಲೇಔಟ್ ಪೊಲೀಸ್…
ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ಹೊಸ ವರ್ಷ ಆಚರಣೆಗೆ ಸರ್ವ ರೀತಿಯಲ್ಲೂ ಸಜ್ಜಾಗಿದ್ದು, ಪೊಲೀಸ್ ಇಲಾಖೆ ಹದ್ದಿನ ಕಣ್ಣಿಟ್ಟಿದೆ. ಪ್ರಮುಖವಾಗಿ…
ಕೇರಳ(ತಿರುವನಂತಪುರ): ವೈವಿದ್ಯತೆಯ ನಡುವೆ ಮನುಷ್ಯರು ಒಗ್ಗಟ್ಟಾಗಿ ಬಾಳುವ ಸಹೃದಯಿ ಭಾರತ ನಿರ್ಮಾಣ ನಾರಾಯಣಗುರುಗಳ ಗುರಿಯಾಗಿತ್ತು. ನೈತಿಕತೆ ಇಲ್ಲದ ಅಹಂಕಾರದ ಭಾಷೆಯಲ್ಲಿ…
ಮೈಸೂರು: ದೇಶದೊಳಗೆ ಅಕ್ರಮವಾಗಿ ನುಸುಳುವವರ ಸಂಖ್ಯೆ ಹೆಚ್ಚಾಗಿದ್ದು, ಕರ್ನಾಟಕದಲ್ಲಿಯೂ ಬಾಂಗ್ಲಾದೇಶದ ಪ್ರಜೆಗಳು ಉದ್ಧಟತನ ತೋರುತ್ತಿದ್ದಾರೆ ಎಂದು ಸಂಸದ ಯದುವೀರ್ ಕೃಷ್ಣದತ್ತ…
ಬೆಂಗಳೂರು: ಹೊಸ ವರ್ಷಾಚರಣೆಯ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಪ್ರವಾಸಿ ತಾಣಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುವ ಹಿನ್ನೆಲೆಯಲ್ಲಿ…
ಮೈಸೂರು: ಹೊಸ ವರ್ಷದ ಸಂಭ್ರಮದ ಹಿನ್ನೆಲೆಯಲ್ಲಿ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಅಕ್ರಮ ಮದ್ಯ ಹಾಗೂ ಮಾದಕ ವಸ್ತುಗಳ ಮಾರಾಟ ತಡೆಯಲು…