Mysore
34
scattered clouds

Social Media

ಗುರುವಾರ, 27 ಮಾರ್ಚ್ 2025
Light
Dark

ಮುರುಘಾ ಶ್ರೀ ಬಂಧನ – ನಿರಂತರ ಹೋರಾಟಕ್ಕಿದು ಸಣ್ಣ ಜಯವಷ್ಟೇ : ಪರಶುರಾಂ

ಮೈಸೂರು : ಪ್ರೌಢಶಾಲಾ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ಕಿರುಕುಳ ಆರೋಪಕ್ಕೆ ಸಂಬಂಧಪಟ್ಟಂತೆ ಚಿತ್ರದುರ್ಗ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರನ್ನು ಬಂಧಿಸಿರುವ ವಿಚಾರಕ್ಕೆ ಸಂಬಂಧಪಟ್ಟಂತೆ ಒಡನಾಡಿ ಸಂಸ್ಥೆಯ ಸಂಚಾಲಕರಾದ ಪರಶುರಾಂ ಅವರು ತಮ್ಮ ಪ್ರತಿಕ್ರಿಯೆ ವ್ಯಕ್ತಪಡಿಸಿದ್ದಾರೆ.

ಇಲ್ಲಿ ಇಬ್ಬರು ವಿದ್ಯಾರ್ಥಿನಿಯರಷ್ಟೇ ಲೈಂಗಿಕ ಕಿರುಕುಳಕ್ಕೆ ಒಳಗಾಗಿಲ್ಲ, ಬದಲಾಗಿ ಆ ಮಠದ ವಸತಿ ನಿಲಯದಲ್ಲಿನ ಹಲವಾರು ವಿದ್ಯಾರ್ಥಿನಿಯರು ಈ ಕಿರುಕುಳಕ್ಕೆ ಒಳಗಾಗಿದ್ದಾರೆ ಅವರು ಸಾಕಷ್ಟು ನೊಂದಿದ್ದಾರೆ. ಪ್ರಕರಣವು ಮತ್ತಷ್ಟು ಸಮಗ್ರ ತನಿಖೆಗೆ ಒಳಪಡಬೇಕು. ಈ ಬಂಧನ ನಿರಂತರ ಹೋರಾಟಕ್ಕೆ ಸಿಕ್ಕಿರುವ ಸಣ್ಣ ಜಯವಷ್ಟೇ ಎಂದು ತಮ್ಮ ಪ್ರತಿಕ್ರಿಯೆ ವ್ಯಕ್ತಪಡಿಸಿದ್ದಾರೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ