ಮೈಸೂರು : ಮೈಸೂರು ವಿವಿಯ ಹಂಗಾಮಿ ಕುಲಪತಿಯಾಗಿ ನೇಮಕವಾಗಿರುವ ವಿವಿಯ ಕಲಾ ನಿಕಾಯದ ಡೀನ್, ರಾಜಕೀಯ ಶಾಸ್ತ್ರ ಸಾರ್ವಜನಿಕ ಆಡಳಿತ ವಿಭಾಗದ ಪ್ರಾಧ್ಯಾಪಕ ಮುಜಾಫರ್ ಅಸಾದಿ ಅವರಿಗೆ ಪ್ರಭಾರ ಕುಲಪತಿ ಪ್ರೊ.ಎಚ್.ರಾಜಶೇಖರ್ ಅವರು ಸಂವಿಧಾನದ ಪ್ರಸ್ತಾವನೆ ನೀಡುವ ಮೂಲಕ ಅಧಿಕಾರ ಹಸ್ತಾಂತರಿಸಿದರು.
ಮೈಸೂರು ವಿವಿಯ ಪ್ರಾಧ್ಯಾಪಕರಾಗಿರುವ ಪ್ರೊ.ಮುಜಾಫರ್ ಅಸ್ಸಾದಿ ಅವರು ಬುಡಕಟ್ಟು ಸಮುದಾಯದವರ ಬದುಕು, ಜೀವನ ಶೈಲಿಯ ಬಗ್ಗೆ ಅಪಾರವಾದ ಅಧ್ಯಯನ ನಡೆಸಿದ್ದಾರೆ. ಆದಿವಾಸಿಗಳ ಸ್ಥಳಾಂತರಕ್ಕೆ ನೇಮಿಸಿದ್ದ ಸಮಿತಿಯ ಅಧ್ಯಕ್ಷರಾಗಿ ಕೆಲಸ ಮಾಡಿದ್ದಾರೆ. ಕೃಷಿ ಅಧ್ಯಯನ ಕ್ಷೇತ್ರ, ಜಾಗತೀಕರಣ, ಗಾಂಧೀವಾದ, ರಾಜಕೀಯ ಸಮಾಜಶಾಸ್ತ್ರ, ಪ್ರಜಾಪ್ರಭುತ್ವ ಸಿದ್ಧಾಂತ, ಸಾಮಾಜಿಕ ಚಳವಳಿಗಳು, ತುಲನಾತ್ಮಕ ಸರ್ಕಾರ ಮತ್ತು ಭಾರತದಲ್ಲಿ ರಾಜಕೀಯ, ಮಾನವ ಹಕ್ಕುಗಳು, ಜಾಗತಿಕ ರಾಜಕೀಯ ಸಿದ್ಧಾಂತ ಮೊದಲಾದ ವಿಚಾರಗಳ ಕುರಿತು ಅಳವಾದ ಅಧ್ಯಯನ ಮಾಡಿ ವಿಷಯ ಮಂಡನೆ ಮಾಡಿ ಗಮನ ಸೆಳೆದಿದ್ದಾರೆ.
ಡಾ. ಮುಜಾಫರ್ ಅಸ್ಸಾದಿ ಅವರು ಮಂಗಳೂರು ವಿ.ವಿ.ಯಿಂದ ಸ್ನಾತಕೋತ್ತರ ಪದವಿ, ನವದೆಹಲಿಯ ಜೆಎನ್ ಯುನಿಂದ ಎಂ.ಫಿಲ್ ಹಾಗೂ ಪಿಎಚ್ ಡಿ ನಂತರ ಶಿಕಾಗೋ ವಿ.ವಿ.ಯಿಂದ ರಾಕ್ ಫೆಲ್ಲರ್ ಫೆಲೋ, ಪೋಸ್ಟ್ ಡಾಕ್ಟೊರಲ್ ಪದವೀಧರರು. ಈವರೆಗೆ 11 ಕೃತಿಗಳನ್ನು ರಚಿಸಿದ್ದಾರೆ. ಬುಡಕಟ್ಟು ಸಮುದಾಯಗಳ ಸ್ಥಳಾಂತರ ಕುರಿತ ಹೈಕೋರ್ಟ್ ಸಮಿತಿ ಅಧ್ಯಕ್ಷರಾಗಿ, ವರದಿ ನೀಡಿದ್ದಾರೆ. ಕರ್ನಾಟಕದಲ್ಲಿ ಬಹುರೂಪಿ ಸ್ತ್ರೀವಾದ ಕಥನಗಳು ಮತ್ತು ಚಳವಳಿ, ಅಸ್ಮಿತೆ, ರಾಜಕಾರಣ ಮತ್ತು ಮೂಲಭೂತವಾದ ಇವರ ಪ್ರಮುಖ ಕೃತಿಗಳು.
ಬೆಂಗಳೂರು : ಕರ್ನಾಟಕದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಹಿನ್ನೆಲೆಯಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಗಂಭೀರವಾಗುತ್ತಿದ್ದು, ಮೊದಲ ಹಂತದಲ್ಲಿ ಘೋಷಿಸಲಾದ 101…
ಹನೂರು : ಕೆಲಸಕ್ಕೆ ಹೋಗಿ ವಾಪಸ್ ಬರುವಾಗ ಮಳೆಯ ನೀರಿನಲ್ಲಿ ಕೊಚ್ಚಿ ಹೋಗಿ ಗಾರೆ ಕಾರ್ಮಿಕರೊಬ್ಬರು ಮೃತಪಟ್ಟಿರುವ ಘಟನೆ ಹನೂರು…
ನಂಜನಗೂಡು : ಗ್ರಾಮದ ಸ್ವಚ್ಛತೆಯ ಜವಾಬ್ದಾರಿ ಹೊತ್ತವರೇ ಪಂಚಾಯಿತಿ ಆವರಣವನ್ನೆ ಮೂತ್ರಾಲಯವಾಗಿಸಿ ಅನೈರ್ಮಲ್ಯಕ್ಕೆ ಕಾರಣರಾದರೆ ಬೇರೆಯವರಿಗೆ ಸ್ವಚ್ಚತೆ ಕಾಪಾಡುವ ಬಗ್ಗೆ…
ಕಠ್ಮಂಡು: ಮಹಾ ಪ್ರವಾಹಕ್ಕೆ ನೇಪಾಳ ತತ್ತರಿಸಿದೆ. ಪ್ರವಾಹ ಹಾಗೂ ಭೂಕುಸಿತದಿಂದ ನಾಪತ್ತೆಯಾದವರ ಸಂಖ್ಯೆ 6,100ಕ್ಕೆ ಏರಿಕೆಯಾಗಿದೆ. ಇದೀಗ ಹೈಡ್ರೋ ಪವರ್…
ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…
ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…