ಜಿಲ್ಲೆಗಳು

ಆ.18ರಂದು ಡಾ. ರಾಜೇಂದ್ರ ಸ್ವಾಮಿಗಳ ಜನ್ಮ ಜಯಂತಿ ಆಚರಣೆ

ಮೈಸೂರು : ಜೆಎಸ್ ಎಸ್ ಮಹಾವಿದ್ಯಾಪೀಠದ ೨೩ನೇ ಪೀಠಾಧಿಪತಿ ಡಾ. ರಾಜೇಂದ್ರ ಸ್ವಾಮೀಜಿ ಅವರ ಜನ್ಮ ಜಯಂತಿಯನ್ನು ಆಗಸ್ಟ್ ೧೮ರಂದು ಚಾಮುಂಡಿ ಬೆಟ್ಟದ ತಪ್ಪಲಿನ ಪುತ್ತೂರು ಮಠದಲ್ಲಿ ಆಯೋಜಿಸಲಾಗಿದೆ.

ಈ ವರ್ಷ ಅಮೆರಿಕದ ಮೇರಿಲ್ಯಾಂಡ್‌ನ ಗೇಥರ್ಸ್ ಬರ್ಗ್ ನಲ್ಲಿರುವ ಜೆಎಸ್ ಎಸ್ ಸ್ಪಿರಿಚ್ಯುಯಲ್ ಮಿಷನ್ ನಲ್ಲಿ ಆಚರಿಸುತ್ತಿರುವ ಹಿನ್ನಲೆಯಲ್ಲಿ  ಶ್ರೀ ಮಠದಲ್ಲಿ ಮುಂಚಿತವಾಗಿ ಆಚರಿಸಲಾಗುತ್ತದೆ ಎಂದು ಜೆಎಸ್ ಎಸ್ ಮಹಾವಿದ್ಯಾಪೀಠದ ಮುಖ್ಯ ಕಾರ್ಯ ನಿರ್ವಹಕಾಧಿಕಾರಿ ಡಾ.ಸಿ.ಜಿ.ಬೆಟಸೂರಮಠ ಹೇಳಿದರು.

ಆ.೧೮ರಂದು ಸುತ್ತೂರು‌ಮಠದಲ್ಲಿ ನಡೆಯಲಿರುವ ಕಾರ್ಯಕ್ರಮವನ್ನು ರಾಜ್ಯಪಾಲಥಾವರ್ ಚಂದ್ ಗೆಹ್ಲೋಟ್ ಉದ್ಘಾಟಿಸಲಿದ್ದು,ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆ ವಹಿಸಲಿದ್ದಾರೆ. ಸಹಕಾರ ಸಚಿವ ಎಸ್.ಟಿ.ಸೋಮಶೇಖರ್, ಸಂಸದ ಪ್ರತಾಪ್ ಸಿಂಹ,ಶಾಸಕ ಎಸ್.ಎ.ರಾಮದಾಸ್ ಮೊದಲಾದವರು ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.

ಶ್ರೀಗಳ ಜನ್ಮ ಜಯಂತಿ ಅಂಗವಾಗಿ ಚಾಮರಾಜೇಂದ್ರ ಮೃಗಾಲಯಕ್ಕೆ ಪ್ರತಿ ವರ್ಷದಂತೆ ಈ ಬಾರಿಯೂ ಒಂದು ಲಕ್ಷ ರೂ.ಗಳ ಚೆಕ್ ನೀಡಲಾಗುತ್ತದೆ. ರಕ್ತದಾನ,ನೇತ್ರದಾನ,ದೇಹದಾನಗಳ ಬಗ್ಗೆ ಅರಿವು ಮೂಡಿಸಲಾಗುತ್ತದೆ ಎಂದರು. ಕಾರ್ಯದರ್ಶಿ ಎಸ್.ಶಿವಕುಮಾರಸ್ವಾಮಿ, ಬಿ.ನಿರಂಜನಮೂರ್ತಿ ಹಾಜರಿದ್ದರು.

andolanait

Recent Posts

ಹನೂರು: ತಾಲ್ಲೂಕಿನ ಪ್ರತಿ ಗ್ರಾಮಗಳಿಗೂ ಬಸ್‌ ಸೌಲಭ್ಯ ಕಲ್ಪಿಸಲು ಡಿಪೋ ನಿರ್ಮಾಣ: ಶಾಸಕ ಎಂ.ಆರ್.‌ಮಂಜುನಾಥ್‌

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಪ್ರತಿ ಗ್ರಾಮಗಳಿಗೂ ಕೆಎಸ್‌ಆರ್‌ಟಿಸಿ ಸೌಲಭ್ಯ ಕಲ್ಪಿಸಲು ತಾಲೂಕು ಕೇಂದ್ರದಲ್ಲಿ…

3 hours ago

ಶ್ರೀರಂಗಪಟ್ಟಣ: ವಿದ್ಯುತ್ ಸ್ಪರ್ಶದಿಂದ ಕರ್ತವ್ಯ ನಿರತ ಲೈನ್‌ಮ್ಯಾನ್ ಸಾವು

‌ಶ್ರೀರಂಗಪಟ್ಟಣ: ವಿದ್ಯುತ್‌ ಸ್ಪರ್ಶದಿಂದ ಕರ್ತವ್ಯ ನಿರತ ಲೈನ್‌ಮ್ಯಾನ್‌ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಹೆಬ್ಬಾಡಿ ಗ್ರಾಮದಲ್ಲಿ ನಡೆದಿದೆ.…

3 hours ago

ರಾಜ್ಯದ ಹಲವೆಡೆ ಭಾರೀ ಗಾಳಿ ಮಳೆ: ಜನಜೀವನ ಅಸ್ತವ್ಯಸ್ತ

ಬೆಂಗಳೂರು: ರಾಜ್ಯದ ಹಲವೆಡೆ ಇಂದು ಧಾರಾಕಾರ ಮಳೆಯಾಗಿದ್ದು, ಭಾರೀ ಅವಾಂತರ ಸೃಷ್ಟಿ ಮಾಡಿದೆ. ಚಿಕ್ಕಮಗಳೂರು, ಶಿವಮೊಗ್ಗ ಸೇರಿದಂತೆ ರಾಜ್ಯದ ಹಲವೆಡೆ…

3 hours ago

ಹನೂರು: 153 ದಿನಗಳಿಂದ ರೈತರು ನಡೆಸುತ್ತಿದ್ದ ಅಹೋರಾತ್ರಿ ಧರಣಿ ಅಂತ್ಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಾರ್ಟಳ್ಳಿ, ಕೌದಳ್ಳಿ, ಶೆಟ್ಟಳ್ಳಿ, ಕುರಟ್ಟಿ ಹೊಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ…

4 hours ago

ಮೈಸೂರಿನಲ್ಲಿ ಅವೈಜ್ಞಾನಿಕ ಟ್ರಾಫಿಕ್‌ ಸಿಗ್ನಲ್‌ ಆರೋಪ: ಸಚಿವ ಮಹದೇವಪ್ಪ ಪ್ರತಿಕ್ರಿಯೆ

ಮೈಸೂರು: ಅರಮನೆಗಳ ನಗರಿ ಮೈಸೂರಿನಲ್ಲಿ ಅವೈಜ್ಞಾನಿಕವಾಗಿ ಟ್ರಾಫಿಕ್‌ ಸಿಗ್ನಲ್‌ ಅಳವಡಿಸಲಾಗಿದೆ ಎಂದು ಸಾರ್ವಜನಿಕರು ಕಿಡಿಕಾರುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಮಹದೇವಪ್ಪ…

4 hours ago

ದೀದಿ ಸರ್ಕಾರದ ವಿರುದ್ಧ ಅಮಿತ್‌ ಶಾ ಚಾರ್ಜ್‌ಶೀಟ್‌ ರಿಲೀಸ್‌

ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ದಿನಗಣನೆ ಶುರುವಾಗಿರುವ ಹಿನ್ನೆಲೆಯಲ್ಲಿ ಸಿಎಂ ಮಮತಾ ಬ್ಯಾನರ್ಜಿ ವಿರುದ್ಧ ಕೇಂದ್ರ ಗೃಹ ಸಚಿವ…

4 hours ago