ಮೈಸೂರು: ಅರಮನೆ ಹಾಗೂ ಕೋಟೆಗಳು ಪುರಾತನ ಕಟ್ಟಡಗಳಾಗಿರುವುದರಿಂದ ಕುಶಾಲತೋಪು ತಾಲೀಮಿನಿಂದ ಧಕ್ಕೆ ಆಗದಿರಲಿ ಎಂದು ಗಜಪಡೆಯ ಎರಡನೇ ಹಂತದ ಕುಶಾಲತೋಪು ತಾಲೀಮು ವಸ್ತು ಪ್ರದರ್ಶನ ಆವರಣಕ್ಕೆ ಸ್ಥಳಾಂತರಿಸಲಾಯಿತು. ವಿಶ್ವ ವಿಖ್ಯಾತ ನಾಡಹಬ್ಬ ದಸರಾದಲ್ಲಿ ಭಾಗವಹಿಸಲು ಆಗಮಿಸಿರುವ ಗಜಪಡೆಗೆ ಇಂದು ಎರಡನೇ ಕುಶಾಲತೋಪು ತಾಲೀಮನ್ನು ವಸ್ತು ಪ್ರದರ್ಶನ ಪಾರ್ಕಿಂಗ್ ಆವರಣದಲ್ಲಿ ನಡೆಸಲಾಯಿತು.
ಮೊದಲ ಬಾರಿಗೆ ಕುಶಾಲತೋಪು ತಾಲೀಮನ್ನು ಅರಮನೆ ಆವರಣದ ಪಕ್ಕದ ಕೋಟೆ ಮಾರಮ್ಮ ದೇವಾಲಯದ ಮುಂಭಾಗದಲ್ಲಿ ಆಯೋಜನೆ ಮಾಡಲಾಯಿತು. ಈ ಸಂದರ್ಭದಲ್ಲಿ ಮೂರು ಸುತ್ತಿನ 21 ಕುಶಾಲತೋಪುಗಳನ್ನು ಹಾರಿಸಲಾಗಿತ್ತು. ಆದರೇ, ಕುಶಾಲತೋಪಿನ ಶಬ್ಧಕ್ಕೆ ಪುರಾತನ ಅರಮನೆ ಕಟ್ಟಡಗಳಿಗೆ ಹಾನಿಯಾಗುವ ಸಾಧ್ಯತೆ ಹೆಚ್ಚಿರುವ ಹಿನ್ನೆಲೆಯಲ್ಲಿ ಅರಮನೆ ಆಡಳಿತ ಮಂಡಳಿಯ ಸೂಚನೆ ಮೇರೆಗೆ ಎರಡನೇ ತಾಲೀಮನ್ನು ವಸ್ತು ಪ್ರದರ್ಶನದ ಪಾರ್ಕಿಂಗ್ ಆವರಣಕ್ಕೆ ಸ್ಥಳಾಂತರಿಸಲಾಗಿದೆ ಎಂದು ಡಿಸಿಎಫ್ ಕರಿಕಾಲನ್ ಮಾಹಿತಿ ನೀಡಿದರು.
ಬೆದರಿದ ಆನೆ, ಕುದುರೆಗಳು: ಎರಡನೇ ಹಂತದ ಕುಶಾಲತೋಪು ತಾಲೀಮಿನಲ್ಲಿ 12 ಆನೆಗಳು ಭಾಗವಹಿಸಿದ್ದವು. ಅದರಲ್ಲಿ ಪಾರ್ಥಸಾರಥಿ ಸ್ವಲ್ಪ ಬೆದರಿದಂತೆ ಕಂಡು ಬಂತು. ಜೊತೆಗೆ ಉಳಿದ 11 ಆನೆಗಳು ಬೆದರದೇ ನಿಂತಿದ್ದವು. ಕುಶಾಲತೋಪು ಸಿಡಿಸುವ ಸಂದರ್ಭದಲ್ಲಿ ಕೆಲವು ಆನೆಗಳು ಶಬ್ದ ಮಾಡಿದವು. 7 ಫಿರಂಗಿ ಗಾಡಿಗಳಲ್ಲಿ 3 ಸುತ್ತಿನಲ್ಲಿ 21 ಕುಶಾಲತೋಪುಗಳನ್ನು ಸಿಡಿಸಲಾಗಿದ್ದು, ಇದರಲ್ಲಿ ನಗರ ಸಶಸ್ತ್ರ ಮೀಸಲು ಪಡೆಯ ಸಿಬ್ಬಂದಿಗಳು ಭಾಗವಹಿಸಿದ್ದರು.ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ಡಿಸಿಪಿ ಶಿವರಾಜ್ ಕುಶಾಲತೋಪು ತಾಲೀಮಿನ ನಂತರ ಮಾಧ್ಯಮಗಳ ಜೊತೆ ಮಾತನಾಡಿ, ಎರಡನೇ ತಾಲೀಮಿನಲ್ಲಿ 12 ಆನೆಗಳು ಹಾಗೂ 41 ಅಶ್ವಾರೋಹಿ ದಳದ ಕುದುರೆಗಳು ಭಾಗವಹಿಸಿದ್ದವು.
ಕುಶಾಲತೋಪು ಸಿಡಿಸಿದಾಗ ಸುಮಾರು ಸರಾಸರಿ 92.2 ಡೆಸಿಬಲ್ ಶಬ್ದ ಹೊರ ಹೊಮ್ಮಿದೆ. ಮೈಸೂರು ಅರಮನೆಯ ಆಡಳಿತ ಮಂಡಳಿಯ ಸೂಚನೆ ಮೇರೆಗೆ ಎರಡನೇ ಹಂತದ ತಾಲೀಮನ್ನು ವಸ್ತು ಪ್ರದರ್ಶನ ಆವರಣದಲ್ಲಿ ನಡೆಸಲಾಯಿತು. ಪ್ರತಿ ವರ್ಷದಂತೆ ಈ ಬಾರಿಯೂ ಜಂಬೂಸವಾರಿಯ ಮೆರವಣಿಗೆ ದಿನ 21 ಕುಶಾಲತೋಪುಗಳನ್ನು ಅರಮನೆಯ ಆವರಣದ ಪಕ್ಕದಲ್ಲಿರುವ ಕೋಟೆ ಮಾರಮ್ಮ ದೇವಾಲಯದ ಆವರಣದಲ್ಲಿ ಸಿಡಿಸಲಾಗುವುದು ಎಂದು ತಿಳಿಸಿದರು.
ವಾಷಿಂಗ್ಟನ್ : ಹೊರ್ಮುಜ್ ಜಲಸಂಧಿಯನ್ನು ಸಂಚಾರಕ್ಕೆ ಮುಕ್ತಗೊಳಿಸದಿದ್ದರೆ ಇರಾನ್‌ನ ವಿದ್ಯುತ್ ಸ್ಥಾವರಗಳು ಮತ್ತು ಸೇತುವೆಗಳ ಮೇಲೆ ದಾಳಿ ನಡೆಸುವುದಾಗಿ ಅಮೆರಿಕದ…
ಬೆಂಗಳೂರು : ಕೊಡಗು ಜಿಲ್ಲೆಯ ತಡಿಯಾಂಡಮೋಳ್ ಶಿಖರಕ್ಕೆ ಕೇರಳದಿಂದ ಚಾರಣಕ್ಕಾಗಿ ಬಂದು ಏಪ್ರಿಲ್ 2 ರಂದು ನಾಪತ್ತೆಯಾಗಿದ್ದ ಜಿ.ಎಸ್. ಶರಣ್ಯ…
ಮೈಸೂರು : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಕುಲಸಚಿವರಾಗಿ ಕೆಎಎಸ್ ಅಧಿಕಾರಿ ಎಸ್.ಕುಸುಮಾಕುಮಾರಿ ಅವರನ್ನು ಸರ್ಕಾರ ನೇಮಕ ಮಾಡಿದೆ. ಈವರೆಗೆ…
ಮೈಸೂರು : ಭಾರತೀಯ ಹವಾಮಾನ ಇಲಾಖೆಯು ಕರಾವಳಿ ಕರ್ನಾಟಕ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಿಗೆ ಏ.9ರವರೆಗೆ ಯಲ್ಲೋ…
ದಾವಣಗೆರೆ : ಕಾಂತರಾಜು ವರದಿ ಈಗ ನಿಮ್ಮ ಬಳಿಯೇ ಇದೆ. ಜಯಪ್ರಕಾಶ ಹೆಗಡೆ ಅವರ ವರದಿಯು ಸ್ವೀಕರಿಸಿದ್ದೀರಿ. ಎರಡು ವರದಿಗಳನ್ನು…
ದಾವಣಗೆರೆ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ರಾಜಕೀಯ ಸ್ವಾರ್ಥಕ್ಕಾಗಿ ಮತ್ತು ಕುರ್ಚಿ ಉಳಿಸಿಕೊಳ್ಳಲು ತಮ್ಮನ್ನು ಬೆಳೆಸಿದ್ದ ಅಹಿಂದ ವರ್ಗವನ್ನೇ…