ಜಿಲ್ಲೆಗಳು

ಮೈಸೂರು : 2ನೇ ಹಂತದ ಗಜಪಡೆಯ ಕುಶಾಲತೋಪು ತಾಲೀಮು ವಸ್ತು ಪ್ರದರ್ಶನ ಆವರಣಕ್ಕೆ ಸ್ಥಳಾಂತರ

ಮೈಸೂರು: ಅರಮನೆ ಹಾಗೂ ಕೋಟೆಗಳು ಪುರಾತನ ಕಟ್ಟಡಗಳಾಗಿರುವುದರಿಂದ ಕುಶಾಲತೋಪು ತಾಲೀಮಿನಿಂದ ಧಕ್ಕೆ ಆಗದಿರಲಿ ಎಂದು ಗಜಪಡೆಯ ಎರಡನೇ ಹಂತದ ಕುಶಾಲತೋಪು ತಾಲೀಮು ವಸ್ತು ಪ್ರದರ್ಶನ ಆವರಣಕ್ಕೆ ಸ್ಥಳಾಂತರಿಸಲಾಯಿತು. ವಿಶ್ವ ವಿಖ್ಯಾತ ನಾಡಹಬ್ಬ ದಸರಾದಲ್ಲಿ ಭಾಗವಹಿಸಲು ಆಗಮಿಸಿರುವ ಗಜಪಡೆಗೆ ಇಂದು ಎರಡನೇ ಕುಶಾಲತೋಪು ತಾಲೀಮನ್ನು ವಸ್ತು ಪ್ರದರ್ಶನ ಪಾರ್ಕಿಂಗ್ ಆವರಣದಲ್ಲಿ ನಡೆಸಲಾಯಿತು.
ಮೊದಲ ಬಾರಿಗೆ ಕುಶಾಲತೋಪು ತಾಲೀಮನ್ನು ಅರಮನೆ ಆವರಣದ ಪಕ್ಕದ ಕೋಟೆ ಮಾರಮ್ಮ ದೇವಾಲಯದ ಮುಂಭಾಗದಲ್ಲಿ ಆಯೋಜನೆ ಮಾಡಲಾಯಿತು. ಈ ಸಂದರ್ಭದಲ್ಲಿ ಮೂರು ಸುತ್ತಿನ 21 ಕುಶಾಲತೋಪುಗಳನ್ನು ಹಾರಿಸಲಾಗಿತ್ತು. ಆದರೇ, ಕುಶಾಲತೋಪಿನ ಶಬ್ಧಕ್ಕೆ ಪುರಾತನ ಅರಮನೆ ಕಟ್ಟಡಗಳಿಗೆ ಹಾನಿಯಾಗುವ ಸಾಧ್ಯತೆ ಹೆಚ್ಚಿರುವ ಹಿನ್ನೆಲೆಯಲ್ಲಿ ಅರಮನೆ ಆಡಳಿತ ಮಂಡಳಿಯ ಸೂಚನೆ ಮೇರೆಗೆ ಎರಡನೇ ತಾಲೀಮನ್ನು ವಸ್ತು ಪ್ರದರ್ಶನದ ಪಾರ್ಕಿಂಗ್ ಆವರಣಕ್ಕೆ ಸ್ಥಳಾಂತರಿಸಲಾಗಿದೆ ಎಂದು ಡಿಸಿಎಫ್ ಕರಿಕಾಲನ್ ಮಾಹಿತಿ ನೀಡಿದರು.

ಬೆದರಿದ ಆನೆ, ಕುದುರೆಗಳು: ಎರಡನೇ ಹಂತದ ಕುಶಾಲತೋಪು ತಾಲೀಮಿನಲ್ಲಿ 12 ಆನೆಗಳು ಭಾಗವಹಿಸಿದ್ದವು. ಅದರಲ್ಲಿ ಪಾರ್ಥಸಾರಥಿ ಸ್ವಲ್ಪ ಬೆದರಿದಂತೆ ಕಂಡು ಬಂತು. ಜೊತೆಗೆ ಉಳಿದ 11 ಆನೆಗಳು ಬೆದರದೇ ನಿಂತಿದ್ದವು. ಕುಶಾಲತೋಪು ಸಿಡಿಸುವ ಸಂದರ್ಭದಲ್ಲಿ ಕೆಲವು ಆನೆಗಳು ಶಬ್ದ ಮಾಡಿದವು. 7 ಫಿರಂಗಿ ಗಾಡಿಗಳಲ್ಲಿ 3 ಸುತ್ತಿನಲ್ಲಿ 21 ಕುಶಾಲತೋಪುಗಳನ್ನು ಸಿಡಿಸಲಾಗಿದ್ದು, ಇದರಲ್ಲಿ ನಗರ ಸಶಸ್ತ್ರ ಮೀಸಲು ಪಡೆಯ ಸಿಬ್ಬಂದಿಗಳು ಭಾಗವಹಿಸಿದ್ದರು.ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ಡಿಸಿಪಿ ಶಿವರಾಜ್ ಕುಶಾಲತೋಪು ತಾಲೀಮಿನ ನಂತರ ಮಾಧ್ಯಮಗಳ ಜೊತೆ ಮಾತನಾಡಿ, ಎರಡನೇ ತಾಲೀಮಿನಲ್ಲಿ 12 ಆನೆಗಳು ಹಾಗೂ 41 ಅಶ್ವಾರೋಹಿ ದಳದ ಕುದುರೆಗಳು ಭಾಗವಹಿಸಿದ್ದವು.

ಕುಶಾಲತೋಪು ಸಿಡಿಸಿದಾಗ ಸುಮಾರು ಸರಾಸರಿ 92.2 ಡೆಸಿಬಲ್ ಶಬ್ದ ಹೊರ ಹೊಮ್ಮಿದೆ. ಮೈಸೂರು ಅರಮನೆಯ ಆಡಳಿತ ಮಂಡಳಿಯ ಸೂಚನೆ ಮೇರೆಗೆ ಎರಡನೇ ಹಂತದ ತಾಲೀಮನ್ನು ವಸ್ತು ಪ್ರದರ್ಶನ ಆವರಣದಲ್ಲಿ ನಡೆಸಲಾಯಿತು. ಪ್ರತಿ ವರ್ಷದಂತೆ ಈ ಬಾರಿಯೂ ಜಂಬೂಸವಾರಿಯ ಮೆರವಣಿಗೆ ದಿನ 21 ಕುಶಾಲತೋಪುಗಳನ್ನು ಅರಮನೆಯ ಆವರಣದ ಪಕ್ಕದಲ್ಲಿರುವ ಕೋಟೆ ಮಾರಮ್ಮ ದೇವಾಲಯದ ಆವರಣದಲ್ಲಿ ಸಿಡಿಸಲಾಗುವುದು ಎಂದು ತಿಳಿಸಿದರು.

andolanait

Recent Posts

ರಾಜ್ಯದಲ್ಲಿ ಮಳೆ ಕೊರತೆ: ತಾಪಮಾನ ಏರಿಕೆ: ಹವಾಮಾನ ಇಲಾಖೆ ಮಹತ್ವದ ಮುನ್ಸೂಚನೆ

ಬೆಂಗಳೂರು: ರಾಜ್ಯದ ಬಹುತೇಕ ಕಡೆ ಮಳೆ ಕೊರತೆ ಮುಂದುವರಿದಿದ್ದು, ತಾಪಮಾನ ಏರಿಕೆಯಾಗುವ ಸಾಧ್ಯತೆ ಇದೆ. ಈ ಬಾರಿ ಮುಂಗಾರು ಕೊರತೆ…

46 mins ago

ಕೊಡಗು: ಪತ್ನಿಗೆ ಗುಂಡಿಕ್ಕಿ ಕೊಂದು ತಾನೂ ಗುಂಡು ಹಾರಿಸಿಕೊಂಡು ವೃದ್ಧ ಆತ್ಮಹತ್ಯೆ

ಸೋಮವಾರಪೇಟೆ: ತಾಲೂಕಿನ ಮಾದಾಪುರ ಹೋಬಳಿ ವ್ಯಾಪ್ತಿಯ ಕುಂಬಾರಗಡಿಗೆ ಗ್ರಾಮದಲ್ಲಿ ಕೌಟುಂಬಿಕ ಕಲಹ ಶಂಕೆಯಡಿ ವೃದ್ಧ ದಂಪತಿ ಶವವಾಗಿ ಪತ್ತೆಯಾಗಿದ್ದಾರೆ. ಕನ್ನಿಕಂಡ…

56 mins ago

ಬಿಗ್‌ಬಾಸ್ ಮನೆಯಿಂದ ದಿಢೀರ್ ಹೊರಬಂದ ಓಂ ಪ್ರಕಾಶ್ ರಾವ್: ಆಸ್ಪತ್ರೆಗೆ ದಾಖಲು..!!

ಬೆಂಗಳೂರು: ಬಿಗ್‌ಬಾಸ್ ಮನೆಯಲ್ಲಿ ಇದ್ದ ಓಂ ಪ್ರಕಾಶ್ ರಾವ್ ದಿಢೀರ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಹಿಂದೆ ಅಪಘಾತವೊಂದರಲ್ಲಿ ಓಂ ಪ್ರಕಾಶ್…

1 hour ago

2,000 ರೂ. ವರೆಗಿನ ಯುಪಿಐ ಪಾವತಿಗಳಿಗೆ ಶುಲ್ಕವಿಲ್ಲ: ಕೇಂದ್ರ ಸರ್ಕಾರದಿಂದ ಮಹತ್ವದ ಆದೇಶ

ನವದೆಹಲಿ: 2,000 ರೂ. ವರೆಗೆ ನಡೆಯುವ ಎಲ್ಲಾ UPI ವಹಿವಾಟುಗಳಿಗೆ ಶುಲ್ಕವಿಲ್ಲ. ಅಷ್ಟೇ ಅಲ್ಲ, RuPay ಡೆಬಿಟ್ ಕಾರ್ಡ್ ಮೂಲಕ…

1 hour ago

ಶತಕ ಬಾರಿಸಿದ ಸಿಎಂ ಎದುರು ಸವಾಲುಗಳೂ ಇವೆ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ೧೦೦ ದಿನಗಳನ್ನು ಪೂರ್ಣಗೊಳಿಸಿದ್ದಾರೆ. ರಾಜ್ಯದ ಜನತೆಗೆ ಹಲವಾರು ಯೋಜನೆಗಳನ್ನು ಘೋಷಿಸಿದ್ದಾರೆ. ಬಡವರು, ರೈತರು, ಮಹಿಳೆಯರು, ವಿದ್ಯಾರ್ಥಿಗಳ…

23 hours ago

ಎಐ; ಮನುಕುಲದ ವಿನಾಶಕ್ಕೆ ಕಾರಣವಾಗಲಿದೆಯೇ?

ಶುಭಾ ಖಟಾವಕರ ಮ್ಹೆತ್ರಸ್ “ಕೇವಲ ಒಂದು ದಶಕದಲ್ಲಿ ಕೃತ್ರಿಮ ಬುದ್ಧಿಮತ್ತೆಯು (ಎಐ) ಮನುಕುಲವನ್ನು ನಾಶಪಡಿಸಲಿದೆ" ಎಂದು ಎಐನ ದೈತ್ಯ ಸಂಸ್ಥೆಯಾದ…

23 hours ago