ಮೈಸೂರು: ಜಾನುವಾರುಗಳಿಗೆ ಕಾಡುತ್ತಿರುವ ಕಾಲು ಬಾಯಿ ಜ್ವರಕ್ಕೆ ಲಸಿಕೆ ಹಾಕುವ ಕಾರ್ಯವು ಇಂದಿನಿಂದ ಒಂದು ತಿಂಗಳುಗಳ ಕಾಲ ನಡೆಯಲಿದ್ದು ಈ ಕಾರ್ಯಕ್ಕೆ ಇಂದು ನಗರದ ಪಶು ಆಸ್ಪತ್ರೆಯಲ್ಲಿ ಗೋ ಪೂಜೆ ಮಾಡಿ ಲಸಿಕೆ ನೀಡುವ ಮೂಲಕ ಕರ್ನಾಟಕ ಹಾಲು ಒಕ್ಕೂಟದ ಜಂಟಿ ನಿರ್ದೇಶಕ ಡಾ.ವೀರಭದ್ರಯ್ಯ ಅವರು ಚಾಲನೆ ನೀಡಿದರು.
ಜಿಲ್ಲೆಯಲ್ಲಿನ ಮೈಸೂರು, ತಿ.ನರಸೀಪುರ, ನಂಜನಗೂಡು, ಎಚ್.ಡಿ.ಕೋಟೆ, ಸರಗೂರು, ಹುಣಸೂರು, ಪಿರಿಯಾಪಟ್ಟಣ, ಕೆ.ಆರ್.ನಗರ, ಸಾಲಿಗ್ರಾಮ ತಾಲ್ಲೂಕುಗಳಲ್ಲಿ ಒಟ್ಟು 5.14 ಲಕ್ಷ ರಾಸುಗಳಿಗೆ ಲಸಿಕೆ ಹಾಕುವ ಗುರಿ ಹೊಂದಲಾಗಿದೆ
ಎಂದು ಹೇಳಿದರು.
ಈ ಸಂದರ್ಭದಲ್ಲಿ ಉಪ ನಿರ್ದೇಶಕ ಡಾ.ಷಡಕ್ಷರಮೂರ್ತಿ, ಮೈಮುಲ್ ವ್ಯವಸ್ಥಾಪಕ ನಿರ್ದೇಶಕ ವಿಜಯಕುಮಾರ್, ಮುಖ್ಯ ಪಶು ವೈದ್ಯಾಧಿಕಾರಿ ಡಾ.ಬಾಲರಾಜ್ ಹಾಜರಿದ್ದರು.





