ಮೈಸೂರು: ಕಾರು ಅಪಘಾತದಿಂದ ಗಾಯಗೊಂಡು ನಗರದ ಜೆಎಸ್‌ಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಚೇತರಿಸಿಕೊಂಡ ಪ್ರಹ್ಲಾದ ಮೋದಿ ಹಾಗೂ ಕುಟುಂಬದ ಸದಸ್ಯರು ಬುಧವಾರ ಸಂಜೆ ಆಸ್ಪತ್ರೆಯಿಂದ ಬಿಡುಗಡೆಗೊಂಡು, ಅಹಮದಾಬಾದ್‌ಗೆ ಪ್ರಯಾಣ ಬೆಳೆಸಿದರು.
ಪ್ರಧಾನಿ ನರೇಂದ್ರ ಮೋದಿ ತಾಯಿ ಹೀರಾಬೆನ್ ಆರೋಗ್ಯದ ಏರುಪೇರಿನಿಂದ ಆಸ್ಪತ್ರೆಗೆ ದಾಖಲಾದ ಕಾರಣ ಅವರನ್ನು ನೋಡಲು, ಇಲ್ಲಿನ ವಿಮಾನ ನಿಲ್ದಾಣಕ್ಕೆ ಆಗಮಿಸಿದ ವಿಶೇಷ ವಿಮಾನದ ಮೂಲಕ ಕಿರಿಯ ಸಹೋದರ ಪ್ರಹ್ಲಾದ್ ಕುಟಂಬವು ತೆರಳಿತು.
ಅದಕ್ಕೂ ಮೊದಲು ತಾಯಿ ಹೀರಾಬೆನ್ ಗುಣಮುಖರಾಗಲೆಂದು ಪ್ರಹ್ಲಾದ ಮೋದಿ ಅವರ ಮಗಳು ಹಾಗೂ ಅಳಿಯ ಚಾಮುಂಡಿ ಬೆಟ್ಟಕ್ಕೆ ತೆರಳಿ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದರು.
ತಾಲ್ಲೂಕಿನ ಕಡಕೊಳ ಬಳಿ ಮಂಗಳವಾರ ಪ್ರಹ್ಲಾದ ಮೋದಿ ಅವರು ಪ್ರಯಾಣಿಸುತ್ತಿದ್ದ ಕಾರು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿತ್ತು. ಐವರು ಗಾಯಗೊಂಡಿದ್ದರು.
`ಹೊಸ ತಲೆಮಾರಿನ ಸಾಹಿತ್ಯ' ಕುರಿತ ವಿಚಾರಗೋಷ್ಠಿಯಲ್ಲಿ ವಿಮರ್ಶಕ ವಿಕ್ರಂ ವಿಸಾಜಿ ಅಭಿಮತ • ಜಿ.ತಂಗಂ ಗೋಪಿನಾಥಂ ಮಂಡ್ಯ: ಹೊಸ ತಲೆಮಾರಿನ…
ಮೈಸೂರು: ಮಾಗಿ ಉತ್ಸವದ ಅಂಗವಾಗಿ ಜಗತ್ಪ್ರಸಿದ್ಧ ಮೈಸೂರು ಅರಮನೆ ಆವರಣದಲ್ಲಿ ಇಂದು ಸಂಜೆ ಖ್ಯಾತ ಗಾಯಕ ವಿಜಯ್ ಪ್ರಕಾಶ್ ಅವರು…
ಚಾಮರಾಜನಗರ: ಬಿಆರ್ಟಿ ಹುಲಿ ಸಂರಕ್ಷಿತಾರಣ್ಯದಲ್ಲಿ ಪಶು ವೈದ್ಯರ ಕೊರತೆ ಎದ್ದು ಕಾಣುತ್ತಿದ್ದು, ಹೊರಗುತ್ತಿಗೆ ಆಧಾರದಲ್ಲಿ ವೈದ್ಯರ ಹುದ್ದೆಯ ನೇಮಕಾತಿಗೂ ಜಾಹೀರಾತು…
ಬೆಂಗಳೂರು: ರಾಜ್ಯದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪದಿಂದ ಹಣ್ಣುಗಳ ರಾಣಿ ಎಂದು ಕರೆಯಿಸಿಕೊಳ್ಳುವ ಮಾವಿಗೆ ಅನೇಕ ರೋಗಗಳು ಕಾಣಿಸಿಕೊಂಡಿದ್ದು, ರೈತರಿಗೆ ಇಳುವರಿ…
ಗುಂಡ್ಲುಪೇಟೆ: ಗಡಿ ಜಿಲ್ಲೆ ಚಾಮರಾಜನಗರದ ಗುಂಡ್ಲುಪೇಟೆ ತಾಲ್ಲೂಕಿನಲ್ಲಿರುವ ರಾಷ್ಟ್ರೀಯ ಉದ್ಯಾನವನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಕುಂದಕೆರೆ ವಲಯದ ಚಿಕ್ಕ…