ಮೈಸೂರು : ನಗರದ ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿಂದು ಅಲ್ಲಿ ಕಾರ್ಯನಿರ್ವಹಿಸುವ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರಿಗೆ ಉಚಿತ ಆರೋಗ್ಯ ತಪಾಸಣೆ ನಡೆಸಲಾಯಿತು.
ವಿಮಾನ ನಿಲ್ದಾಣದಲ್ಲಿ ಆರೋಗ್ಯಕರ ಮತ್ತು ಸುರಕ್ಷಿತ ಕೆಲಸದ ವಾತಾವರಣವನ್ನು ನಿರ್ಮಿಸುವ ಉದ್ದೇಶದಿಂದಾಗಿ ಅಧಿಕಾರಿ ಮತ್ತು ಸಿಬ್ಬಂದಿ ವರ್ಗದವರುಗಳಿಗೆ ತಪಾಸಣೆ ಜೊತೆಗೆ ಆರೋಗ್ಯದ ಕುರಿತು ಜಾಗೃತಿ ಮೂಡಿಸಲಾಯಿತು.





