ಮೈಸೂರು: ಮೈಸೂರು ವಿಮಾನ ನಿಲ್ದಾಣವನ್ನು ಮೇಲ್ದರ್ಜೆಗೇರಿಸುವ ಕಾಮಗಾರಿಗೆ ಶೀಘ್ರದಲ್ಲೇ ಚಾಲನೆ ನೀಡಲಾಗುವುದು ಎಂದು ಸಂಸದ ಪ್ರತಾಪ್ ಸಿಂಹ ತಿಳಿಸಿದರು.
ಇಲ್ಲಿನ ಜಲದರ್ಶಿನಿಯಲ್ಲಿ ಅಧಿಕಾರಿಗಳ ಸಭೆ ನಡೆಸಿದ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮೊದಲ ಹಂತದಲ್ಲಿ 150 ಕೋಟಿ ರೂ. ಬಿಡುಗಡೆಯಾಗಿದೆ. ರನ್ ವೇ ವಿಸ್ತರಣೆಗೆ 160 ಎಕರೆ ಜಮೀನು ಬೇಕು. ಈವರೆಗೆ 47 ಎಕರೆಗೆ ಅಧಿಸೂಚನೆ ಹೊರಡಿಸಲಾಗಿದೆ. ಭೂಸ್ವಾಧೀನ ಪ್ರಕ್ರಿಯೆ ನಡೆಯುತ್ತಿದೆ. ಮೈಸೂರು- ನಂಜನಗೂಡು ಹೆದ್ದಾರಿಯನ್ನು ಡೈವರ್ಟ್ ಮಾಡಲಾಗುವುದು ಎಂದು ಹೇಳಿದರು.
ಮೈಸೂರು- ಬೆಂಗಳೂರು ಎಕ್ಸ್‌ಪ್ರೆಸ್ ಹೈವೇ ಉದ್ಘಾಟನೆಯನ್ನು ಮಾರ್ಚ್ 11ರಂದು ಮಂಡ್ಯ ಜಿಲ್ಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಲಿದ್ದಾರೆ. ಅದೇ ದಿನ ಮೈಸೂರು- ಕುಶಾಲನಗರ ನಾಲ್ಕು ಪಥದ ಹೆದ್ದಾರಿ ನಿರ್ಮಾಣಕ್ಕೂ ಶಂಕುಸ್ಥಾಪನೆ ನೆರವೇರಲಿದೆ. ಮಂಡ್ಯ ಜಿಲ್ಲೆಯವರು ಬಿಜೆಪಿಯವರನ್ನೇನೂ ಗಲ್ಲಿಸದಿದ್ದರೂ ಅಭಿವೃದ್ಧಿ ವಿಚಾರದಲ್ಲಿ ನಾವೇನೂ ತಾರತಮ್ಯ ಮಾಡಿಲ್ಲ. ಮಂಡ್ಯದಲ್ಲೂ ಅಭಿವೃದ್ಧಿ ಮಾಡುತ್ತಿದ್ದೇವೆ. ದಶಪಥಕ್ಕೆ ಕಾವೇರಿ ಹೆಸರಿಡಲು ಎಲ್ಲರ ಸಹಕಾರ ಕೇಳುತ್ತೇನೆ ಎಂದರು.
ರಾಜ್ಯ ರಾಜಕಾರಣಕ್ಕೆ ಬರುತ್ತೀರಾ? ಎಂಬ ಪ್ರಶ್ನೆಗೆ, ನಾನು 2029ರವರೆಗೆ ಮಾತ್ರ ರಾಜಕೀಯದಲ್ಲಿರಲು ಯೋಜಿಸಿದ್ದೇನೆ. ಪ್ರಧಾನಿ ನರೇಂದ್ರ ಮೋದಿ ಕೈ ಕೆಳಗೆ ಕೆಲಸ ಮಾಡಲಷ್ಟೆ ನನಗಿಷ್ಟ. ನಾನು ದೀರ್ಘಾವಧಿಗೆ ರಾಜಕೀಯದಲ್ಲಿರಲು ಯೋಚಿಸಿಲ್ಲ ಎಂದು ಪ್ರತಿಕ್ರಿಯಿಸಿದರು.
ಮದ್ದೂರು: ಮದ್ದೂರಿನಲ್ಲಿ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ನಿವೃತ್ತ ಹಾಸ್ಟೆಲ್…
ಮಂಡ್ಯ: ನಗರದ ಗಾಂಧಿನಗರದಲ್ಲಿ ವ್ಯಕ್ತಿಯೊಬ್ಬರನ್ನು ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ನಡೆದಿದೆ. ಗಾಂಧಿನಗರ ನಿವಾಸಿ 47 ವರ್ಷದ ಪುರುಷೋತ್ತಮ್…
ಮೈಸೂರು ನಗರದಲ್ಲಿ ಸ್ವಚ್ಛತಾ ಕಾರ್ಯ ನಿರ್ವಹಿಸುತ್ತಿರುವ ಸ್ವಚ್ಛತೆಯ ಜೀವನಾಡಿಗಳಾಗಿರುವ ಪೌರಕಾರ್ಮಿಕರಿಗೆ, ಮೈಸೂರು ಮಹಾನಗರ ಪಾಲಿಕೆ ವತಿಯಿಂದ ಮಣಿಪಾಲ್ ಆಸ್ಪತ್ರೆಯಲ್ಲಿ ಆಯೋಜಿಸಿದ್ದ…
ಮಂಡ್ಯ ಜಿಯ ಮದ್ದೂರಿನಲ್ಲಿ ಭಾನುವಾರ ಗಣೇಶೋತ್ಸವ ಕಾರ್ಯಕ್ರಮದಲ್ಲಿ ಮುಸ್ಲಿಮರೇ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು, ಗೌರಿ -ಗಣೇಶ ಮೂರ್ತಿಗಳನ್ನು ಹೊತ್ತ ಟ್ರ್ಯಾಕ್ಟರ್…
ನಾಡಿಗೆ ಮಾದರಿ! ವಿವಿಧ ಧರ್ಮ ಸಮುದಾಯಗಳ ಮನಸುಗಳ ಅಕ್ಕರೆಯಲಿ ಬೆಸೆವ ಸ್ನೇಹ ಸೌಹಾರ್ದ ಸಾಮರಸ್ಯದ ಪ್ರತೀಕ, ಹಬ್ಬ ಉತ್ಸವಗಳು! ನಾಡಿಗೆ…
ನಾವಿಬ್ಬರು ಪ್ರೊ. ಬಿ. ಪಿ. ಮಹೇಶ್ ಚಂದ್ರ ಗುರುಗಳ ಶಿಷ್ಯರು. ನಮ್ಮಿಬ್ಬರಿಗೂ ಪ್ರೊ. ಗುರು ಇಷ್ಟ. ನೀನು ಮಂಗಳೂರು ವಿವಿ,…