ಜಿಲ್ಲೆಗಳು

ಮೈಸೂರು : ಮೋರಿಯಲ್ಲಿ ನವಜಾತ ಶಿಶು ಶವ ಪತ್ತೆ

ಮೈಸೂರು: ನಗರದಲ್ಲಿ ನವಜಾತ ಶಿಶು ಶವ ಪತ್ತೆಯಾಗಿದ್ದು, ನರಸಿಂಹರಾಜ ಪೊಲೀಸರು ಕೆ.ಆರ್. ಆಸ್ಪತ್ರೆಯಲ್ಲಿ ಇರಿಸಿದ್ದಾರೆ.

ನಗರದ ಆರ್.ಎಸ್. ನಾಯ್ಡುನಗರದ ಚಾಮುಂಡೇಶ್ವರಿ ದೇವಾಲಯ ಬಳಿ ಮೋರಿಯೊಂದರ ಹತ್ತಿರ ಮಂಗಳವಾರ ಮಧ್ಯಾಹ್ನ 3ಗಂಟೆ ಸಮಯದಲ್ಲಿ ಜನಿಸಿ ಎರಡು ದಿನವಾಗಿದೆ ಎನ್ನಲಾದ ನವಜಾತ ಗಂಡು ಶಿಶು ಶವ ಪತ್ತೆಯಾಗಿದೆ. ಈ ಸಂಬಂಧ ನರಸಿಂಹರಾಜ ಠಾಣೆಯಲ್ಲಿ ಸೆಕ್ಷನ್ 318 ಅಡಿ ಪ್ರಕರಣ ದಾಖಲಾಗಿದೆ. ಯಾರು ತಂದು ಹಾಕಿದ್ದಾರೆ ಎಂಬುದು ತಿಳಿದು ಬಂದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

andolanait

Recent Posts

9 ಕೈಗಾರಿಕಾ ಯೋಜನೆಗಳಿಗೆ ಅನುಮೋದನೆ ನೀಡಿದ ರಾಜ್ಯ ಸರ್ಕಾರ

ಬೆಂಗಳೂರು: 9823 ರೂ ಕೋಟಿ ಮೌಲ್ಯದ 9 ಕೈಗಾರಿಕಾ ಯೋಜನೆಗಳಿಗೆ ರಾಜ್ಯ ಸರ್ಕಾರ ಅನುಮೋದನೆ ನೀಡಿದೆ. ಈ ಹಿನ್ನೆಲೆಯಲ್ಲಿ ಸರಿ…

31 mins ago

ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿದ ದರ್ಶನ್‌ ಪತ್ನಿ ವಿಜಯಲಕ್ಷ್ಮೀ

ಮೈಸೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ಗೆ ಜಾಮೀನು ಸಿಕ್ಕಿರುವ ಹಿನ್ನೆಲೆಯಲ್ಲಿ ವಿಜಯಲಕ್ಷ್ಮೀ ದರ್ಶನ್‌ ಅವರು ನಾಡಿನ…

1 hour ago

5 ಹಾಗೂ 8ನೇ ತರಗತಿ ಪರೀಕ್ಷೆಗೆ ಮಹತ್ವದ ತೀರ್ಮಾನ ಕೈಗೊಂಡ ಕೇಂದ್ರ ಸರ್ಕಾರ

ನವದೆಹಲಿ: ಇನ್ನು ಮುಂದೆ ಐದು ಹಾಗೂ ಎಂಟನೇ ತರಗತಿಗಳಲ್ಲೂ ವಿದ್ಯಾರ್ಥಿಗಳನ್ನು ಫೇಲ್‌ ಮಾಡಬಹುದು ಎಂಬ ಹೊಸ ತಿದ್ದುಪಡಿಯನ್ನು ಕೇಂದ್ರ ಸರ್ಕಾರ…

1 hour ago

ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರದಿಂದ ದ್ವೇಷದ ರಾಜಕಾರಣ: ಕೇಂದ್ರ ಸಚಿವ ವಿ.ಸೋಮಣ್ಣ ಆರೋಪ

ಮೈಸೂರು: ಸಿ.ಟಿ.ರವಿ ತಪ್ಪು ಮಾಡಿದ್ದರೆ ಸಭಾಪತಿಗಳು ಶಿಕ್ಷೆಯ ಬಗ್ಗೆ ತೀರ್ಮಾನ ಮಾಡಬೇಕು. ಆದರೆ ರಾಜ್ಯದಲ್ಲಿ ಆ ದಿನ ಸಿ.ಟಿ.ರವಿ ಅವರನ್ನು…

2 hours ago

ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ವಿನೋದ್‌ ಕಾಂಬ್ಳಿ ಆರೋಗ್ಯ ಸ್ಥಿತಿ ಗಂಭೀರ

ಥಾಣೆ: ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ವಿನೋದ್‌ ಕಾಂಬ್ಳಿ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಅವರನ್ನು ಮಹಾರಾಷ್ಟ್ರದ ಥಾಣೆಯ ಖಾಸಗಿ ಆಸ್ಪತ್ರೆಗೆ…

2 hours ago

ಬಾಣಂತಿಯರ ಸರಣಿ ಸಾವು ಪ್ರಕರಣ: ಉನ್ನತ ತನಿಖೆಗೆ ವಿಜಯೇಂದ್ರ ಆಗ್ರಹ

ಬೆಂಗಳೂರು: ರಾಜ್ಯದಲ್ಲಿ ಬಾಣಂತಿಯರು ಸರಣಿ ಸಾವನ್ನಪ್ಪುತ್ತಿದ್ದು, ಕೂಡಲೇ ರಾಜ್ಯ ಸರ್ಕಾರ ಉನ್ನತ ತನಿಖೆಗೆ ವಹಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ…

2 hours ago