ಮೈಸೂರು: ಕಾಂಗ್ರೆಸ್ ವರಿಷ್ಠ ರಾಹುಲ್ ಗಾಂಧಿ ಅವರು ದೇಶದ 150ಕ್ಕೂ ಹೆಚ್ಚು ಸಂಘಟನೆಗಳ ಜತೆಗೂಡಿ ಹಮ್ಮಿಕೊಳ್ಳಲಿರುವ ಭಾರತ್ ಜೋಡೋ ಅಭಿಯಾನದ ರೂಪುರೇಷೆ ತಯಾರಾಗಿದ್ದು, ಸೆ.7ರಿಂದ ಆರಂಭವಾಗುವ ಯಾತ್ರೆಯು ಮೈಸೂರು ಮೂಲಕವೂ ಹಾದು ಹೋಗಲಿದೆ.
ಸೆ.೭ರಿಂದ ಕನ್ಯಾಕುಮಾರಿಯಿಂದ ಕಾಶ್ಮೀರವರೆಗೆ 150 ದಿನಗಳ, ಸರಿಸುಮಾರು 3500 ಕಿಲೋಮೀಟರ್, 12 ರಾಜ್ಯಗಳ ಮೂಲಕ ಯಾತ್ರೆ ಹಾದು ಹೋಗಲಿದೆ. ಯಾತ್ರೆಯಲ್ಲಿ ಸಾಮಾಜಿಕ ಹೋರಾಟಗಾರರಾದ ಯೋಗೇಂದ್ರ ಯಾದವ್, ಅರುಣಾ ರಾಯ ಸಹಿತ ಅನೇಕ ಸಾಮಾಜಿಕ ಹೋರಾಟಗಾರರು, ಸಂಘಟನೆಗಳು ಪಾಲ್ಗೊಳ್ಳಲಿವೆ. ಈ ಯಾತ್ರೆಯು 12 ರಾಜ್ಯಗಳು, ಎರಡು ಯೂನಿಯನ್ ಟೆರಟರಿ ಮೂಲಕ ಹಾದು ಹೋಗಲಿದೆ.
ಅದರಲ್ಲಿ ಪ್ರಮುಖವಾಗಿ ಕನ್ಯಾಕುಮಾರಿ, ತಿರುವನಂತಪುರಂ, ಕೊಚ್ಚಿನ್, ನೀಲಂಬೂರು, ಮೈಸೂರು, ಬಳ್ಳಾರಿ, ರಾಯಚೂರು, ವಿಕರಾಬಾದ್, ನಂದೇಡ್, ಜಲ್ಗನ್ ಜಾಮೋದ್, ಇಂದೋರ್, ಕೋಟಾ, ಡುಸಾ, ಅಲ್ವಾರ್, ಭುಲಂದೇಶ್ವರ್, ದಿಲ್ಲಿ, ಅಂಬಲ, ಪಠಾಣ್‌ಕೋಟ್, ಜಮ್ಮು, ಶ್ರೀನಗರದಲ್ಲಿ ಮುಕ್ತಾಯವಾಗಲಿದೆ.
ಪುನೀತ್ ಕೊಡವ ಹಾಕಿ ಅಕಾಡೆಮಿ ಆಶ್ರಯದಲ್ಲಿ ಆಯೋಜನೆ; ವಿಜೇತ ತಂಡಕ್ಕೆ ೨ ಲಕ್ಷ ರೂ. ಬಹುಮಾನ ಮಡಿಕೇರಿ: ಕೊಡವ ಹಾಕಿ…
ಪ್ರತಿದಿನ ರಾತ್ರಿ ಅರಮನೆಗೆ ದೀಪಾಲಂಕಾರ ಹೂವಿನಿಂದ ಶೃಂಗೇರಿ ದೇವಸ್ಥಾನದ ಮಾದರಿ ನಿರ್ಮಾಣ ಪುಷ್ಪ ಪ್ರಿಯರ ಕಣ್ಮನ ಸೆಳೆಯಲಿರುವ ವಿವಿಧ ಮಾದರಿಗಳು…
ಎಸ್.ಎಸ್.ಭಟ್ ಹಾಗಂತ ಇಲ್ಲಿ ಫಲಕ ಹಾಕಿಲ್ಲ, ವಾಹನ ನಿಲ್ಲುವುದು ತಪ್ಪುತ್ತಿಲ್ಲ; ಇದು ನಂಜನಗೂಡಿನ ತಾಯಿ-ಮಕ್ಕಳ ಆಸ್ಪತ್ರೆ ಆವರಣದ ಸ್ಥಿತಿ ನಂಜನಗೂಡು:…
ಮೈಸೂರು: ಕೇಂದ್ರದ ಯುಪಿಎ ಸರ್ಕಾರ ೨೦೦೫ರಲ್ಲಿ ಜಾರಿಗೆ ತಂದ ರಾಷ್ಟ್ರೀಯ ಉದ್ಯೋಗ ಖಾತರಿ ಕಾಯ್ದೆಯಡಿ ಗ್ರಾಮೀಣ ಕುಟುಂಬಗಳಲ್ಲಿ ಜೀವನೋಪಾಯಕ್ಕೆ ಭದ್ರತೆ…
ಹನೂರು : ತಾಲೂಕಿನ ಶೆಟ್ಟಳ್ಳಿ ಗ್ರಾಮದಲ್ಲಿ ಒಕ್ಕಣೆ ಕಣದಲ್ಲಿ ಹಾಕಲಾಗಿದ್ದ ರಾಗಿ ಫಸಲಿಗೆ ಬೆಂಕಿ ಬಿದ್ದು ಸುಮಾರು 30 ಕ್ವಿಂಟಾಲ್…