ಜಿಲ್ಲೆಗಳು

ಮೈಸೂರಿನಲ್ಲಿ ತಯಾರಿಕಾ ಘಟಕ ವಿಸ್ತರಣೆಗೆ ಎಬಿ-ಇನ್ಬೆವ್ ಆಸಕ್ತಿ

ಸುಮಾರು 500 ಕೋಟಿ ರೂ. ಹೂಡಿಕೆಗೆ ಮುಂದಾದ ಕಂಪೆನಿ

ಬೆಂಗಳೂರು :ಬಿಯರ್ ಮತ್ತು ಇತರ ಪಾನೀಯ ತಯಾರಿಕಾ ಕಂಪೆನಿ ಎಬಿ-ಇನ್ಬೆವ್ ನ ಅಧ್ಯಕ್ಷ ಹಾಗೂ ಸಿಇಓ (ಎಪಿಎಸಿ) ಜಾನ್ ಕ್ರಾಪ್ ಅವರು ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾಗಿ ರಾಜ್ಯದಲ್ಲಿ ಇನ್ನಷ್ಟು ಹೂಡಿಕೆ ಮಾಡುವ ಉತ್ಸುಕತೆ ತೋರಿದರು.

ಎಬಿ-ಇನ್ಬೆವ್ನ ತಯಾರಿಕಾ ಘಟಕ ಈಗಾಗಲೇ ಮೈಸೂರಿನಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಸಂಸ್ಥೆಯು ಸುಮಾರು 500 ಕೋಟಿ ರೂ. ಹೂಡಿಕೆಯೊಂದಿಗೆ ಈ ಘಟಕವನ್ನು ವಿಸ್ತರಣೆ ಮಾಡಲು ಮುಂದಾಗಿದೆ. ರಾಜ್ಯದ ಕೈಗಾರಿಕಾ ಸೌಲಭ್ಯಗಳು ಉತ್ತಮವಾಗಿದ್ದು, ಅತ್ಯುತ್ತಮ ಅಬಕಾರಿ ನೀತಿ ಯನ್ನು ಹೊಂದಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದ ಅವರು ತಮ್ಮ ಕಂಪೆನಿಯು ಇನ್ನಷ್ಟು ಹೂಡಿಕೆಯನ್ನು ರಾಜ್ಯದಲ್ಲಿ ಮಾಡಲು ಉತ್ಸುಕವಾಗಿದೆ ಎಂದು ತಿಳಿಸಿದರು.

ಇದಕ್ಕೆ ಸ್ಪಂದಿಸಿದ ಮುಖ್ಯಮಂತ್ರಿಗಳು ಅಗತ್ಯವಿರುವ ಎಲ್ಲ ಸಹಕಾರ ನೀಡುವುದಾಗಿ ತಿಳಿಸಿದರು.
ಎಬಿ-ಇನ್ಬೆವ್ ವಿಶ್ವದ ಫಾರ್ಚೂನ್ 500 ಕಂಪೆನಿಗಳಲ್ಲಿ ಒಂದಾಗಿದ್ದು, 150 ದೇಶಗಳಲ್ಲಿ ತಯಾರಿಕಾ ಘಟಕಗಳನ್ನು ಹೊಂದಿದೆ. ಭಾರತದಲ್ಲಿ ತನ್ನ ಕೇಂದ್ರ ಕಚೇರಿಯನ್ನು ಬೆಂಗಳೂರಿನಲ್ಲಿ ಹೊಂದಿದೆ. ಮೈಸೂರು ಘಟಕದಲ್ಲಿ ಸುಮಾರು 2000 ಉದ್ಯೋಗಿಗಳಿದ್ದು, ಶೇ. 79 ರಷ್ಟು ಕಾರ್ಯಾಚರಣೆಯನ್ನು ನವೀಕರಿಸಬಹುದಾದ ಇಂಧನ ಬಳಕೆಯ ಮೂಲಕ ಮಾಡುತ್ತಿದೆ. ಈ ಬ್ರೂವರಿಯ ವಿಸ್ತರಣೆಯಿಂದ ರಾಜ್ಯದ ಬೊಕ್ಕಸಕ್ಕೆ 200-300 ಕೋಟಿ ರೂ. ಹೆಚ್ಚುವರಿ ತೆರಿಗೆ ಸಂಗ್ರಹವಾಗಲಿದ್ದು, ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಹೆಚ್ಚಿನ ಉದ್ಯೋಗ ಸೃಜನೆಯಾಗಲಿದೆ.
ಮುಖ್ಯಮಂತ್ರಿಯವರ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ್ ಪ್ರಸಾದ್, ಮುಖ್ಯಮಂತ್ರಿಯವರ ಕಾರ್ಯದರ್ಶಿಗಳಾದ ಎಂ.ಎಸ್. ಶ್ರೀಕರ್ ಮತ್ತು ಜಯರಾಂ ರಾಯಪುರ, ಎಬಿ-ಇನ್ಬೆವ್ ಇಂಡಿಯಾ ಮತ್ತು ಸೌತ್ ಈಸ್ಟ್ ಏಷ್ಯಾದ ಅಧ್ಯಕ್ಷ ಕಾರ್ತಿಕೇಯ ಶರ್ಮಾ, ಚೀಫ್ ಲೀಗಲ್ ಅಂಡ್ ಕಾರ್ಪೊರೇಟ್ ಅಫೇರ್ಸ್ ಆಫೀಸರ್ ಕ್ರೆಗ್ ಕೇಟರ್ ಬರ್ಗ್, ಉಪಾಧ್ಯಕ್ಷೆ ಅನಸೂಯಾ ರೇ, ಪ್ರಾದೇಶಿಕ ನಿರ್ದೇಶಕ ವಿನೋದ್ ಬಾಬು ಮೊದಲಾದವರು ಉಪಸ್ಥಿತರಿದ್ದರು.

andolanait

Recent Posts

ದ್ವಿತೀಯ ಪಿಯುಸಿ ಫಲಿತಾಂಶ: ಇದೊಂದು ಐತಿಹಾಸಿಕ ದಿನ ಎಂದ ಮಧು ಬಂಗಾರಪ್ಪ

ಬೆಂಗಳೂರು: ಈ ಬಾರಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ 5.46,698 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಕರ್ನಾಟಕಕ್ಕೆ ಮೊದಲ ಬಾರಿ ಶೇ.86.48ರಷ್ಟು ಫಲಿತಾಂಶ ಬಂದಿದೆ…

9 hours ago

ಎರಡು ಕ್ಷೇತ್ರಗಳ ಉಪಚುನಾವಣೆ ಮತದಾನ ಮುಕ್ತಾಯ: ವೋಟಿಂಗ್‌ ಪ್ರಮಾಣವೆಷ್ಟು.?

ದಾವಣಗೆರೆ/ಬಾಗಲಕೋಟೆ: ರಾಜ್ಯದ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಇಂದು ಮತದಾನ ನಡೆದಿದ್ದು, ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.…

9 hours ago

ಚಾಮುಂಡಿಬೆಟ್ಟದಲ್ಲಿ ನಡೆಯುತ್ತಿದ್ದ ಕಾಮಗಾರಿಗಳಿಗೆ ಹೈಕೋರ್ಟ್‌ ತಡೆಯಾಜ್ಞೆ

ಬೆಂಗಳೂರು: ನಾಡಿನ ಅಧಿದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಕೇಂದ್ರ ಸರ್ಕಾರದ ಅನುದಾನದಡಿ ನಡೆಯುತ್ತಿದ್ದ ಕಾಮಗಾರಿಗಳಿಗೆ ಹೈಕೋರ್ಟ್‌ ತಡೆಯಾಜ್ಞೆ ನೀಡಿದೆ. ಹೈಕೋರ್ಟ್‌…

10 hours ago

ಬೆಂಗಳೂರಿನಲ್ಲಿ ಮುಂದಿನ ಮೂರು ದಿನ ಬಿಸಿ ಗಾಳಿ ಎಚ್ಚರಿಕೆ

ಬೆಂಗಳೂರು: ನಗರದಲ್ಲಿ ಮುಂದಿನ ಮೂರು ದಿನಗಳ ಕಾಲ ಅಧಿಕ ಉಷ್ಣಾಂಶ ದಾಖಲಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಬಿಸಿ…

10 hours ago

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಗೆದ್ದರೆ ಆರು ಗ್ಯಾರಂಟಿ ಜಾರಿ: ಪ್ರಧಾನಿ ನರೇಂದ್ರ ಮೋದಿ

ಕೋಲ್ಕತ್ತಾ: ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಬಿಜೆಪಿ ಗೆದ್ದರೆ ಜನರಿಗೆ ಆರು ಗ್ಯಾರಂಟಿಗಳನ್ನು ನೀಡುತ್ತೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.…

10 hours ago

ಭಾರತ ತಲುಪಿದ ಗ್ರೀನ್‌ ಆಶಾ: 15,000 ಟನ್‌ ಎಲ್‌ಪಿಜಿ ಹೊತ್ತು ತಂದ ನೌಕೆ

ಮುಂಬೈ: ಪಶ್ಚಿಮ ಏಷ್ಯಾ ಸಂಘರ್ಷದ ಮಧ್ಯೆ ಭಾರತದ ಧ್ವಜ ಹೊಂದಿರುವ 15,400 ಟನ್‌ ಎಲ್‌ಪಿಜಿ ಹೊತ್ತ ಟ್ಯಾಂಕರ್‌ ಹಾರ್ಮುಜ್‌ ಜಲಸಂಧಿಯನ್ನು…

10 hours ago