Light
Dark

ಮೈಸೂರು : ಚಾಮುಂಡೇಶ್ವರಿ ವಿಧಾನಸಭೆ ಕ್ಷೇತ್ರದಲ್ಲಿ ಪಾದಯಾತ್ರೆಗೆ ಸಿದ್ದರಾಮಯ್ಯ ಚಾಲನೆ

ಮೈಸೂರು : ಸ್ವಾತಂತ್ರ್ಯದ ಅಮೃತ ಮಹೋತ್ಸವ ಅಂಗವಾಗಿ ಮೈಸೂರಿನ ಚಾಮುಂಡೇಶ್ವರಿ ವಿಧಾನಸಭೆ ಕ್ಷೇತ್ರದಲ್ಲಿ ಹಮ್ಮಿಕೊಂಡಿದ್ದ ಪಾದಯಾತ್ರೆಗೆ ವಿಪಕ್ಷ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಸಿದ್ದರಾಮಯ್ಯ ಅವರು ಸ್ವಾತಂತ್ರ್ಯ ಹೋರಾಟಕ್ಕಾಗಿ ಬದುಕು ಸವೆಸಿದ ಧೀಮಂತ ಚೇತನಗಳಿಗೆ ನುಡಿ ನಮನ ಅರ್ಪಿಸಿದರು.

ಈ ಕಾರ್ಯಕ್ರಮದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಧ್ರುವ ನಾರಾಯಣ, ಮೈಸೂರು ಗ್ರಾಮಾಂತರ ಕಾಂಗ್ರೆಸ್ ನ ಜಿಲ್ಲಾಧ್ಯಕ್ಷ ಡಾ. ವಿಜಯಕುಮಾರ್, ಮುಖಂಡರಾದ ಮರಿಗೌಡ, ಹರೀಶ್ ಗೌಡ ಸೇರಿದಂತೆ ಇನ್ನಿತರರು ಹಾಜರಿದ್ದರು

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ