ಜಿಲ್ಲೆಗಳು

ಮೈಸೂರಿನ ಚಾಮುಂಡೇಶ್ವರಿ ದರ್ಶನ ಪಡೆಯಲು ವಸ್ತ್ರ ಸಂಹಿತೆ ಜಾರಿಗಾಗಿ ಮನವಿ

ಮೈಸೂರು :  ಚಾಮುಂಡೇಶ್ವರಿ ದರ್ಶನಕ್ಕೆ ಪ್ರತಿಯೊಬ್ಬರೂ ಸಾಂಪ್ರದಾಯಿಕ ಉಡುಗೆಗಳನ್ನೇ ತೊಟ್ಟು ಬರಬೇಕೆಂದು ಒತ್ತಾಯಿಸಿ, ಸರ್ವ ಅರ್ಜತೆ ಫೌಂಡೇಶನ್ ಹಾಗೂ ಇತರೆ ಸಂಘಟನೆಗಳು ಚಾಮುಂಡಿ ಬೆಟ್ಟದ ಮುಖ್ಯ ಕಾರ್ಯದರ್ಶಿ ಗೋವಿಂದ್ ರಾಜ್ ಅವರಿಗೆ ಮನವಿ ಸಲ್ಲಿಸಿದ್ದಾರೆ.

ಚಾಮುಂಡಿ ಅಮ್ಮನವರ ದರ್ಶನಕ್ಕೆ ದೇಶ ವಿದೇಶಗಳಿಂದ ಪ್ರವಾಸಿಗರು ಹಾಗೂ ಭಕ್ತರು ಲಕ್ಷಾಂತರ ಸಂಖ್ಯೆಯಲ್ಲಿ ಆಗಮಿಸುತ್ತಾರೆ. ಮೈಸೂರು ಅರಸರ ಕೊಡುಗೆಗಳಿಂದ ಮೈಸೂರು ಪ್ರವಾಸಿ ತಾಣವಾಗಿ ಪ್ರಸಿದ್ಧಿ ಪಡೆದಿದೆ. ಚಾಮುಂಡೇಶ್ವರಿ ಬೆಟ್ಟ ಧಾರ್ಮಿಕ ಕೇಂದ್ರವಾಗಿದ್ದು, ದೇಶದ ಶಕ್ತಿ ಪೀಠಗಳಲ್ಲೊಂದು. ಆದ್ದರಿಂದ ಇಲ್ಲಿಗೆ ಬರುವ ಭಕ್ತರಿಗೆ ವಸ್ತ್ರಸಂಹಿತೆಯನ್ನು ಜಾರಿಗೊಳಿಸುವಂತೆ ಆಗ್ರಹಿಸಿದ್ದಾರೆ.ಉಡುಪಿ, ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ, ಕೇರಳದ ಗುರುವಾಯೂರ್​ನಲ್ಲಿ ಇರುವಂತೆ ವಸ್ತ್ರ ಸಂಹಿತೆಯನ್ನು ಎಲ್ಲರೂ ಪಾಲಿಸಬೇಕು. ಪುರುಷರು ಪಂಚೆ ಅಥವಾ ಪ್ಯಾಂಟ್ ಶರ್ಟ್ ಧರಿಸಿ ಹಾಗೂ ಮಹಿಳೆಯರು ಸೀರೆ ಅಥವಾ ಚೂಡಿದಾರ್‌ಗಳನ್ನು ಹಾಕಿಕೊಂಡು ಬರುವಂತೆ ಮನವಿ ಮಾಡಲಾಯಿತು. ಈ ಸಂದರ್ಭದಲ್ಲಿ ಸರ್ವ ಅರ್ಜಿತೆ ಫೌಂಡೇಶನ್ ಅಧ್ಯಕ್ಷರಾದ ಪದ್ಮ ಮತ್ತಿತರರು ಉಪಸ್ಥಿತರಿದ್ದರು.

andolanait

Recent Posts

ಕೋಲ್ಕತ್ತಾ: ಟೆನಿಸ್‌ ದಂತಕಥೆ ಲಿಯಾಂಡರ್‌ ಪೇಸ್‌ ಬಿಜೆಪಿ ಸೇರ್ಪಡೆ

ಕೋಲ್ಕತ್ತಾ: ಪಶ್ಚಿಮ ಬಂಗಾಳ ಚುನಾವಣೆಗೆ ದಿನಗಣನೆ ಆರಂಭವಾಗಿರುವ ಬೆನ್ನಲ್ಲೇ ಭಾರತೀಯ ಟೆನಿಸ್‌ ಐಕಾನ್‌ ಲಿಯಾಂಡರ್‌ ಪೇಸ್‌ ಇಂದು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.…

3 seconds ago

ಖಾಸಗಿ ಶಾಲೆಗಳಿಂದ ಶುಲ್ಕ ಏರಿಕೆ: ಮಧ್ಯಮ ವರ್ಗದ ಪೋಷಕರಿಗೆ ಸಂಕಷ್ಟ

ಬೆಂಗಳೂರು: ಖಾಸಗಿ ಶಾಲೆಗಳು ಪರೀಕ್ಷೆಗಳು ಮುಗಿಯುತ್ತಿದ್ದಂತೆಯೇ 2026-27ನೇ ಸಾಲಿನ ಶುಲ್ಕವನ್ನು 5-10%, ಮತ್ತೆ ಕೆಲವು 10-15% ವರೆಗೆ ಏರಿಕೆ ಮಾಡಿವೆ.…

48 seconds ago

ಬೂದಿಪಡಗ ಆನೆ ಶಿಬಿರದಿಂದ 63 ವರ್ಷದ ಗಜೇಂದ್ರ ಆನೆ ಮತ್ತಿಗೋಡು ಶಿಬಿರಕ್ಕೆ ಸ್ಥಳಾಂತರ

ಬೆಂಗಳೂರು: ಚಾಮರಾಜನಗರ ಜಿಲ್ಲೆ ಬೂದಿಪಡಗ ಆನೆ ಶಿಬಿರದಲ್ಲಿ ಒಂಟಿಯಾಗಿದ್ದ 63 ವರ್ಷದ ಗಜೇಂದ್ರ ಆನೆಯನ್ನು ಅರಣ್ಯ ಸಚಿವ ಈಶ್ವರ ಖಂಡ್ರೆ…

7 mins ago

ಡಿಜಿಟಲ್‌ ಪಾವತಿಗೆ ಹೊಸ ಮಾರ್ಗಸೂಚಿ ಪ್ರಕಟಿಸಿದ ಆರ್‌ಬಿಐ

ನವದೆಹಲಿ: ಡಿಜಿಟಲ್‌ ವಹಿವಾಟುಗಳನ್ನು ಹೆಚ್ಚು ಸುರಕ್ಷಿತಗೊಳಿಸಲು ಹಾಗೂ ವಂಚನೆಗಳನ್ನು ತಡೆಯುವ ಉದ್ದೇಸದಿಂದ ರಿಸರ್ವ್‌ ಬ್ಯಾಂಕ್‌ ಆಫ್‌ ಇಂಡಿಯಾ ಹೊಸ ಮಾರ್ಗಸೂಚಿ…

16 mins ago

ನಾಳೆ ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ದ್ರೌಪತಿ ಮುರ್ಮು ಭೇಟಿ

ತುಮಕೂರು: ನಾಳೆ(ಏಪ್ರಿಲ್.‌1ರಂದು) ತ್ರಿವಿಧ ದಾಸೋಹಿ, ಶತಾಯುಷಿ ಸಿದ್ಧಗಂಗಾ ಮಠದ ಶಿವೈಕ್ಯ ಶಿವಕುಮಾರ ಸ್ವಾಮೀಜಿಗಳ 119ನೇ ಜನ್ಮದಿನೋತ್ಸವ ಅದ್ಧೂರಿಯಾಗಿ ನಡೆಯಲಿದೆ. ಈ…

42 mins ago

ಹಾಸನ: ಹೆತ್ತ ತಾಯಿ ಮೇಲೆ ಕಲ್ಲು ಎತ್ತಿಹಾಕಿ ಕೊಲೆಗೆ ಯತ್ನಿಸಿದ ಮಗ: ಕಾರಣ ಇಷ್ಟೇ

ಹಾಸನ: 40 ವರ್ಷವಾದರೂ ತನಗೆ ಮದುವೆ ಮಾಡಿಸಿಲ್ಲ ಎಂಬ ಕಾರಣಕ್ಕೆ ಹೆತ್ತ ತಾಯಿ ಮೇಲೆ ಕಲ್ಲು ಎತ್ತಿ ಹಾಕಿ ಮಗನೇ…

53 mins ago