ಎಚ್.ಎಸ್.ದಿನೇಶ್‌ಕುಮಾರ್
ಮೈಸೂರು: ದಸರಾದಲ್ಲಿ ಈ ಬಾರಿ ಶಾಲಾ ಮಕ್ಕಳನ್ನು ಒಳಗೊಂಡ ಮಕ್ಕಳ ದಸರಾ ಸೆ.29ರಿಂದ ಎರಡು ದಿನ ನಡೆಯಲಿದ್ದು, ಮಕ್ಕಳೇ ನಡೆಸಿಕೊಡಲಿರುವ ವಿವಿಧ ಕಾರ್ಯಕ್ರಮಗಳು ದಸರೆಗೆ ಮೆರುಗು ನೀಡಲಿವೆ.
ಮಕ್ಕಳ ದಸರಾ ಕಾರ್ಯಕ್ರಮದಲ್ಲಿ ಜಿಲ್ಲೆಯ ವಿವಿಧ ಶಾಲೆಗಳ 7 ರಿಂದ 10ನೇ ತರಗತಿ ವರೆಗಿನ 1 ಸಾವಿರ ಮಕ್ಕಳು ತಮ್ಮ ಪ್ರತಿಭೆ ಪ್ರದರ್ಶಿಸಲಿದ್ದಾರೆ. ಜಿಲ್ಲೆಯಲ್ಲಿ 2 ಲಕ್ಷ ಮಕ್ಕಳಿದ್ದು, ಮಕ್ಕಳ ಪ್ರತಿಭೆಯನ್ನು ಮಾನದಂಡವಾಗಿಟ್ಟುಕೊಂಡು ಅಧಿಕಾರಿಗಳು ಹಾಗೂ ಶಿಕ್ಷಕರು 1 ಸಾವಿರ ಮಕ್ಕಳನ್ನು ಮಕ್ಕಳ ದಸರಾ ಕಾರ್ಯಕ್ರಮಕ್ಕೆ ಆ್ಂಕೆು ಮಾಡಲಿದ್ದಾರೆ.
ಜೂನಿಯರ್ ಮಹಾರಾಣಿ ಕಾಲೇಜಿನ ಆವರಣದಲ್ಲಿ ಎರಡು ದಿನಗಳ ಕಾಲ ನಡೆಯುವ ಮಕ್ಕಳ ದಸರಾದಲ್ಲಿ ಸಂಗೀತ, ನೃತ್ಯ, ಚರ್ಚಾ ಸ್ಪರ್ಧೆ, ಆಶುಭಾಷಣ, ಜಾನಪದ, ಚಲನಚಿತ್ರಗೀತೆ, ರಸಪ್ರಶ್ನೆ, ಪ್ರಬಂಧ, ವಿವಿಧ ವೇಷಭೂಷಣ ಸ್ಪರ್ಧೆ ಹೀಗೆ 31 ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ. ಇದರೊಂದಿಗೆ ದೇಸಿ ಆಟಗಳಾದ ಲಗ್ಗೋರಿ, ಬುಗುರಿ, ಚೌಕಾಬಾರ, ಕುಂಟೆಬಿಲ್ಲೆ, ಹಗ್ಗಜಗ್ಗಾಟ ಸ್ಪರ್ಧೆಗಳು ನಡೆಯಲಿವೆ.
ವಿಶೇಷಚೇತನ ಮಕ್ಕಳು ಭಾಗಿ: ವಿಶೇಷಚೇತನ ಮಕ್ಕಳಿಗಾಗಿ ವೇಶಭೂಷಣ ಸ್ಪರ್ಧೆ, ನೃತ್ಯ ಪ್ರದರ್ಶನ ಏರ್ಪಡಿಸಲಾಗಿದೆ.
ಹಾಡಿ ಮಕ್ಕಳಿಂದ ಕಾರ್ಯಕ್ರಮ: ಮಾವುತರು ಹಾಗೂ ಕಾವಾಡಿಗಳ ಮಕ್ಕಳನ್ನೂ ಮಕ್ಕಳ ದಸರಾದಲ್ಲಿ ಜೊತೆಯಾಗಿಸಿಕೊಳ್ಳಲಾಗಿದೆ. ಅವರಿಂದ ಸೆ.29ರ ಮದ್ಯಾಹ್ನ ಸಾಂಸ್ಕೃತಿಕ ಕಾರ್ಯಕ್ರಮ ಏರ್ಪಡಿಸಲಾಗಿದೆ.
9 ಸ್ಟಾಲ್‌ಗಳು: ಜಗನ್ಮೋಹನ ಅರಮನೆ ಆವರಣದಲ್ಲಿ ಶಿಕ್ಷಣ ಇಲಾಖೆ ವತಿಯಿಂದ 9 ಮಳಿಗೆಗಳನ್ನು ನಿರ್ಮಾಣ ಮಾಡಲಾಗುತ್ತಿದ್ದು, ಅಲ್ಲಿ ಮಕ್ಕಳಿಗಾಗಿ ಸರ್ಕಾರ ರೂಪಿಸಿರುವ ಸವಲತ್ತುಗಳು, ವಿಜ್ಞಾನ ಮತ್ತು ತಂತ್ರಜ್ಞಾನ, ಕರಕುಶಲ, ಚಿತ್ರಕಲೆಗಳ ಪ್ರದರ್ಶನ ಏರ್ಪಡಿಸಲಾಗುತ್ತಿದೆ.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…