Mysore
27
few clouds

Social Media

ಗುರುವಾರ, 16 ಜನವರಿ 2025
Light
Dark

ಮೈಸೂರಿಗೆ ಇಂದು ಸಿಎಂ ಬೊಮ್ಮಾಯಿ ಆಗಮನ

ಮೈಸೂರು -75 ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಮೈಸೂರು ವಿವಿ ವತಿಯಿಂದ ಆಯೋಜಿಸಿರುವ ಯುವಜನ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾಗಲು ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮೈಸೂರಿಗೆ ಆಗಮಿಸಲಿದ್ದಾರೆ.

ಯುವಜನ ಮಹೋತ್ಸವದ ಜೊತೆಯಲ್ಲಿ ವಿಶ್ವವಿದ್ಯಾಲಯದ ಇಂಜಿನಿಯರಿಂಗ್ ಕಾಲೇಜು ಕಟ್ಟಡ ಮತ್ತು ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನೆಯು ನಡೆಯಲಿದೆ. ಮಹಾರಾಜ ಕಾಲೇಜು ಮೈದಾನದಲ್ಲಿ ಯುವಜನ ಮಹೋತ್ಸವ ಕಾರ್ಯಕ್ರಮಕ್ಕೆ ವೇದಿಕೆ ಸಿದ್ಧಪಡಿಸಲಾಗಿದೆ. ಜಿಲ್ಲೆಯ ಎಲ್ಲಾ ಕಾಲೇಜುಗಳಿಂದ ಸುಮಾರು 25,000 ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸುವ ನಿರೀಕ್ಷೆ ಇದೆ ಆದ್ದರಿಂದ ಇದಕ್ಕೆ ತಕ್ಕಂತೆ ಆಸನಗಳ ವ್ಯವಸ್ಥೆ ಮಾಡಲಾಗಿದೆ. ವೇದಿಕೆ ಕಾರ್ಯಕ್ರಮ ಎಲ್ಲರಿಗೂ ಸಮರ್ಪಕವಾಗಿ ಕಾಣಲು ಆಯಕಟ್ಟಿನ ಸ್ಥಳಗಳಲ್ಲಿ ಒಟ್ಟು 12 ಬೃಹತ್ ಎಲ್ಇಡಿ ಪರದೆಗಳನ್ನು ಅಳವಡಿಸಲಾಗಿದೆ.

ಬೆಳಿಗ್ಗೆ 9:30ಕ್ಕೆ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಪ್ರಾರಂಭವಾಗುತ್ತವೆ. ದೇಶಭಕ್ತಿ ನೃತ್ಯ ಕಲೆಗಳ ಕ್ಷಣವನ್ನು ವಿವಿಧ ಕಾಲೇಜಿನ ವಿದ್ಯಾರ್ಥಿಗಳ ತಂಡಗಳು ನೀಡಲಿವೆ. ಬೆಳಿಗ್ಗೆ 11 ಗಂಟೆಯ ನಂತರ ಮುಖ್ಯಮಂತ್ರಿ ಅವರು ಸಭಾ ಕಾರ್ಯಕ್ರಮದಲ್ಲಿ ಸ್ವಿಚ್ ಒತ್ತುವ ಮೂಲಕ ವಿವಿಧ ಕಟ್ಟಡಗಳನ್ನು ಉದ್ಘಾಟಿಸಲಿದ್ದಾರೆ.

ಕಕಾರ್ಯಕ್ರಮದ ಪ್ರಮುಖ ರಾಕಿಂಗ್ ಸ್ಟಾರ್ ಯಶ್ ಕಾಣಿಸಿಕೊಳ್ಳಲಿದ್ದಾರೆ. ವಿದ್ಯಾರ್ಥಿ ಸಮೂಹವನ್ನು ಉದ್ದೇಶಿಸಿ ಅವರು ಮಾತನಾಡಲಿದ್ದಾರೆ ಸಭಾ ಕಾರ್ಯಕ್ರಮದ ಬಳಿಕ  ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಸಂಗೀತ ರಸಧಾರೆ ಎನ್ನುವರಿಸಲಿದ್ದಾರೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ