ಈ ರಸ್ತೆಯಲ್ಲಿ ಎರಡು ಆಸ್ಪತ್ರೆಗಳಿದ್ದು ಗರ್ಭಿಯರು ಓಡಾಡಂದತಹ ಸ್ಥಿತಿ ನಿರ್ಮಾಣವಾಗಿದೆ
ಆರ್.ಎಸ್.ಆಕಾಶ್
ಮೈಸೂರು: ಸುಣ್ಣದಕೇರಿಯ ನಾಲಾಬೀದಿಯಲ್ಲಿ ಯುಜಿಡಿ ಮತ್ತು ಚರಂಡಿ ದುಸ್ಥಿತಿಯಲ್ಲಿದ್ದು, ಸ್ಥಳೀಯರ ಅಹವಾಲು ಆಲಿಸದೆ ನಗರಪಾಲಿಕೆ ಕಣ್ಣುಮುಚ್ಚಿ ಕುಳಿತಿದೆ.
ಸುಣ್ಣದಕೇರಿಯ ನಾಲಾಬೀದಿಯಲ್ಲಿ ಯುಜಿಡಿ ಹಾಗೂ ಚರಂಡಿ ದುರಸ್ತಿಯಲ್ಲಿದ್ದು, ರಸ್ತೆ ಸಂಪರ್ಕವೇ ಕಡಿತವಾಗಿದೆ. ಇದರಿಂದ ಜನರಿಗೆ ಓಡಾಡಲು ತೊಂದರೆಯಾಗುತ್ತಿದೆ. ೬ ತಿಂಗಳ ಹಿಂದೆ ಯಜಿಡಿ ಲೈನ್ ಮಾಡಲು ಕಾಮಗಾರಿ ಆರಂಭಿಸಿದ್ದು, ಅದನ್ನು ಪೂರ್ಣಗೊಳಿಸದೆ ಪಾಲಿಕೆಯವರು ಹಾಗೇ ಬಿಟ್ಟಿದ್ದಾರೆ. ಈಗ ಚರಂಡಿ ನಿರ್ಮಾಣಕ್ಕೆ ಕೈ ಹಾಕಿದ್ದು, ಅದೂ ನಿಧಾನಗತಿಯಲ್ಲಿ ಸಾಗುತ್ತಿದೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇದು ಚಾಮರಾಜ ಜೋಡಿ ರಸ್ತೆಯಿಂದ ಅಗ್ರಹಾರದ ವಾಣಿವಿಲಾಸ ರಸ್ತೆಯನ್ನು ಸಂಪರ್ಕಕಿಸುವ ರಸ್ತೆಯಾಗಿದ್ದು, ಮುಗಿಯದ ಕಾಮಗಾರಿಯಿಂದ ಸ್ಥಳೀಯರಿಗೆ ಸಾಕಷ್ಟು ತೊಂದರೆಯಾಗುತ್ತಿದೆ. ಈ ಬಡಾವಣೆಯ ಮನೆಗಳಿಗೆ ಸುರಂಗದ ಮೂಲಕ ವಿದ್ಯುತ್ ಸಂಪರ್ಕ ಕಲ್ಪಿಸಲಾಗಿದೆ. ಈ ಸಂಪರ್ಕಿತ ವೈರ್‌ಗಳಿಗೆ ಹಾನಿಯಾಗಿದ್ದು, ಅದನ್ನು ನಿವಾಸಿಗಳೇ ಸ್ವಂತ ಖರ್ಚಿನಲ್ಲಿ ಸರಿಪಡಿಸಿಕೊಳ್ಳುವಂತೆ ಸೂಚಿಸಿರುವುದು ಆಕ್ರೋಶಕ್ಕೆ ಕಾರಣವಾಗಿದೆ.
ಕಾಮಗಾರಿ ಅಪೂರ್ಣವಾಗಿರುವುದರಿಂದ ಮಳೆ ಬಂದಾಗ ಕಾಮಗಾರಿಗೆಂದು ತೆಗೆದಿರುವ ಗುಂಡಿಗಳಲ್ಲಿ ಮಳೆ ನೀರು ನಿಂತು ಕಲುಷಿತಗೊಳ್ಳುತ್ತಿದೆ. ಅದರಿಂದ ಸೊಳ್ಳೆ ಸಂತತಿ ಹೆಚ್ಚಾಗಿ ರೋಗರುಜಿನಗಳಿಗೆ ಎಡೆಮಾಡಿಕೊಡುತ್ತದೆ. ಅದೇ ರಸ್ತೆಯಲ್ಲಿರುವ ಆಯುರ್ವೇದ ಆಸ್ಪತ್ರೆ ಮುಂಬಾಗಿಲಿಗೆ ಕಲುಷಿತ ನೀರು ತಾಗುತ್ತಿದೆ. ಇದರಿಂದ ದುರ್ವಾಸನೆ ಬೀರುತ್ತಿದೆ. ಕೆ.ಆರ್.ಕ್ಷೇತ್ರ ಶಾಸಕರು ಮತ್ತು ಈ ವಾರ್ಡಿನ ನಗರಪಾಲಿಕೆ ಸದಸ್ಯರು ಇತ್ತ ಗಮನ ಹರಿಸದೆ ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಸ್ಥಳೀಯರು ದೂರಿದ್ದಾರೆ.
ರಸ್ತೆ ಕಾಮಗಾರಿ ಪೂರ್ಣಗೊಳ್ಳದೆ ಇರುವುದರಿಂದ ನಮಗೆ ಬಹಳ ಸಮಸ್ಯೆಯಾಗುತ್ತಿದೆ. ಇಲ್ಲಿನ ಜನರಿಗೆ ಇದರಿಂದ ಓಡಾಡಲು ತೊಂದರೆಯಾಗುತ್ತಿದೆ. ಮಳೆ ಬಂದರೆ ನೀರೆಲ್ಲಾ ಶೇಖರಣೆಯಾಗುದೆ; ಸೊಳ್ಳೆಗಳ ಸಂತತಿ ಹೆಚ್ಚುತ್ತಿದೆ.
– ಗಣೇಶ್, ಸ್ಥಳೀಯರು.
ಮೈಸೂರು: ಅಕ್ಟೋಬರ್ 10ರಂದು ಮೈಸೂರಿನಲ್ಲಿ ಮಹಿಷ ದಸರಾ ಆಚರಣೆ ನಡೆಯಲಿದೆ. ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9 ಗಂಟೆಗೆ ಮಹಿಷ ಪ್ರತಿಮೆಗೆ…
ಬೆಂಗಳೂರು: ನಗರಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಇಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…
ಚಾಮರಾಜನಗರ: ಗುಂಡ್ಲುಪೇಟೆಯ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಅರಣ್ಯ ರಸ್ತೆಯಲ್ಲಿ ರಸ್ತೆ ದಾಟುತ್ತಿದ್ದ ಕಾಡಾನೆಯ ಮೇಲೆಯೇ ಲಾರಿ ಚಲಾಯಿಸಲು ಯತ್ನಿಸಿದ…
ಮಂಡ್ಯ: ಇದೇ ಅಕ್ಟೋಬರ್.11ಕ್ಕೆ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ನಲ್ಲಿ ಕಾವೇರಿ ಆರತಿ ಕಾರ್ಯಕ್ರಮ ನಡೆಯಲಿದೆ. ದಸರಾ ಉತ್ಸವದ ಪ್ರಯುಕ್ತ ನಡೆಯಲಿರುವ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಹನೂರು-ಪಾಲಾರ್ (ಎಲ್ಲೇಮಾಳ-ಕೌದಳ್ಳಿ) ಜಿಲ್ಲಾ ಮುಖ್ಯ…
ಮೈಸೂರು: ಗಣೇಶ ಹಬ್ಬಕ್ಕೆ ಹಾಸನದಿಂದ ಮೈಸೂರಿಗೆ ಬಂದಿದ್ದ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. 20 ವರ್ಷದ ಗೌರವ್…