Mysore
22
overcast clouds

Social Media

ಶನಿವಾರ, 22 ಆಗಸ್ಟ್ 2026
Light
Dark

ಗಾಂಜಾ ಮಾರಾಟ: ಓರ್ವನ ಬಂಧನ

ಮೈಸೂರು: ಗಾಂಜಾ ಮಾರಾಟ ಮಾಡುತ್ತಿದ್ದ ಓರ್ವನನ್ನು ಬಂಧಿಸಿರುವ ಸಿಸಿಬಿ ಪೊಲೀಸರು, 2 ಕೆ.ಜಿ 570 ಗ್ರಾಂ ಗಾಂಜಾದೊಂದಿಗೆ 3ಸಾವಿರ ರೂ. ನಗದು, ಒಂದು ಮೊಬೈಲ್, ದ್ವಿ ಚಕ್ರ ವಾಹನ ವಶಪಡಿಸಿಕೊಂಡಿದ್ದಾರೆ.

ಖಚಿತ ಮಾಹಿತಿ ಮೇರೆಗೆ ಡಿ. 8 ರಂದು ರಾಜೀವ ನಗರದ 1ನೇ ಹಂತದ ಮನೆಯೊಂದರ ಮೇಲೆ ದಾಳಿ ಮಾಡಿ,ಅಲ್ಲಿ ಗಾಂಜಾವನ್ನು ಇಟ್ಟುಕೊಂಡು ಗಿರಾಕಿಗಳನ್ನು ಬರಮಾಡಿಕೊಂಡು ಅವರಿಗೆ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಬಂಧಿಸಲಾಗಿದೆ.ಈ ಸಂಬಂಧ ಉದಯಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

ಡಿಸಿಪಿ ಎಂ.ಎಸ್. ಗೀತ, ಸಿಸಿಬಿಯ ಎಸಿಪಿ ಸಿ.ಕೆ.ಅಶ್ವತನಾರಾಯಣ ಮಾರ್ಗದರ್ಶನದಲ್ಲಿ ಸಿಸಿಬಿಯ ಇನ್ಸ್‌ಪೆಕ್ಟರ್ ಎ.ಮಲ್ಲೇಶ, ಸಿಬ್ಬಂದಿಗಳಾದ ಜೋಸೆಫ್ ನೋರೋನಾ, ರವಿಕುಮಾರ್, ಶ್ರೀನಿವಾಸ ಪ್ರಸಾದ್, ಅನಿಲ್, ಸುಭಾನಲ್ಲಾ ಬಾಲಾದಾರ ಕಾರ್ಯಚರಣೆಯಲ್ಲಿ ಭಾಗವಹಿಸಿದ್ದರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!