ಮೈಸೂರು: ಕುಡಿದ ಮತ್ತಿನಲ್ಲಿದ್ದ ತಂದೆಯಿಂದಲೇ ಸುತ್ತಿಗೆಯಿಂದ ಹಲ್ಲೆಗೆ ಒಳಗಾಗಿ ತೀವ್ರಗಾಯಗೊಂಡು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ತಾಲ್ಲೂಕಿನ ಉದ್ಬೂರು ಗ್ರಾಮದ ಇಬ್ಬರು ಮಕ್ಕಳ ಪೈಕಿ ಹಿರಿಯ ಮಗಳು ಕುಸುಮ(೧೪) ಬುಧವಾರ ರಾತ್ರಿ ಕೊನೆಯುಸಿರೆಳೆದಿದ್ದಾಳೆ.
ನ.೧೭ರಂದು ಗುರುವಾರ ರಾತ್ರಿ ಮೈಸೂರು ತಾಲ್ಲೂಕಿನ ಉದ್ಬೂರು ಗ್ರಾಮದ ತಮ್ಮ ಮನೆಯಲ್ಲಿ ಕುಡಿದ ಮತ್ತಿನಲ್ಲಿದ್ದ ಡಿ.ಸ್ವಾಮಿ(೩೮) ಎಂಬಾತ ತನ್ನ ಮಕ್ಕಳಾದ ಕುಸುಮ(೧೪) ಹಾಗೂ ಧನ್ಯಶ್ರೀ(೪) ಮೇಲೆ ಸುತ್ತಿಗೆಯಿಂದ ತೀವ್ರವಾಗಿ ಹಲ್ಲೆ ನಡೆಸಿ, ಈಗ ಪೊಲೀಸರಿಂದ ಬಂಧಿತನಾಗಿದ್ದಾನೆ.
ಘಟನೆ ನಂತರ ತೀವ್ರ ಗಾಯಗೊಂಡಿದ್ದ ಇಬ್ಬರು ಮಕ್ಕಳನ್ನೂ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ತೀವ್ರ ನಿಗಾಘಟಕದಲ್ಲಿರಿಸಿ ವೈದ್ಯರು ಕಳೆದ ಏಳು ದಿನಗಳಿಂದಲೂ ಚಿಕಿತ್ಸೆ ನೀಡುತ್ತಿದ್ದರು. ಆದರೆ, ಸಾವು-ಬದುಕಿನೊಂದಿಗೆ ಹೋರಾಡುತ್ತಿದ್ದ ಹಿರಿಯ ಮಗಳು ಕುಸುಮ(೧೪) ಚಿಕಿತ್ಸೆ ಫಲಕಾರಿಯಾಗದೆ ಬುಧವಾರ ರಾತ್ರಿ ಒಂಬತ್ತು ಗಂಟೆ ಸಮಯದಲ್ಲಿ ಕೊನೆಯುಸಿರೆಳೆದಿದ್ದಾಳೆ.
ಘಟನೆ ಕುರಿತು ಜಯಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುವ ಹಿನ್ನೆಲೆಯಲ್ಲಿ ಗುರುವಾರ ಬೆಳಿಗ್ಗೆ ಪೊಲೀಸರ ಸಮ್ಮುಖದಲ್ಲಿ ಮಹಜರು ನಡೆಸಿದ ನಂತರ ಮೃತ ದೇಹವನ್ನು ಪೋಷಕರಿಗೆ ಹಸ್ತಾಂತರಿಸಲಾಗುತ್ತದೆ ಎಂದು ತಿಳಿದು ಬಂದಿದೆ.
ಕಿರಿಯ ಪುತ್ರಿ ಧನ್ಯಶ್ರೀ(೪)ಯನ್ನೂ ತೀವ್ರ ನಿಗಾಘಟಕದಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಆಕೆ ಇನ್ನೂ ಕಣ್ಣು ಬಿಟ್ಟು ಯಾರನ್ನೂ ಗುರುತಿಸುವ ಸ್ಥಿತಿಯಲ್ಲಿ ಇಲ್ಲ ಎನ್ನಲಾಗಿದೆ. ಆಕೆಯನ್ನು ಬದುಕುಳಿಸುವ ಪ್ರಯತ್ನವನ್ನು ವೈದ್ಯರು ಮುಂದುವರಿಸಿದ್ದಾರೆ.
ಕಠ್ಮಂಡು: ನೇಪಾಳದಲ್ಲಿ ಮತ್ತೆ ಪ್ರವಾಹ, ಭೂಕುಸಿತದ ಆರ್ಭಟ ಮುಂದುವರಿದಿದ್ದು, ಕೇವಲ 8 ಸೆಕೆಂಡ್‌ಗಳಲ್ಲಿ ಪರ್ವತವೇ ಕುಸಿದು ಬಿದ್ದಿದೆ! ವಿವಿಧೆಡೆ ಸಂಭವಿಸಿದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಪಳನಿಮೇಡ್ ಗ್ರಾಮದಲ್ಲಿ ರೈತನ ಮೇಲೆ ಕಾಡುಹಂದಿ ದಾಳಿ ಮಾಡಿದ್ದು,…
ಮೈಸೂರು: ಮುಡಾ 50:50 ಸೈಟ್ ವಿಚಾರದಲ್ಲಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಮಹತ್ವದ ಮಾಹಿತಿ ನೀಡಿದ್ದಾರೆ. ಶೀಘ್ರದಲ್ಲೇ ಅಕ್ರಮ ಸೈಟ್‌ಗಳ…
ಕೊಪ್ಪಳ: ಮೈಸೂರು ದಸರಾ ಉದ್ಘಾಟನೆ ಕುರಿತು ಹರಿದಾಡುತ್ತಿದ್ದ ವದಂತಿಗಳಿಗೆ ಗವಿಮಠದ ಗವಿಸಿದ್ದೇಶ್ವರ ಸ್ವಾಮೀಜಿ ತೆರೆ ಎಳೆದಿದ್ದಾರೆ. ಮೈಸೂರು ದಸರಾ ಉದ್ಘಾಟನೆಗೆ…
ನವದೆಹಲಿ: ಬ್ಯಾಂಕ್ ಗ್ರಾಹಕರಿಗೆ ಯಾವುದೇ ಆತಂಕ ಬೇಡ. ಇಂದಿನಿಂದ ನಡೆಯಬೇಕಿದ್ದ 3 ದಿನಗಳ ಬ್ಯಾಂಕ್ ಮುಷ್ಕರ ಮುಂದೂಡಿಕೆಯಾಗಿದೆ. ಬ್ಯಾಂಕ್ ಸೇವೆಗಳಲ್ಲಿ…
ಪ್ರಜಾತಂತ್ರ ವ್ಯವಸ್ಥೆಯ ಭಾರತದಲ್ಲಿ ಪ್ರತಿ ಐದು ವರ್ಷಗಳಿಗೊಮ್ಮೆ ಸಂಸತ್ತು ಮತ್ತು ವಿಧಾನಸಭೆಗಳಿಗೆ ಮುಕ್ತ ಮತ್ತು ನಿಷ್ಪಕ್ಷಪಾತ ಚುನಾವಣೆಯನ್ನು ನಡೆಸುವ ಮೂಲಕ…