ಜಿಲ್ಲೆಗಳು

ಮೈಸೂರು : ದಸರಾ ಯುವ ಸಂಭ್ರಮದಲ್ಲಿ ʼಡಾಲಿ ಧನಂಜಯ್‌ʼ ವಿಶೇಷ ಅತಿಥಿ

ಮೈಸೂರು : ವಿಶ್ವವಿಖ್ಯಾತ ಮೈಸೂರು ದಸರಾದ ಈ ಸಾಲಿನಲ್ಲಿ ಯುವ ಸಂಭ್ರಮ ಕಾರ್ಯಕ್ರಮವು ಸೆ. 16 ರಿಂದ 24ರವರೆಗೆ ಒಟ್ಟು 9 ದಿನಗಳ ಕಾಲ ನಡೆಯಲಿದೆ. ಈ ಯುವ ದಸರಾ ಕಾರ್ಯಕ್ರಮವು ಮೈಸೂರಿನ ಮಾನಸ ಗಂಗೋತ್ರಿಯ ಬಯಲು ರಂಗ ಮಂದಿರದಲ್ಲಿ ಸಂಜೆ 5.30 ರಿಂದ ರಾತ್ರಿ 10-00 ರವರೆಗೆ ನಡೆಯಲಿದೆ.

ಉದ್ಘಾಟನೆ : ಕಾರ್ಯಕ್ರಮದ ಉದ್ಘಾಟನೆಯನ್ನು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್‌.ಟಿ.ಸೋಮಶೇಖರ್‌ ಅವರು ಮಾಡಲಿದ್ದಾರೆ. ಅಧ್ಯಕ್ಷತೆಯನು ಚಾಮರಾಜ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಎಲ್‌ ನಾಗೇಂದ್ರ ಅವರು ವಹಿಸಲಿದ್ದಾರೆ.

ಮೆರಗು ತರಲಿದ್ದಾರೆ ಡಾಲಿ ಧನಂಜಯ

ಮೆರಗು ತರಲಿದ್ದಾರೆ ಡಾಲಿ ಧನಂಜಯ
ಕನ್ನಡ ಚಿತ್ರರಂಗದ ಖ್ಯಾತ ನಟರಾದ ಡಾಲಿ ಧನಂಜಯ್‌ ಅವರು ಯುವ ದಸರಾ ಕಾರ್ಯಕ್ರಮದಲ್ಲಿ ವಿಶೇಷ ಆಹ್ವಾನಿತರಾಗಿ ಕಾರ್ಯಕ್ರಮಕ್ಕೆ ಮೆರಗು ತರಲಿದ್ದಾರೆ.

ದಸರಾ ಯುವ ಸಂಭ್ರಮ

ಯುವ ಸಂಭ್ರಮದಲ್ಲಿ ಒಟ್ಟು 253 ಕಾಲೇಜಿಗಳ ತಂಡವು ಭಾಗವಹಿಸಲಿವೆ. ವಿವಿಧ ಕಾಲೇಜುಗಳ ಒಟ್ಟು 10500 ವಿದ್ಯಾರ್ಥಿ ಹಾಗೂ ವಿದ್ಯಾರ್ಥಿನಿಯರಿಂದ ವಿವಿಧ ಕಾರ್ಯಕ್ರಮಗಳು ನಡೆಯಲಿವೆ.

ಯುವ ದಸರಾದಲ್ಲಿರುವ ವಿಷಯಧಾರಿತ ಕಾರ್ಯಕ್ರಮಗಳು ಇಂತಿವೆ
ಅಜಾದಿಕಾ ಅಮೃತ್‌ ಮಹೋತ್ಸವ್‌ ( 75ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆ)
-ಭಾರತ ಸಾತಂತ್ರ್ಯ ಚಳುವಳಿಗೆ ಕರ್ನಾಟಕದ ಕೊಡುಗೆ
-ಭಾರತ ಸ್ವಾತಂತ್ರ ಚಳುವಳಿ
-ರಾಷ್ಟ್ರೀಯ ಭಾವೈಕ್ಯತೆ ಮತ್ತು ಪಾರಂಪರಿಕ ಆಸ್ತಿಗಳ ಸಂರಕ್ಷಣೆ
-ಮಹಿಳಾ ಸಬಲೀಕರಣ ಮತ್ತು ಸಮಾನತೆ
-ಕನ್ನಡ ಮತ್ತು ಸಂಸ್ಕೃತಿ, ಜಾನಪದ ಕಲೆ
-ಪರಿಸರ ಸಂರಕ್ಷಣೆ, ಮತ್ತು ಮಾನವ ನಿರ್ಮಿತ ಆಪತ್ತುಗಳು
– ಸ್ವಚ್ಚ ಭಾರತ-ಸ್ವಚ್ಚ ಕರ್ನಾಟಕ, ಆರೋಗ್ಯ ಮತ್ತು ನೈರ್ಮಲ್ಯ
-ಮಾದರಿ ಮೈಸೂರು ನಿರ್ಮಾಣದಲ್ಲಿ ಮೈಸೂರು ಮಾಹಾರಾಜರುಗಳ ಕೊಡುಗೆ 

ಮುಂತಾದ ಕಾರ್ಯಕ್ರಮಗಳು ನಡೆಯಲಿದ್ದು. ಯುವ ಸಮೂಹವು ಕೌತುಕದಿಂದ ಈ ಸಂಭ್ರಮದ ಕ್ಷಣಗಳನ್ನು ಕಣ್ತುಂಬಿಕೊಳ್ಳಲು ಕಾಯುತ್ತಿದ್ದಾರೆ.

andolanait

Recent Posts

ಸಂಸದ ಯದುವೀರ್‌ ಪ್ರಯತ್ನದ ಫಲಶ್ರುತಿ : ತಂಬಾಕು ಮಾರಾಟಕ್ಕೆ ಅನುಮತಿ

ಅಧಿಸೂಚನೆ ಹೊರಡಿಸಿದ ಕೇಂದ್ರ ಸರ್ಕಾರ ಮೈಸೂರು : ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ತಂಬಾಕು ಬೆಳೆಗಾರರ ಸಮಸ್ಯೆಗಳು ಹಾಗೂ ಮಾರಾಟ…

5 hours ago

ಅರಮನೆ ಫಲಪುಷ್ಪ ಪ್ರದರ್ಶನ | ಸಂಗೀತ ಸಂಜೆಯಲ್ಲಿ ಪ್ರೇಕ್ಷಕರು ತಲ್ಲೀನ

ಮೈಸೂರು : ಮೈಸೂರು ಅರಮನೆ ಮಂಡಳಿ ವತಿಯಿಂದ ಕ್ರಿಸ್‌ಮಸ್ ಹಾಗೂ ಹೊಸವರ್ಷದ ಪ್ರಯುಕ್ತ 10 ದಿನಗಳ ‘ಅರಮನೆ ಫಲಪುಷ್ಪ ಪ್ರದರ್ಶನ’…

8 hours ago

ಎತ್ತಿನ ಗಾಡಿಗೆ ಸಾರಿಗೆ ಬಸ್‌ ಡಿಕ್ಕಿ : ಎತ್ತು ಸಾವು

ಹಲಗೂರು : ಎತ್ತಿನ ಗಾಡಿ ತೆರಳುತ್ತಿದ್ದ ವೇಳೆ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಎತ್ತು ಸ್ಥಳದಲ್ಲೇ ಮೃತಪಟ್ಟ ಘಟನೆ…

8 hours ago

ಮುತ್ತತ್ತಿ : ಕಾವೇರಿ ನದಿ ಸೆಳೆತಕ್ಕೆ ಸಿಲುಕಿ ಯುವಕ ಸಾವು

ಹಲಗೂರು : ಇಲ್ಲಿಗೆ ಸಮೀಪದ ಮುತ್ತತ್ತಿ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದ ವೇಳೆ ನೀರಿನ ಸೆಳೆತಕ್ಕೆ ಸಿಲುಕಿ ಯುವಕ ಮೃತಪಟ್ಟಿರುವ ಘಟನೆ…

8 hours ago

ಪೊಲೀಸ್‌ ಭದ್ರತೆಯಲ್ಲಿ ದೇಗುಲ ಪ್ರವೇಶಿಸಿದ ದಲಿತ ಮಹಿಳೆಯರು : ಶಾಂತಿ ಸಭೆಯಲ್ಲಿ ಪಂಚ ಬೇಡಿಕೆ

ಭಾರತೀನಗರ : ಇಲ್ಲಿಗೆ ಸಮೀಪದ ಕೆ.ಶೆಟ್ಟಹಳ್ಳಿ ಗ್ರಾಮದಲ್ಲಿ ಪೊಲೀಸರ ಭದ್ರತೆಯೊಂದಿಗೆ ಗ್ರಾಮದ ಪರಿಶಿಷ್ಟ ಜಾನಾಂಗದ ಮಹಿಳೆಯರು, ಪುರುಷರು ದೇವಾಲಯಗಳಿಗೆ ಪ್ರವೇಶಿಸಿದರು.…

8 hours ago

ಅಕ್ರಮ ವಿದ್ಯುತ್‌ ಸಂಪರ್ಕ: 31 ಪ್ರಕರಣ ದಾಖಲು, 2.17 ಲಕ್ಷ ರೂ. ದಂಡ

ಮೈಸೂರು : ಅಕ್ರಮವಾಗಿ ವಿದ್ಯುತ್‌ ಸಂಪರ್ಕ ಪಡೆದಿರುವ ಸಂಬಂಧ ಯಶಸ್ವಿ ಕಾರ್ಯಾಚರಣೆ ನಡೆಸಿದ ಚಾಮುಂಡೇಶ್ವರಿ ವಿದ್ಯುತ್‌ ಸರಬರಾಜು ನಿಗಮ ನಿಯಮಿತ(ಚಾವಿಸನಿನಿ)…

8 hours ago