ಜಿಲ್ಲೆಗಳು

ಮೈಸೂರು : 2ನೇ ತಂಡದ ದಸರಾ ಗಜಪಡೆಗಳಿಗೆ ತೂಕ ಹಾಕುವ ಪ್ರಕ್ರಿಯೆ ಯಶಸ್ವಿ

ಮೈಸೂರು : ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂ ಸವಾರಿಯಲ್ಲಿ ಪಾಲ್ಗೊಳ್ಳಲು ಆಗಮಿಸಿದ ಎರಡನೇ ತಂಡದ ಆನೆಗಳಿಗೆ ಇಂದು ತೂಕ ಹಾಕುವ ಪ್ರಕ್ರಿಯೆ ನಡೆದಿದ್ದು, ಮೊದಲ ತಂಡದಲ್ಲಿ ಆಗಮಿಸಿದ ಆನೆಗಳ ತೂಕವು ನಡೆಯಿತು.

 

ದಸರಾ ಗಜಪಡೆಗಳ ತೂಕ ಪ್ರಕ್ರಿಯೆಯು ಮೈಸೂರಿನ ಧನ್ವಂತ್ರಿಯಲ್ಲಿನ ವೇ ಬ್ರಿಡ್ಜ್ ನಲ್ಲಿ ಅಂದರೆ ಲಾರಿಗಳಿಗೆ ತೂಕ ಹಾಕುವ  ವೇವ್ ಬ್ರಿಡ್ಜ್ ನಲ್ಲಿ ನಡೆದಿದ್ದು, ಈ ಬಾರಿಯೂ ಅರ್ಜನನೇ ಬಲಶಾಲಿ ಅಂತ ನಿರೂಪಿಸಿದ್ದಾನೆ. ತೂಕದಲ್ಲಿ ಅರ್ಜುನನೇ ಬಲಶಾಲಿಯಾಗಿದ್ದು, ಬರೋಬ್ಬರಿ 5885 ಕೆ.ಜಿ ತೂಕ ಹೊಂದಿದ್ದಾನೆ. ದಸರಾ ಗಜಪಡೆಯ ಕ್ಯಾಪ್ಟನ್ ಅಭಿಮನ್ಯು 5000, ಚೈತ್ರ 3235, ಭೀಮಾ 4345, ಗೋಪಾಲಸ್ವಾಮಿ 5460, ಮಹೇಂದ್ರ 4450, ವಿಜಯ 2760, ಗೋಪಿ 4670, ಧನಂಜಯ 4890, ಶ್ರೀರಾಮ 4475, ಲಕ್ಷ್ಮೀ 3150, ಸುಗ್ರೀವ 4785, ಕಾವೇರಿ 3245 ಇನ್ನೂ ಈ ಗಜಪಡೆಯಲ್ಲಿ ಕಿರಿಯವನಾಗಿರುವ ಪಾರ್ಥಸಾರಥಿ 3445 ಕೆಜಿ ತೂಕವನ್ನು ಹೊಂದಿದ್ದಾರೆ.

ಡಿಸಿಎಫ್ ಡಾ.ವಿ. ಕರಿಕಾಳನ್ ಮಾತನಾಡಿ, ಈ ಬಾರಿ ದಸರಾ ಮಹೋತ್ಸವದಲ್ಲಿ ಪಾಲ್ಗೊಳ್ಳುತ್ತಿರುವ ಮೊದಲು ಮತ್ತು ಎರಡನೇ ತಂಡದ ಆನೆಗಳು ಒಟ್ಟು ಸೇರಿ 14 ಆನೆಗಳನ್ನು ನಾವು ತೂಕ ಮಾಡಿದ್ದೇವೆ, ಎರಡನೇ ತಂಡದ ಎಲ್ಲ ಗಂಡಾನೆಗಳೂ 4000 ದಿಂದ 4600 ಸಾವಿರ ಕೆಜಿ ವರೆಗೂ ಇದ್ದು, ಕಿರಿಯ ವಯಸ್ಸಿನ ಆನೆಯಾಗಿರುವ ಪಾರ್ಥಸಾರಥಿ ಆನೆ 3445 ತೂಕ ಹೊಂದಿದೆ, ಮೊದಲನೇ ತಂಡದ ಎಲ್ಲ ಆನೆಗಳ ತೂಕದಲ್ಲಿ ಹೆಚ್ಚಾಗಿದ್ದು, ನಮ್ಮ ತಾಲೀಮುಗಳಿಗೂ ಕೂಡ ತುಂಬ ಚೆನ್ನಾಗಿ ಸಹಕರಿಸುತ್ತಿವೆ ಎಂದು ತಿಳಿಸಿದರು.


ಈ ದಿನ ಮೊದಲನೇ ಬಾರಿಗೆ ಎಲ್ಲ 14 ಆನೆಗಳನ್ನು ತೂಕ ಮಾಡುವ ಸಲುವಾಗಿ ಅರಮನೆಯಿಂದ ಹೊರ ಕರೆತಂದಿದ್ದು, ಶ್ರೀರಾಮ ಮತ್ತು ಪಾರ್ಥಸಾರಥಿ ಆನೆಗಳು ಮೊದಲನೇ ತಂಡದ ಆನೆಗಳ ಜೊತೆ ಸೇರಿ ನಿನ್ನೆಯಿಂದಲೇ ತಾಲೀಮಿನಲ್ಲಿ ಭಾಗವಹಿಸಿವೆ. ಸೆ.12 ರಿಂದ ಎಲ್ಲ ಆನೆಗಳು ತಾಲೀಮಿನಲ್ಲಿ ಭಾಗವಹಿಸಲಿವೆ ಎಂದು ತಿಳಿಸಿದರು.

andolanait

Recent Posts

ಮುಡಾಗೆ ಆರ್ಥಿಕ ಸಂಕಷ್ಟ; 20 ಕೋಟಿ ರೂ ನಷ್ಟ

ಮೈಸೂರು: ಬದಲಿ ನಿವೇಶನ ಹಂಚಿಕೆ, ೫೦:೫೦ ಅನುಪಾತದಲ್ಲಿ ನಿವೇಶನ ಅಕ್ರಮ ಹಂಚಿಕೆ ಹಗರಣದಿಂದಾಗಿ ಇಡೀ ರಾಜ್ಯದ ಗಮನ ಸೆಳೆದಿರುವ ಮೈಸೂರು…

24 mins ago

ಆಂದೋಲನ ಫಲಶ್ರುತಿ: ಕೊನೆಗೂ ತೆರವಾಯ್ತು ಬೃಹತ್‌ ಮರದ ಕಾಂಡ

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಜುಂಬೂ ಸವಾರಿ ಸಾಗುವ ಮಾರ್ಗದಲ್ಲಿ ಕಳೆದ ಎರಡೂ ವರ್ಷಗಳಿಂದ ಬಿದ್ದಿದ್ದ ಬೃಹತ್ ಮರದ ಕಾಂಡವನ್ನು…

35 mins ago

ಜಂಬೂ ಸವಾರಿ ಮಾರ್ಗದಲ್ಲಿ ಸಣ್ಣ ಬದಲಾವಣೆ

ಮೈಸೂರು: ಈ ಬಾರಿಯ ದಸರಾ ಮಹೋತ್ಸವದ ಜಂಬೂ ಸವಾರಿಯನ್ನು ವೀಕ್ಷಿಸಲು ಆಗಮಿಸಿದ ಎಲ್ಲರಿಗೂ ಚಿನ್ನದ ಅಂಬಾರಿ ನೋಡುವ ಅವಕಾಶ ಸಿಗಬೇಕು…

42 mins ago

ಪೈಲ್ವಾನರ ಕಸರತ್ತಿಗೆ ಗರಡಿ ಮನೆಗಳು ಸಜ್ಜು

ಮೈಸೂರು: ಸಾಂಸ್ಕೃತಿಕ ರಾಜಧಾನಿ, ಅರಮನೆಗಳ ನಗರಿ ಎಂದು ಕರೆಯುವ ಮೈಸೂರನ್ನು ಗರಡಿ ಮನೆಗಳ ನಗರಿ ಎಂದೂ ಇತ್ತೀಚಿನ ವರ್ಷಗಳಲ್ಲಿ ಕರೆಯುವುದು…

51 mins ago

ತಿ.‌ ನರಸೀಪುರ: ಬೈಕ್ ಡಿಕ್ಕಿ ಚಿರತೆ ಸಾವು

ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…

8 hours ago

ತಿರುಪತಿ ಲಡ್ಡು: ತುಪ್ಪದಲ್ಲಿ ಪ್ರಾಣಿ ಕೊಬ್ಬು ಬಳಕೆ

ಅಮರಾವತಿ: ಜಗತ್‌ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…

10 hours ago