ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಆಗಮಿಸುವ ಹಿನ್ನೆಲೆಯಲ್ಲಿ ಇಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಅವರು ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು. ನಂತರ ಕಾರ್ಯಕ್ರಮದ ಸಿದ್ಧತೆಗೆ ಸಂಬಂಧಿಸಿದಂತೆ , ವೇದಿಕೆ ಸಿದ್ಧತೆ, ಗಣ್ಯರು, ಸಾರ್ವಜನಿಕರಿಗೆ ಆಸನದ ವ್ಯವಸ್ಥೆ ಮುಂತಾದವುಗಳ ಬಗ್ಗೆ ಅಧಿಕಾರಿಗಳಿಂದ ಮಾಹಿತಿಯನ್ನು ಪಡೆದರು.
ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವರು, ರಾಷ್ಟ್ರಪತಿಗಳ ಕಚೇರಿ ಸೂಚನೆಯಂತೆ ಎಲ್ಲಾ ರೀತಿಯ ಸಿದ್ದತೆಗಳನ್ನು ಮಾಡಿಕೊಳ್ಳಾಗುತ್ತಿದೆ. ಸುಮಾರು 1500 ಜನ ಕುಳಿತುಕೊಳ್ಳುವ ಹಾಗೂ 500 ಜನ ನಿಂತು ಕೊಳ್ಳುವ ಜನರು ಸೇರುವಷ್ಟು ಸ್ಥಳವಕಾಶವಿದೆ. ದೇವಸ್ಥಾನಕ್ಕೆ ಆಗಮಿಸುವ ಸಾರ್ವಜನಿಕರೆಲ್ಲರಿಗೂ ಕಾರ್ಯಕ್ರಮ ವೀಕ್ಷಿಸಲು ಅವಕಾಶವಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಸಂಸದ ಪ್ರತಾಪ್ ಸಿಂಹ, ಶಾಸಕ ಜಿ.ಟಿ.ದೇವೇಗೌಡ, ಮಹಾಪೌರ ಶಿವಕುಮಾರ್, ಜಿಲ್ಲಾಧಿಕಾರಿ ಡಾ. ಬಗಾದಿ ಗೌತಮ್, ಅಪರ ಜಿಲ್ಲಾಧಿಕಾರಿ ಡಾ.ಬಿ.ಎಸ್. ಮಂಜುನಾಥಸ್ವಾಮಿ ಸೇರಿದಂತೆ ಹಲವಾರು ಅಧಿಕಾರಿಗಳು, ನಿಗಮ ಮಂಡಳಿಗಳ ಅಧ್ಯಕ್ಷರು ಮತ್ತು ಮುಖಂಡರು ಹಾಜರಿದ್ದರು.
ದಸರಾ ಉದ್ಘಾಟನೆಗೆ ಮುರ್ಮು ಭೇಟಿಯ ಹಿನ್ನೆಲೆ ಸಚಿವ ಎಸ್‌ಟಿಎಸ್ ಸ್ಥಳ ಭೇಟಿ & ಪರಿಶೀಲನೆ





