ಜಿಲ್ಲೆಗಳು

ದಸರಾ ಉದ್ಘಾಟನೆಗೆ ಮುರ್ಮು ಭೇಟಿಯ ಹಿನ್ನೆಲೆ ಸಚಿವ ಎಸ್‌ಟಿಎಸ್‌ ಸ್ಥಳ ಭೇಟಿ & ಪರಿಶೀಲನೆ

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಆಗಮಿಸುವ ಹಿನ್ನೆಲೆಯಲ್ಲಿ ಇಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್  ಅವರು ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು.  ನಂತರ  ಕಾರ್ಯಕ್ರಮದ ಸಿದ್ಧತೆಗೆ ಸಂಬಂಧಿಸಿದಂತೆ , ವೇದಿಕೆ ಸಿದ್ಧತೆ, ಗಣ್ಯರು, ಸಾರ್ವಜನಿಕರಿಗೆ ಆಸನದ ವ್ಯವಸ್ಥೆ ಮುಂತಾದವುಗಳ ಬಗ್ಗೆ ಅಧಿಕಾರಿಗಳಿಂದ ಮಾಹಿತಿಯನ್ನು ಪಡೆದರು.
ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವರು, ರಾಷ್ಟ್ರಪತಿಗಳ ಕಚೇರಿ ಸೂಚನೆಯಂತೆ ಎಲ್ಲಾ ರೀತಿಯ ಸಿದ್ದತೆಗಳನ್ನು ಮಾಡಿಕೊಳ್ಳಾಗುತ್ತಿದೆ. ಸುಮಾರು 1500 ಜನ ಕುಳಿತುಕೊಳ್ಳುವ ಹಾಗೂ 500 ಜನ ನಿಂತು ಕೊಳ್ಳುವ ಜನರು ಸೇರುವಷ್ಟು ಸ್ಥಳವಕಾಶವಿದೆ. ದೇವಸ್ಥಾನಕ್ಕೆ ಆಗಮಿಸುವ ಸಾರ್ವಜನಿಕರೆಲ್ಲರಿಗೂ ಕಾರ್ಯಕ್ರಮ ವೀಕ್ಷಿಸಲು ಅವಕಾಶವಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಸಂಸದ ಪ್ರತಾಪ್ ಸಿಂಹ, ಶಾಸಕ ಜಿ.ಟಿ.ದೇವೇಗೌಡ, ಮಹಾಪೌರ ಶಿವಕುಮಾರ್, ಜಿಲ್ಲಾಧಿಕಾರಿ ಡಾ. ಬಗಾದಿ ಗೌತಮ್, ಅಪರ ಜಿಲ್ಲಾಧಿಕಾರಿ ಡಾ.ಬಿ.ಎಸ್. ಮಂಜುನಾಥಸ್ವಾಮಿ ಸೇರಿದಂತೆ ಹಲವಾರು ಅಧಿಕಾರಿಗಳು, ನಿಗಮ ಮಂಡಳಿಗಳ ಅಧ್ಯಕ್ಷರು ಮತ್ತು ಮುಖಂಡರು ಹಾಜರಿದ್ದರು.

andolanait

Recent Posts

ಮೂರು ದಿನಗಳ ಕನ್ನಡ ಸಾಹಿತ್ಯ ಸಮ್ಮೇಳನ ಸಂಪನ್ನ

ಸದ್ದು ಮಾಡದ ಕನ್ನಡ ಶಾಲೆಗಳ ಉಳಿವಿನ ಯೋಜನೆ ವಿಷಯ • ಚಿರಂಜೀವಿ ಸಿ. ಹುಲ್ಲಹಳ್ಳಿ ಮಂಡ್ಯ: ಕನ್ನಡ ನಾಡು ನುಡಿಗೆ…

1 hour ago

ಎಲ್ಲರ ಪಕ್ಕ ಕೂರುವ ಸಮಾನ ಹಕ್ಕು ನಮಗೆ ಬೇಕು

'ಪುನಶ್ಚತನವಾಗಬೇಕಾಗಿರುವ ಸಾಹಿತ್ಯ ಪ್ರಕಾರಗಳು' ಕುರಿತ ವಿಚಾರಗೋಷ್ಠಿಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಹಕ್ಕುಗಳ ಹೋರಾಟಗಾರ್ತಿ ಅಕೈ ಪದ್ಮಶಾಲಿ ಆಗ್ರಹ ಜಿ.ತಂಗಂ ಗೋಪಿನಾಥಂ ಮಂಡ್ಯ:…

1 hour ago

`ವಿದೇಶಗಳಲ್ಲಿ ಕನ್ನಡ ಕಟ್ಟುವುದು ಸವಾಲಿನ ಕೆಲಸ`

ಜಾಗತಿಕ ನೆಲೆಯಲ್ಲಿ ಕನ್ನಡ ಕಟ್ಟುವ ಬಗೆ ಕುರಿತ ಗೋಷ್ಠಿಯಲ್ಲಿ ಅಮೆರಿಕ ಕನ್ನಡ ಕೂಟ (ಅಕ್ಕ)ದ ಅಧ್ಯಕ್ಷ ಅಮರ್‌ನಾಥ್‌ಗೌಡ ಹೇಮಂತ್ ಕುಮಾರ್…

2 hours ago

ವಿಭಿನ್ನ ಓದಿಗೆ ಆಹ್ವಾನಿಸುವುದೇ ಉತ್ತಮ ಸಾಹಿತ್ಯ

`ಹೊಸ ತಲೆಮಾರಿನ ಸಾಹಿತ್ಯ' ಕುರಿತ ವಿಚಾರಗೋಷ್ಠಿಯಲ್ಲಿ ವಿಮರ್ಶಕ ವಿಕ್ರಂ ವಿಸಾಜಿ ಅಭಿಮತ • ಜಿ.ತಂಗಂ ಗೋಪಿನಾಥಂ ಮಂಡ್ಯ: ಹೊಸ ತಲೆಮಾರಿನ…

2 hours ago

ಮೈಸೂರಿನಲ್ಲಿ ಮಾಗಿ ಉತ್ಸವ: ಸಂಗೀತದ ಹೊನಲು ಹರಿಸಿದ ವಿಜಯ್‌ ಪ್ರಕಾಶ್‌

ಮೈಸೂರು: ಮಾಗಿ ಉತ್ಸವದ ಅಂಗವಾಗಿ ಜಗತ್ಪ್ರಸಿದ್ಧ ಮೈಸೂರು ಅರಮನೆ ಆವರಣದಲ್ಲಿ ಇಂದು ಸಂಜೆ ಖ್ಯಾತ ಗಾಯಕ ವಿಜಯ್‌ ಪ್ರಕಾಶ್‌ ಅವರು…

12 hours ago