ಮೈಸೂರು : ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2022ರ ಉದ್ಘಾಟನಾ ಕಾರ್ಯಕ್ರಮಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಆಹ್ವಾನ ನೀಡಿದರು.
ಈ ಸಂದರ್ಭದಲ್ಲಿ ಸಚಿವರಾದ ಶಶಿಕಲಾ ಜೊಲ್ಲೆ, ಸಂಸದರಾದ ಪ್ರತಾಪ್ ಸಿಂಹ, ಅಣ್ಣಸಾಹೇಬ ಶಂಕರ ಜೊಲ್ಲೆ ಮತ್ತು ಮೈಸೂರು ಮೇಯರ್ ಶಿವಕುಮಾರ್ ಅವರು ಉಪಸ್ಥಿತರಿದ್ದರು.
ಸೆ.26ರಂದು ನಾಡದೇವತೆ ಚಾಮುಂಡೇಶ್ವರಿ ದೇವಿಯ ಅಗ್ರಪೂಜೆಯೊಂದಿಗೆ ನಾಡಹಬ್ಬ ಮೈಸೂರು ದಸರಾ ಆರಂಭವಾಗಲಿದೆ. ಅಂದು ಬೆಳಗ್ಗೆ 9.45ರಿಂದ 10.05ರೊಳಗೆ ಸಲ್ಲುವ ಶುಭ ವೃಶ್ಚಿಕ ಲಗ್ನದಲ್ಲಿ ಚಾಮುಂಡಿ ಬೆಟ್ಟದ ಶ್ರೀ ಚಾಮುಂಡೇಶ್ವರಿ ದೇವಿ ಸನ್ನಿಧಿಯಲ್ಲಿ ರಾಷ್ಟ್ರಪತಿಗಳು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.
ಇದೇ ಪ್ರಥಮಬಾರಿಗೆ ರಾಷ್ಟ್ರಪತಿಗಳು ದಸರಾ ಮಹೋತ್ಸವ ಉದ್ಘಾಟನೆ ಮಾಡುತ್ತಿದ್ದಾರೆ.ಈಗಾಗಲೇ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರನ್ನು ರಾಜಭವನದಲ್ಲಿ ಭೇಟಿ ಮಾಡಿ ಕಾರ್ಯಕ್ರಮಕ್ಕೆ ಆಹ್ವಾನಿಸಲಾಗಿದೆ.
ರಾಜ್ಯ ಹೈಕೋರ್ಟ್ ನ ಹಂಗಾಮಿ ಮುಖ್ಯನ್ಯಾಯಮೂರ್ತಿ ಅಲೋಕ್ ಆರಾಧೆ, ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ವಿಧಾನಸಭಾಧ್ಯಕ್ಷರಾದ ವಿಶ್ವೇಶ್ವರ ಹೆಗಡೆ ಕಾಗೇರಿ, ವಿಧಾನಪರಿಷತ್ ಸಭಾಪತಿ ರಘುನಾಥ್ ರಾವ್ ಮಲ್ಕಾಪುರೆ ಹಾಗೂ ಸಚಿವರು, ಶಾಸಕರು ಸೇರಿದಂತೆ ಗಣ್ಯಾತಿಗಣ್ಯರನ್ನು ಕಾರ್ಯಕ್ರಮಕ್ಕೆ ಆಹ್ವಾನ ಮಾಡಲಾಗಿದೆ.
ಬೆಂಗಳೂರು : ಬೆಂಗಳೂರಿನಲ್ಲಿ ಕನಿಷ್ಠ 15 ಡಿಗ್ರಿ ಸೆಲ್ಸಿಯಸ್ ಮತ್ತು ಗರಿಷ್ಟ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ವರೆಗೆ ಇರುತ್ತದೆ…
ಬೆಳಗಾವಿ : ಸರ್ಕಾರದಿಂದ ಪಡೆದ ಸಿಎ ನಿವೇಶನಗಳಲ್ಲಿ ಕಟ್ಟಡ ನಿರ್ಮಾಣ ಮಾಡಲು ಈಗಿರುವ ಮೂರು ವರ್ಷಗಳ ಮಿತಿಯನ್ನು ಐದು ವರ್ಷಗಳಿಗೆ…
ಮೈಸೂರು : ಭಾರತೀಯ ದೂರ ಸಂಪರ್ಕ ನಿಯಂತ್ರಣ ಪ್ರಾಧಿಕಾರ(ಟ್ರಾಯ್) ಹಾಗೂ ಮುಂಬೈನ ಬಾಂಧ್ರಾ ಪೊಲೀಸ್ ಅಧಿಕಾರಿ ಸೋಗಿನಲ್ಲಿ ನಗರದ ವೈದ್ಯರೊಬ್ಬರಿಗೆ…
ಮೈಸೂರು : ಜಾತಿ ನಿಂದನೆ, ಅಸ್ಪೃಶ್ಯತೆ ಆಚರಣೆ ಪ್ರಕರಣಗಳಿಗೆ ಸಂಬಂಧಿಸಿದಂತೆ ದೂರು ದಾಖಲು ಹಾಗೂ ತನಿಖೆ ನಡೆಸುವ ಉದ್ದೇಶದಿಂದ ಆರಂಭಗೊಂಡಿರುವ…
ಮೈಸೂರು : ಕರ್ನಾಟಕ ಪೊಲೀಸ್ ಅಕಾಡೆಮಿ ಮತ್ತು ಸಾವಿತ್ರಿಬಾಯಿ ಫುಲೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಂಸ್ಥೆಯ ನಡುವೆ ಒಡಂಬಡಿಕೆಗೆ…
ಬೆಳಗಾವಿ (ಸುವರ್ಣಸೌಧ) : ಇತ್ತೀಚೆಗೆ ನಿಧನರಾದ ಸಾಹಿತಿ ಎಸ್.ಎಲ್.ಭೈರಪ್ಪ ಅವರ ಸ್ಮಾರಕವನ್ನು ಮೈಸೂರಿನಲ್ಲಿ ನಿರ್ಮಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…