ಜಿಲ್ಲೆಗಳು

ದಸರಾ ಬಂದೋಬಸ್ತ್‌ಗೆ 5,485 ಪೊಲೀಸರ ನಿಯೋಜನೆ

ಸಿಸಿ ಟಿವಿ ವ್ಯವಸ್ಥೆ ಇದ್ದು, ಬಾಡಿ ವೋರ್ನ್ ಕ್ಯಾಮೆರಾಗಳ ಕಣ್ಗಾವಲು

ಮೈಸೂರು: ಎರಡು ವರ್ಷಗಳ ನಂತರ ನಡೆಯುತ್ತಿರುವ ವಿಶ್ವವಿಖ್ಯಾತ ಅದ್ಧೂರಿ ದಸರಾ ಮಹೋತ್ಸವದ ಬಂದೋಬಸ್ತ್‌ಗೆ ಒಟ್ಟು ೫,೪೮೫ ಪೊಲೀಸರನ್ನು ನಿಯೋಜಿಸಲಾಗಿದ್ದು, ಸಿಸಿ ಟಿವಿ ವ್ಯವಸ್ಥೆ ಇದ್ದು, ಬಾಡಿ ವೋರ್ನ್ ಕ್ಯಾಮೆರಾಗಳು, ಲಾಂಗ್ ಡಿಸ್ಟೆನ್ಸ್ ವೀಡಿಯೋಗ್ರಫಿ ಮತ್ತು ಫೋಟೊಗ್ರಫಿ ಮಾಡುವ ಮೊಬೈಲ್ ಕಮಾಂಡ್ ಸೆಂಟರ್ ವಾಹನ ಹಾಗೂ ಎಎನ್‌ಎಫ್ ತಂಡಗಳನ್ನು (ಆ್ಯಂಟಿ ನ್ಯಾಕ್ರೋಟಿಕ್ ಪೋರ್ಸ್) ಬಳಸಿಕೊಳ್ಳಲಾಗುತ್ತಿದೆ.
ಈ ಸಂಬಂಧ ಶನಿವಾರ ನಗರದ ಖಾಸಗಿ ಹೋಟೆಲ್ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಮೈಸೂರು ನಗರ ಪೊಲೀಸ್ ಆಯುಕ್ತ ಡಾ.ಚಂದ್ರಗುಪ್ತ, ನಗರ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಸೇರಿದಂತೆ ಹೊರ ಜಿಲ್ಲೆಗಳಿಂದ ಅಧಿಕಾರಿ ಮತ್ತು ಸಿಬ್ಬಂದಿಗಳನ್ನು ಈ ಬಂದೋಬಸ್ತ್ ಕರ್ತವ್ಯಗಳಿಗೆ ನಿಯೋಜಿಸಲಾಗುತ್ತಿದ್ದು, ಮೈಸೂರು ನಗರದಿಂದ ೧,೨೫೫, ಹೊರ ಜಿಲ್ಲೆಗಳಿಂದ ೩,೫೮೦ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳು ಹಾಗೂ ೬೫೦ ಗೃಹರಕ್ಷಕ ಸಿಬ್ಬಂದಿಗಳು ಕರ್ತವ್ಯ ನಿರ್ವಹಿಸುವರು ಎಂದು ಮಾಹಿತಿ ನೀಡಿದರು.

ಭದ್ರತಾ ವ್ಯವಸ್ಥೆ: ಅರಮನೆ ಮತ್ತು ಬನ್ನಿಮಂಟಪದ ಎಲ್ಲ ಪ್ರವೇಶ ದ್ವಾರಗಳಲ್ಲಿ ಕರ್ತವ್ಯ ನಿರ್ವಹಿಸುವ ಅಧಿಕಾರಿಗಳಿಗೆ ಬಾಡಿವೋರ್ನ್ ಕ್ಯಾಮರಾ ವಿತರಿಸಲಾಗುತ್ತದೆ. ಅಲ್ಲಿನ ಸಂಪೂರ್ಣ ದೃಶ್ಯಾವಳಿಗಳು ಈ ಕ್ಯಾಮರಾಗಳಲ್ಲಿ ಮತ್ತು ಮೊಬೈಲ್ ಕಮಾಂಡ್ ಸೆಂಟರ್‌ನಲ್ಲಿ ರೆಕಾರ್ಡ್ ಆಗುವ ವ್ಯವಸ್ಥೆಯನ್ನು ಕಲ್ಪ್ಪಿಸಲಾಗಿದೆ ಎಂದು ಹೇಳಿದರು.
ಫ್ಲಾಟ್ ಫಾರ್ಮ್‌ಗಳನ್ನು ನಿರ್ಮಾಣ: ಪ್ರಮುಖ ದಸರಾ ಕಾರ್ಯಕ್ರಮಗಳು ನಡೆಯುವ ಸ್ಥಳಗಳಲ್ಲಿ ಡ್ರೋಣ್ ಕ್ಯಾಮೆರಾ ಕಣ್ಗಾವಲಿಡಲಾಗುವುದು. ದಸರಾ ಪ್ರಮುಖ ಕಾರ್ಯಕ್ರಮಗಳು ನಡೆಯುವ ಸ್ಥಳಗಳಲ್ಲಿ ಪೊಲೀಸರು ಎದ್ದು ಕಾಣುವ ರೀತಿಯಲ್ಲಿ ಎತ್ತರದ ಫ್ಲಾಟ್ ಫಾರ್ಮ್‌ಗಳನ್ನು ನಿರ್ಮಿಸಿ ಅದರ ಮೇಲೆ ಪೊಲೀಸರನ್ನು ಮೆಗಾ ಫೋನ್ ಸಮೇತ ಕರ್ತವ್ಯಕ್ಕೆ ನಿಯೋಜಿಸಲಾಗುವುದು ಎಂದು ತಿಳಿಸಿದರು.

ನುರಿತ ಅಪರಾಧ ಸಿಬ್ಬಂದಿ ಗಸ್ತು: ವೃತ್ತಿನಿರತ ಹಳೆಯ ಪಿಕ್ ಪಾಕೆಟರ್, ಬ್ಯಾಗ್ ಸೂಟ್ಕೇಸ್ ಲಿಫ್ಟರ್ ಇತರೆ ಕಳವು ಪ್ರಕರಣಗಳ ಅಪರಾಧಿಗಳ ವಿರುದ್ಧ ಭದ್ರತಾ ಕಾಯ್ದೆಯಡಿಯಲ್ಲಿ ಕ್ರಮ ಕೈಗೊಳ್ಳಲಾಗುತ್ತಿದೆ. ನಗರದ ಲಾಡ್ಜ್‌ಗಳನ್ನು ಅನಿರೀಕ್ಷಿತ ತಪಾಸನೆ ನಡೆಸಿ ಅನುಮಾನಾಸ್ಪದ ವ್ಯಕ್ತಿಗಳನ್ನು ವಿಚಾರಣೆ ಮಾಡಲಾಗುತ್ತದೆ. ರೈಲ್ವೆ ನಿಲ್ದಾಣ ಮತ್ತು ಬಸ್ ನಿಲ್ದಾಣಗಳಲ್ಲಿ ದಿನದ ೨೪ ಗಂಟೆಯು ನುರಿತ ಅಪರಾಧ ವಿಭಾಗದ ಸಿಬ್ಬಂದಿಗಳು ಗಸ್ತಿನಲ್ಲಿರಲಿದ್ದು, ಅನುಮಾನಾಸ್ಪದ ವ್ಯಕ್ತಿಗಳನ್ನು ವಿಚಾರಣೆ ಮಾಡಲು ಬಿಡಲಾಗಿದೆ ಎಂದರು.

೧೩,೧೪೦ ಸಿಸಿ ಟಿವಿ ಕ್ಯಾಮೆರಾ: ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆದಲ್ಲಿ ತಕ್ಷಣ ಪೊಲೀಸ್ ವ್ಯವಸ್ಥೆ ಸ್ಥಳಕ್ಕೆ ತೆರಳಲು ಉತ್ತಮವಾದ ಗಸ್ತು ವಾಹನ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ವಿವಿಧ ಕಾರ್ಯಕ್ರಮಗಳು ನಡೆಯುವ ಸ್ಥಳಗಳಲ್ಲಿ ಮುಂಚಿತವಾಗಿಯೇ ೧೨ ಅಗ್ನಿ ಶಾಮಕ ದಳ ಮತ್ತು ೮ ಆಂಬ್ಯುಲೆನ್ಸ್‌ಗಳನ್ನು ನಿಯೋಜನೆ ಮಾಡಲಾಗಿದೆ.
ಈಗಾಗಲೇ ಅಳವಡಿಸಿರುವ ಶಾಶ್ವತ ಸಿಸಿ ಟಿವಿ ಕ್ಯಾಮೆರಾಗಳು, ನಗರದ ವಿವಿಧ ಸ್ಥಳಗಳಲ್ಲಿ ಸಾರ್ವಜನಿಕರು ಅಳವಡಿಸಿಕೊಂಡಿರುವ ಸುಮಾರು ೧೩,೧೪೦ ಸಿಸಿ ಟಿವಿ ಕ್ಯಾಮೆರಾಗಳು ಸೇರಿದಂತೆ ದಸರಾ ಮಹೋತ್ಸವದ ಸಮಯದಲ್ಲಿ ಹೆಚ್ಚುವರಿಯಾಗಿ ಮೈಸೂರು ಅರಮನೆ, ಬನ್ನಿಮಂಟಪ ಮೈದಾನ ಮೆರವಣಿಗೆ ಮಾರ್ಗ ಇತರೆ ಪ್ರಮುಖ ಸ್ಥಳಗಳಲ್ಲಿ ಒಟ್ಟು ೧೧೦ ಸಿಸಿ, ಟಿವಿ ಕ್ಯಾಮೆರಾಗಳನ್ನು ಅಳವಡಿಸಿದ್ದು, ಇವುಗಳಲ್ಲಿ ದಿನದ ೨೪ ಗಂಟೆಯೂ ರೆಕಾರ್ಡ್ ಆಗುವಂತೆ ವ್ಯವಸ್ಥೆ ಮಾಡಲಾಗಿದೆ ಎಂದರು.

ಸಂಚಾರಿ ಮಾರ್ಗ ಬದಲಾವಣೆ :
ಮೈಸೂರು: ಅ.೫ರವರೆಗೆ ಮೈಸೂರು ನಗರದಲ್ಲಿ ಸಂಚಾರ ವ್ಯವಸ್ಥೆಯಲ್ಲಿ ಕೆಲವು ಬದಲಾವಣೆಗಳನ್ನು ಮಾಡಲಾಗಿದೆ. ಅರಮನೆ ಸುತ್ತಮುತ್ತಲ ರಸ್ತೆಗಳು, ನ್ಯೂ ಎಸ್.ಆರ್.ರಸ್ತೆ, ಬಿ.ಎನ್.ರಸ್ತೆ, ಬನುಮಯ್ಯ ರಸ್ತೆ, ತ್ಯಾಗರಾಜ ರಸ್ತೆ, ಚಂದ್ರಗುಪ್ತ ರಸ್ತೆ, ಅಲ್ಬರ್ಟ್ ವಿಕ್ಟರ್ ರಸ್ತೆಗಳಲ್ಲಿ ಏಕಮುಖ ಸಂಚಾರ ವ್ಯವಸ್ಥೆ ಮಾಡಲಾಗಿದೆ. ಸದರಿ ರಸ್ತೆಗಳ ಬದಿಗಳಲ್ಲಿ ಪಾರ್ಕಿಂಗ್ ವ್ಯವಸ್ಥೆ ನಿಷೇಧಿಸಲಾಗಿದೆ. ಕೆಎಸ್‌ಆರ್‌ಟಿಸಿ ಗ್ರಾಮಾಂತರ ಮತ್ತು ನಗರ ಬಸ್ಸುಗಳ ಸಂಚಾರ ಮಾರ್ಗ ಬದಲಾವಣೆ ಮಾಡಲಾಗಿದೆ. ಕಾರ್ಯಕ್ರಮಗಳು ನಡೆಯುವ ಸ್ಥಳದಲ್ಲಿಯೇ ಸಾಧ್ಯವಾದಷ್ಟು ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ.

ತಾತ್ಕಾಲಿಕ ಬಸ್ ನಿಲ್ದಾಣ : 
ಮೈಸೂರು: ಅ.೪ ಮತ್ತು ೫ರಂದು ಸಾರಿಗೆ ಬಸ್ಸುಗಳಿಗೆ ತಾತ್ಕಾಲಿಕ ಬಸ್ ನಿಲ್ದಾಣಗಳನ್ನು ಮಾಡಲಾಗಿದೆ. ಬೆಂಗಳೂರಿನಿಂದ ಆಗಮಿಸುವ ಬಸ್‌ಗಳು- ಸಾತಗಳ್ಳಿ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ. ಹುಣಸೂರು ಬೋಗಾದಿ ಹಾಗೂ ಹೆಚ್.ಡಿ.ಕೋಟೆ ರಸ್ತೆ ಕಡೆಯಿಂದ ಆಗಮಿಸುವ ಬಸ್‌ಗಳನ್ನು ಮಹಾರಾಜ ಕಾಲೇಜು ಮೈದಾನದಲ್ಲಿ ನಿಲ್ಲಿಸುವುದು. ನಂಜನಗೂಡು ಕಡೆಯಿಂದ ಆಗಮಿಸುವ ಬಸ್‌ಗಳಿಗೆ ಗುಂಡೂರಾವ್ ನಗರ ಮೈದಾನದಲ್ಲಿ ನಿಲ್ದಾಣದ ವ್ಯವಸ್ಥೆ ಮಾಡಲಾಗಿದೆ. ಬನ್ನೂರು, ತಿ.ನರಸೀಪುರ ರಸ್ತೆ ಮೂಲಕ ಆಗಮಿಸುವ ಬಸ್ಸುಗಳನ್ನು ಲಲಿತ್ ಮಹಲ್ ಮೈದಾನದಲ್ಲಿ ನಿಲ್ಲಿಸಲು ವ್ಯವಸ್ಥೆ ಮಾಡಲಾಗಿದೆ.

ಪೊಲೀಸ್ ಸಹಾಯ ಕೇಂದ್ರಗಳ ಸ್ಥಾಪನೆ : 
ಮೈಸೂರು: ಸಾರ್ವಜನಿಕರ ಸುರಕ್ಷತೆಯ ಸೂಚನೆಗಳಿರುವ ಮತ್ತು ಪೊಲೀಸರ ಪಾತ್ರದ ಕುರಿತು ಕಿರು ಹೊತ್ತಿಗೆ ಹೊರತರಲಾಗುತ್ತಿದೆ. ಪ್ರವಾಸಿಗರ ಸಹಾಯಕ್ಕಾಗಿ ಪೊಲೀಸ್ ಸಹಾಯ ಕೇಂದ್ರಗಳ ಸ್ಥಾಪನೆ ಮಾಡಲಾಗಿದೆ. ಸೆ.೨೬ರಿಂದ ಅ.೫ವರೆಗೆ ನಗರದ ಜಗಜೀವನ್‌ರಾಮ್ ವೃತ್ತ(ಮಂಡಿ ಠಾಣೆ), ಅರಮನೆ ವರಾಹ ಗೇಟ್, ಕೆ.ಆರ್.ವೃತ್ತ(ದೇವರಾಜ ಠಾಣೆ), ಸೆಂಟ್ ಫಿಲೋಮಿನ ಚರ್ಚ್, ಗ್ರಾಮಾಂತರ ಬಸ್ ನಿಲ್ದಾಣ, ಗಾಂಧಿ ವೃತ್ತ(ಲಷ್ಕರ್ ಠಾಣೆ), ಮೈಸೂರು ಮೃಗಾಲಯ, ದಸರಾ ವಸ್ತು ಪ್ರದರ್ಶನ(ನಜರ್‌ಬಾದ್ ಠಾಣೆ) ಈ ೮ ಸ್ಥಳಗಳಲ್ಲಿ ಬೆಳಿಗ್ಗೆ ೯ರಿಂದ ರಾತ್ರಿ ೧೦ರವರೆಗೆ ಸಾರ್ವಜನಿಕರಿಗೆ ಅಗತ್ಯ ಮಾರ್ಗದರ್ಶನ ನೀಡುವರು.

andolanait

Recent Posts

ಒಂದು ದೇಶ, ಒಂದು ಚುನಾವಣೆ ವ್ಯವಸ್ಥೆಗೆ ಸ್ವಾಗತ, ಮೋದಿಯವರ ಭಯದಿಂದ ಈ ಕ್ರಮ ವಿರೋಧಿಸುತ್ತಿರುವ ಕಾಂಗ್ರೆಸ್‌: ಆರ್‌.ಅಶೋಕ

ರಾಹುಲ್‌ ಗಾಂಧಿಯವರಿಗೆ ಪ್ರಬುದ್ಧತೆ ಇಲ್ಲ, ಮಕ್ಕಳಂತೆ ಆಟವಾಡುತ್ತಾರೆ ಬೆಂಗಳೂರು: ಒಂದು ದೇಶ, ಒಂದು ಚುನಾವಣೆ ನಡೆಸಲು ಕೇಂದ್ರ ಸರ್ಕಾರ ಕೈಗೊಳ್ಳುತ್ತಿರುವ…

7 hours ago

ರೀಲ್ಸ್‌ ಪ್ರಿಯರಿಗೆ ಭರ್ಜರಿ ಆಫರ್:‌ ರೀಲ್ಸ್ ಟ್ಯಾಗ್ ಮಾಡಿ ಬಹುಮಾನ ಗೆಲ್ಲಿ

ಮೈಸೂರು: ಪ್ರವಾಸೋದ್ಯಮ ಮತ್ತು ಶಾಂತಿ ಎಂಬ ಧ್ಯೇಯ ವಾಕ್ಯದೊಂದಿಗೆ ಸೆಪ್ಟೆಂಬರ್‌ ಸೆ. 27 ರಂದು ಬೆಳಿಗ್ಗೆ 10 ಗಂಟೆಗೆ ಮೈಸೂರು…

7 hours ago

ʻಕಾಟೇರʼನಿಗೆ ಕೋಳ ಬಿದ್ದು 100 ದಿನ: ಇಲ್ಲಿಯವರೆಗೆ ಏನೆಲ್ಲ ಆಯ್ತು? ಇಲ್ಲಿದೆ ಕಂಪ್ಲಿಟ್‌ ಡೀಟೆಲ್ಸ್…‌

ಮೈಸೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಪ್ರಕರಣದಲ್ಲಿ ನಟ ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ಜೈಲು ಸೇರಿ ಇಂದಿಗೆ ಬರೊಬ್ಬರಿ 100 ದಿನ…

7 hours ago

ಕೃಷಿ ತಂತ್ರಜ್ಞಾನ ವರ್ಗಾವಣೆ ರಾಜ್ಯ ಸರ್ಕಾರದ ಆದ್ಯತೆ: ಎನ್ ಚಲುವರಾಯಸ್ವಾಮಿ

ಬೆಂಗಳೂರು: ಭೂಸಾರ ಹಾಗೂ ಇ ಸ್ಯಾಪ್ ಆ್ಯಪ್ ಗಳು ಕೃಷಿ ಉತ್ಪಾದನೆ ಹೆಚ್ಚಿಸುವಲ್ಲಿ ಪರಿಣಕಾರಿಯಾಗಿ ನೆರವಾಗಲಿವೆ .ಇದೇ ರೀತಿ ರೈತರಿಗೆ…

8 hours ago

ದಸರಾ ಚಲನಚಿತ್ರೋತ್ಸವ: ಕಿರುಚಿತ್ರ ಪ್ರದರ್ಶನ

ಮೈಸೂರು: ದಸರಾ ಚಲನಚಿತ್ರೋತ್ಸವ 2024 ರ ಅಂಗವಾಗಿ ಅಂತಿಮವಾಗಿ ಚಿತ್ರಮಂದಿರದಲ್ಲಿ ಪ್ರದರ್ಶನಗೊಳ್ಳಲು ಕಿರುಚಿತ್ರ ಸ್ಪರ್ಧೆಯಲ್ಲಿ ಆಯ್ಕೆಯಾಗಿರುತ್ತವೆ. ಅಭಿಜಿತ್ ಪುರೋಹಿತ್ ನಿರ್ದೇಶನದ…

8 hours ago

ಮೈಸೂರು: ಪೊಲೀಸ್‌ ನೇಮಕಾತಿ ವಯೋಮಿತಿ ಹೆಚ್ಚಳಕ್ಕೆ ಒತ್ತಾಯ

ಮೈಸೂರು: ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿಯಲ್ಲಿ ವಯೋಮಿತಿ ಹೆಚ್ಚಿಸಿ ಹಾಗೂ ಖಾಲಿ ಇರುವ ಎಲ್ಲಾ ಹುದ್ದೆಗಳನ್ನು ಕೂಡಲೇ ಭರ್ತಿ ಮಾಡಬೇಕು ಎಂದು…

9 hours ago