ಜಿಲ್ಲೆಗಳು

ಮೈಸೂರು ದಸರಾಗೆ ದಿನಗಣನೆ ಆರಂಭ : ಮುಷ್ಠಿ ಕಾಳಗಕ್ಕೆ ಜಟ್ಟಿಗಳ ಸಕಲ ಸಿದ್ಧತೆ

ಚಾಮರಾಜನಗರ: ವಿಶ್ವವಿಖ್ಯಾತ ಮೈಸೂರು ದಸರಾಗೆ ದಿನಗಣನೆ ಆರಂಭವಾಗಿದ್ದು ನಾಡಹಬ್ಬದ ಪ್ರಮುಖ ಆಕರ್ಷಣೆಯಾದ ಮುಷ್ಠಿ ಕಾಳಗಕ್ಕೆ ಚಾಮರಾಜನಗರದ ಜಟ್ಟಿ ಸಕಲ ಸಿದ್ಧತೆಯನ್ನು ನಡೆಸುತ್ತಿದ್ದಾರೆ.

ನಾಡಹಬ್ಬ ದಸರಾದ ವಿಜಯದಶಮಿ ದಿನದಂದು ಮೈಸೂರಿನ ಅಂಬಾ ವಿಲಾಸ ಅರಮನೆಯ ಕರಿಕಲ್ಲು ತೊಟ್ಟಿಯಲ್ಲಿ ನಡೆಯುವ ಮೈನವಿರೇಳಿಸುವ ವಜ್ರಮುಷ್ಟಿ ಕಾಳಗಕ್ಕೆ ಚಾಮರಾಜನಗರ ಜಟ್ಟಿ, ಉಸ್ತಾದ್ ಕೃಷ್ಣಪ್ಪ ಅವರ ಪುತ್ರ ಅಚ್ಯುತ್ ಜಟ್ಟಿ ಸಜ್ಜುಗೊಳ್ಳುತ್ತಿದ್ದಾರೆ. ಕಳೆದ ಎರಡು ತಿಂಗಳಿನಿಂದ ಚಾ.ನಗರದ ದೊಡ್ಡ ಗರಡಿಯಲ್ಲಿ ತರಬೇತುದಾರ ಪುಟ್ಟಣ್ಣ ಜಟ್ಟಿ ಮತ್ತು ಹೇಮಂತ್ ಜಟ್ಟಿ, ತಿರುಮಲೇಶ್ ಜಟ್ಟಿ ಅವರುಗಳಿಂದ ಅಚ್ಯುತ್ ತರಬೇತಿ ಪಡೆಯುತ್ತಿದ್ದಾರೆ.

ಮಹತ್ವದ ವಜ್ರಮುಷ್ಠಿ ಕಾಳಗ: ದಸರಾ ಮಹೋತ್ಸವದಲ್ಲಿ ನಡೆಯುವ ವಜ್ರಮುಷ್ಟಿ ಕಾಳಗಕ್ಕೆ ತನ್ನದೇ ಆದ ಮಹತ್ವವಿದ್ದು, ವಿಜಯದಶಮಿಯ ದಿನ ನಡೆಯುವ ಜಂಬೂ ಸವಾರಿಗೂ ಮೊದಲು ರಾಜ ಮನೆತನದವರ ಸಮ್ಮುಖದಲ್ಲಿ ಈ ಕಾಳಗ ನಡೆಯುತ್ತದೆ. ಸಂಪ್ರದಾಯದ ಉದ್ದೇಶದಿಂದ ನಡೆಯುವ ಈ ಕಾಳಗ ಕೆಲವೇ ಸೆಕೆಂಡುಗಳಲ್ಲಿ ಮುಗಿಯುತ್ತದೆ. ಆದರೂ, ಈ ಕಾಳಗವನ್ನು ವೀಕ್ಷಿಸಲು ಜನರ ಸಾಕಷ್ಟು ಸಂಖ್ಯೆಯಲ್ಲಿ ನೆರೆಯುತ್ತಾರೆ.

ನಾಲ್ವರು ಜಟ್ಟಿಗಳು: ಜಟ್ಟಿ ಜನಾಂಗಕ್ಕೆ ಸೇರಿದ ನಾಲ್ವರು ಪೈಲ್ವಾನರು ವಜ್ರಮುಷ್ಟಿ ಕಾಳಗ ಮಾಡುತ್ತಾರೆ. ಕೈಯಲ್ಲಿ ದಂತದ ನಖವನ್ನು ಧರಿಸಿ ಮಾಡುವ ಈ ಹೊಡೆದಾಟದಲ್ಲಿ ಯಾರಾದರೂ ಒಬ್ಬ ಜಟ್ಟಿಯ ತಲೆಯಲ್ಲಿ ರಕ್ತ ಸುರಿಯಲು ಆರಂಭವಾದ ತಕ್ಷಣ ಕಾಳಗವನ್ನು ಮುಕ್ತಾಯ ಮಾಡುವುದು ರೂಢಿಯಿಂದಲೂ ನಡೆದುಕೊಂಡು ಬಂದಿದೆ.
ಬೆಂಗಳೂರು, ಮೈಸೂರು, ಚನ್ನಪಟ್ಟಣ ಮತ್ತು ಚಾ.ನಗರದ ತಲಾ ಒಬ್ಬೊಬ್ಬ ಜಟ್ಟಿ ಈ ವಜ್ರಮುಷ್ಟಿ ಕಾಳಗದಲ್ಲಿ ಭಾಗವಹಿಸುವುದು ರೂಢಿ. ಈ ನಾಲ್ಕು ಊರುಗಳಿಂದ ಪ್ರತಿವರ್ಷ ಜಟ್ಟಿಗಳನ್ನು ಕಳುಹಿಸಲೇಬೇಕು. ಇದರಲ್ಲಿ ಭಾಗವಹಿಸುವವರು ಜಟ್ಟಿ ಜನಾಂಗದವರೇ ಆಗಬೇಕು.

ಜಟ್ಟಿಗಳಿಗೆ ತರಬೇತಿ: ದಸರಾ ಆರಂಭಕ್ಕೆ ಒಂದು ತಿಂಗಳು ಇರುವಾಗ ಆಯ್ಕೆ ಮಾಡಿ ತರಬೇತಿ ನೀಡಲು ಆರಂಭಿಸುತ್ತಾರೆ, ಕಾಳಗದ ನಡೆಗಳನ್ನು ಕಲಿಸಲಾಗುತ್ತದೆ. ಪ್ರತಿ ದಿನ ಬೆಳಿಗ್ಗೆ ತರಬೇತಿ ಇರುತ್ತದೆ, ಶನಿವಾರ-ಭಾನುವಾರ ದಿನಪೂರ್ತಿ ತರಬೇತಿ ನಡೆಯಲಿದ್ದು ಜಟ್ಟಿಯನ್ನು ಆಯ್ಕೆ ಮಾಡುವಾಗ ವಯಸ್ಸಿನ ಮಿತಿ ನೋಡುವುದಿಲ್ಲ. ಆರೋಗ್ಯದಿಂದ ಇರಬೇಕು. ದೈಹಿಕವಾಗಿ ಸದೃಢರಾಗಿರಬೇಕು, ರಾಜಮನೆತನದ ಅಂಗರಕ್ಷಕರಾಗಿರುವ ಜಟ್ಟಿ ಸಮುದಾಯದ ಶೌರ್ಯ, ತ್ಯಾಗ, ರಾಜರಿಗೆ ಒಳಿತಾಗಲೆಂಬ ಸಂಕೇತ ಈ ಜಟ್ಟಿ ಕಾಳಗವಾಗಿದೆ.

ಕೊರೊನಾ ಕರಿಛಾಯೆ ಇಲ್ಲದ ಈ ಬಾರಿ ದಸರಾ ಅದ್ಧೂರಿಯಾಗಿ ನಡೆಯುವ ಹಿನ್ನೆಲೆಯಲ್ಲಿ ಜಟ್ಟಿಗಳು ಕೂಡ ಸಂಭ್ರಮದಿಂದಲೇ ತಾಲೀಮು ನಡೆಸುತ್ತಿದ್ದಾರೆ, ಮೈ ನವಿರೇಳಿಸುವ ಕಾರ್ಯಕ್ರಮಕ್ಕೆ ಕೆಲವೇ ದಿನಗಳಲ್ಲಿ ಸಾಕ್ಷಿಯಾಗಲಿದ್ದಾರೆ

andolanait

Recent Posts

ಸಿಲಿಂಡರ್ ಸ್ಪೋಟ ಪ್ರಕರಣ : ಸಾವಿನ ಸಂಖ್ಯೆ 3ಕ್ಕೆ ಏರಿಕೆ

ಮೈಸೂರು : ಮೈಸೂರು ಅರಮನೆ ಮುಂಭಾಗ ನಿನ್ನೆ ಸಂಜೆ ನಡೆದಿದ್ದ ಹೀಲಿಯಂ ಸ್ಫೋಟ ಪ್ರಕರಣದಲ್ಲಿ ಸಾವಿನ ಸಂಖ್ಯೆ ಇದೀಗ ಮೂರಕ್ಕೆ…

7 hours ago

ಮರ್ಯಾದೆಗೇಡು ಹತ್ಯೆ ವಿರೋಧಿಸಿ ಸಹಿ ಸಂಗ್ರಹ

ಮೈಸೂರು : ಹುಬ್ಬಳ್ಳಿಯಲ್ಲಿ ನಡೆದ ಮರ್ಯಾದಗೇಡು ಹತ್ಯೆ ವಿರೋಧಿಸಿ ಮತ್ತು ಮರ್ಯಾದೆಗೇಡು ಹತ್ಯೆ ತಡೆಗೆ ಕಠಿಣ ಕಾಯಿದೆ ರೂಪಿಸಬೇಕು ಎಂದು…

11 hours ago

ಕೆ.ಆರ್.ಆಸ್ಪತ್ರೆ ಶೆಡ್ ನಲ್ಲಿ ಬೆಂಕಿ : ಹಾಸಿಗೆಗಳು ಬೆಂಕಿಗಾಹುತಿ

ಮೈಸೂರು : ಇಲ್ಲಿನ ಕೆ.ಆರ್. ಆಸ್ಪತ್ರೆಯ ಶೆಡ್ ನಲ್ಲಿ ಬೆಂಕಿ ಕಾಣಿಸಿಕೊಂಡು ಆಸ್ಪತ್ರೆಯ ಹಾಸಿಗೆಗಳು ಬೆಂಕಿಗಾಹುತಿಯಾಗಿವೆ. ಆಸ್ಪತ್ರೆಯ ಚೆಲುವಾಂಬ ವಾರ್ಡ್…

11 hours ago

ಹೊಸ ವರ್ಷಾಚರಣೆಗೆ ಮುನ್ನೆಚ್ಚರಿಕೆ : ಸೂಕ್ಷ ಪ್ರದೇಶಗಳ ಬಗ್ಗೆ ಸಮೀಕ್ಷೆ ವರದಿಗೆ ಸೂಚನೆ

ಬೆಂಗಳೂರು : ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುರಿತಂತೆ ಪ್ರಶ್ನೆಗಳು ಉದ್ಭವಿಸಿರುವ ಸಂದರ್ಭದಲ್ಲಿ, ಹೊಸ ವರ್ಷಾಚರಣೆಯ ವೇಳೆ ಯಾವುದೇ ಅವಘಡ ನಡೆಯದಂತೆ…

12 hours ago

ಸಿಲಿಂಡರ್‌ ಸ್ಪೋಟ ಪ್ರಕರಣ : ಚಿಕಿತ್ಸೆ ಪಡೆಯುತ್ತಿದ್ದ ಗಾಯಾಳು ಮಂಜುಳ ಸಾವು

ಮೈಸೂರು : ಮೈಸೂರಿನ ವಿಶ್ವ ವಿಖ್ಯಾತ ಅರಮನೆ ಸಮೀಪ ಸಂಭವಿಸಿದ್ದ ಹೀಲಿಯಂ ಗ್ಯಾಸ್ ಸಿಲೆಂಡರ್ ಸ್ಫೋಟ ದುರಂತದಲ್ಲಿ ಸಾವಿನ ಸಂಖ್ಯೆ…

13 hours ago

ಇತಿಹಾಸ ಸೃಷ್ಟಿಸಿದ ಬಿಜೆಪಿ : ತಿರುವನಂತಪುರಂನ ಮೇಯರ್ ಆಗಿ ವಿ.ವಿ.ರಾಜೇಶ್ ಆಯ್ಕೆ

ತಿರುವನಂತಪುರಂ : ಬಿಜೆಪಿಯಿಂದ ಮೊದಲ ಬಾರಿಗೆ ತಿರುವನಂತಪುರಂ ನಗರ ಮೇಯರ್ ಆಗಿ ಆಯ್ಕೆಯಾಗುವ ಮೂಲಕ ವಿ.ವಿ.ರಾಜೇಶ್ ಇತಿಹಾಸ ನಿರ್ಮಿಸಿದ್ದಾರೆ. 49…

13 hours ago