ಜಿಲ್ಲೆಗಳು

ಮೈಸೂರು : ನಾಳೆ ನೇರಳಕುಪ್ಪೆಯಲ್ಲಿ ಡಿಸಿ ಗ್ರಾಮ ವಾಸ್ತವ್ಯ

ಮೈಸೂರು: ಜಿಲ್ಲಾಧಿಕಾರಿಗಳ ನಡೆ ಗ್ರಾಮಗಳ ಕಡೆಗೆ ಗ್ರಾಮ ಭೇಟಿ ಕಾರ್ಯಕ್ರಮದ ಅಂಗವಾಗಿ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಅವರು ಜ.21ರಂದು ಹುಣಸೂರು ತಾಲ್ಲೂಕು ಹನಗೋಡು ಹೋಬಳಿಯ ನೇರಳಕುಪ್ಪೆ ಗ್ರಾಮದಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಗ್ರಾಮಸ್ಥರು ತಮ್ಮ ಗ್ರಾಮಕ್ಕೆ ಸಂಬಂಧಿಸಿದಂತೆ ಸಮಸ್ಯೆಗಳಿದ್ದಲ್ಲಿ ನಾಡಕಚೇರಿ,ಉಪ ತಹಶೀಲ್ದಾರ್, ರಾಜಸ್ವ ನಿರೀಕ್ಷಕರಿಗೆ ಮನವಿ ಸಲ್ಲಿಸಿ ಪರಿಹಾರ, ಇತ್ಯರ್ಥಪಡಿಸಿಕೊಳ್ಳುವಂತೆ ಅಪರ ಜಿಲ್ಲಾಧಿಕಾರಿ ಲೋಕನಾಥ್ ತಿಳಿಸಿದ್ದಾರೆ.

ಜಿಲ್ಲಾಧಿಕಾರಿಯವರು ಭೇಟಿ ನೀಡಲಿರುವ ತಾಲ್ಲೂಕನ್ನು ಹೊರತುಪಡಿಸಿ ಉಪ ವಿಭಾಗಾಧಿಕಾರಿಗಳು ಮತ್ತು ತಹಸಿಲ್ದಾರ್‌ಗಳು ಮೈಸೂರು ತಾಲ್ಲೂಕಿನ ವರುಣಾ-ಚಟ್ನಹಳ್ಳಿಪಾಳ್ಯ, ಕೆ.ಆರ್.ನಗರ ಮತ್ತು ಸಾಲಿಗ್ರಾಮ ತಾಲ್ಲೂಕಿನ ಚುಂಚನಕಟ್ಟೆ ಹಾಗೂ ಮಾರಗೌಡನಹಳ್ಳಿ, ಎಚ್.ಡಿ.ಕೋಟೆ ತಾಲೂಕಿನ ಹಂಪಾಪುರ-ಹೊಳೆಹುಂಡಿ, ಪಿರಿಯಾಪಟ್ಟಣ ತಾಲ್ಲೂಕಿನ ಬೆಟ್ಟದಪುರ-ಹಲಗನಹಳ್ಳಿ, ನಂಜನಗೂಡು ತಾಲ್ಲೂಕಿನ ಕೌಲಂದೆ-ನೇರಳೆ, ತಿ.ನರಸೀಪುರ ತಾಲ್ಲೂಕಿನ ಬನ್ನೂರು-ಯಾಚೇನಹಳ್ಳಿ, ಸರಗೂರು ತಾಲ್ಲೂಕಿನ ಸರಗೂರು-ಹಾದನೂರು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಯಶವಂತಪುರದಲ್ಲಿ ಕಾರ್ಯಕ್ರಮ ನಡೆಸಲಿದ್ದಾರೆ ಎಂದರು.

andolanait

Recent Posts

ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್ ಮಾಡಲು ಯತ್ನಿಸಿದ್ದರು: ಸಿಎಂ ಡಿಕೆಶಿ ಬಾಂಬ್

ಬೆಂಗಳೂರು: ತಮ್ಮ ವಿರುದ್ಧವೂ ಸ್ಟಿಂಗ್ ಆಪರೇಷನ್ ನಡೆಸಲು ಸಂಚು ರೂಪಿಸಲಾಗಿತ್ತು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.…

1 hour ago

ಕಾವೇರಿ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್!

ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ…

2 hours ago

ಎಸ್‌ಐಆರ್‌ ವಿರುದ್ಧ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ

ಬೆಂಗಳೂರು: ದೇಶಾದ್ಯಂತ ತೀವ್ರ ವಿವಾದ ಸೃಷ್ಟಿಸಿರುವ ಮತದಾರರ ಪಟ್ಟಿ ಪರಿಷ್ಕರಣೆ(ಎಸ್‍ಐಆರ್) ಸಂಬಂಧ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‍ಕುಮಾರ್ ವಜಾ ಮತ್ತು…

3 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್‌ಗೆ ಮತ್ತೆ ಶಾಕ್‌

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಭೀಕರ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್‌ಗೆ ಕಾನೂನು ಸಂಕಷ್ಟಗಳು ಮತ್ತಷ್ಟು ಬಿಗಿಯಾಗುತ್ತಿವೆ.…

4 hours ago

ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ: 75ನೇ ವಯಸ್ಸಿನಲ್ಲಿ ನಿಧನ

ಮುಂಬೈ: ಬಾಲಿವುಡ್ ಚಿತ್ರರಂಗಕ್ಕೆ ಆಘಾತಕಾರಿ ಸುದ್ದಿ. ಹಿರಿಯ ನಟ ನಾನಾ ಪಾಟೇಕರ್ ನಿಧನರಾಗಿದ್ದಾರೆ. ಅವರಿಗೆ 75 ವರ್ಷ ವಯಸ್ಸಾಗಿತ್ತು. ಗೋವಾದ…

7 hours ago

ಓದುಗರ ಪತ್ರ: ಪಿಎಚ್‌ಸಿಗಳಲ್ಲಿ ಬಿಪಿ, ಶುಗರ್ ಮಾತ್ರೆಗಳು ಸಿಗುವಂತೆ ಕ್ರಮ ಕೈಗೊಳ್ಳಿ

ಮೈಸೂರು ಜಿ ಎಚ್.ಡಿ.ಕೋಟೆ ತಾಲ್ಲೂಕಿನ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಶುಗರ್ ಮತ್ತು ಬಿಪಿಗೆ ಹಾಗೂ ಇತರೆ ಕಾಯಿಲೆಗಳಿಗೆ ಸಂಬಂಧಪಟ್ಟ…

8 hours ago