ಮಡಿಕೇರಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಮತ್ತು ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗ ಇವರ ಸಂಯುಕ್ತ ಆಶ್ರಯದಲ್ಲಿ ರಾಜ್ಯಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ಬಾಲಕ/ಬಾಲಕಿಯರ ಹಾಕಿ ಲೀಗ್‌ನ 4 ವಿಭಾಗದಲ್ಲಿ ‘ಮೈಸೂರು ವಿಭಾಗ’ ತಂಡ ಚಾಂಪಿಯನ್ ಪಟ್ಟ ಅಲಂಕರಿಸಿತು.
ನಗರದ ಹಾಕಿ ಟರ್ಫ್ ಮೈದಾನ(ಭಾರತೀಯ ಕ್ರೀಡಾ ಪ್ರಾಧಿಕಾರ)ದಲ್ಲಿ ನಡೆಯುತ್ತಿರುವ ರಾಜ್ಯಮಟ್ಟದ ಹಾಕಿ ಲೀಗ್ ಮಾದರಿಯ ಪಂದ್ಯದಲ್ಲಿ ಮೈಸೂರು ವಿಭಾಗ, ಬೆಂಗಳೂರು ವಿಭಾಗ, ಕಲಬುರ್ಗಿ ವಿಭಾಗ, ಬೆಳಗಾವಿ ವಿಭಾಗ ಹಾಗೂ ಎಸ್.ಎಸ್.ಕೂಡಿಗೆ ತಂಡ(ಪ್ರೌಢಶಾಲಾ ವಿಭಾಗದಲ್ಲಿ ಮಾತ್ರ) ಚಾಂಪಿಯನ್ ಪಟ್ಟಕ್ಕೆ ಸೆಣಸಾಟ ನಡೆಸಿತು.
17 ವರ್ಷ ವಯೋಮಿತಿಯೊಳಗಿನ ಪ್ರೌಢ ಶಾಲಾ ಬಾಲಕರ ವಿಭಾಗದ ಅಂತಿಮ ಫಲಿತಾಂಶದಲ್ಲಿ ಮೈಸೂರು ವಿಭಾಗ 12 ಅಂಕ ಪ್ರಥಮ ಸ್ಥಾನ ಪಡೆಯಿತು. ಕ್ರೀಡಾ ಶಾಲೆ ಕೂಡಿಗೆ 9 ಅಂಕ ದ್ವಿತೀಯ ಸ್ಥಾನ ಪಡೆದುಕೊಂಡಿತು. 17 ವರ್ಷ ವಯೋಮಿತಿಯೊಳಗಿನ ಪ್ರೌಢ ಶಾಲಾ ಬಾಲಕಿಯರ ವಿಭಾಗದ ಅಂತಿಮ ಫಲಿತಾಂಶದಲ್ಲಿ ಮೈಸೂರು ವಿಭಾಗ 12 ಅಂಕದೊಂದಿಗೆ ಪ್ರಥಮ ಸ್ಥಾನ ಪಡೆದುಕೊಂಡರೆ ಕ್ರೀಡಾ ಶಾಲೆ ಕೂಡಿಗೆ 9 ಅಂಕ ದ್ವಿತೀಯ ಸ್ಥಾನ ಪಡೆದುಕೊಂಡಿತ್ತು.
14 ವರ್ಷ ವಯೋಮಿತಿಯೊಳಗಿನ ಪ್ರಾಥಮಿಕ ಶಾಲಾ ಬಾಲಕರ ವಿಭಾಗದ ಅಂತಿಮ ಫಲಿತಾಂಶದಲ್ಲಿ ಮೈಸೂರು ವಿಭಾಗ 9 ಅಂಕ ಪ್ರಥಮ ಸ್ಥಾನ ಪಡೆದುಕೊಂಡರೆ, ಬೆಳಗಾವಿ ವಿಭಾಗ 6 ಅಂಕ ದ್ವಿತೀಯ ಸ್ಥಾನ ಪಡೆದುಕೊಂಡಿತ್ತು. ಮೈಸೂರು ವಿಭಾಗ ತಂಡ ೯ ಅಂಕದೊಂದಿಗೆ ಪ್ರಥಮ ಸ್ಥಾನದೊಂದಿಗೆ ಚಾಂಪಿಯನ್ನಾಗಿ ಹೊರಹೊಮ್ಮಿದರೆ, ಬೆಳಗಾವಿ ವಿಭಾಗ ತಂಡ ೬ ಅಂಕದೊಂದಿಗೆ ದ್ವಿತೀಯ ಸ್ಥಾನ ಪಡೆದುಕೊಂಡಿತು.
೭೨ ಆಟಗಾರರು ರಾಷ್ಟ್ರಮಟ್ಟಕ್ಕೆ ಆಯ್ಕೆ: ೪ ದಿನಗಳ ಕಾಲ ಲೀಗ್ ಮಾದರಿಯಲ್ಲಿ ನಡೆದ ಪಂದ್ಯದಲ್ಲಿ ೪ ವಿಭಾಗಗಳಲ್ಲಿ(ಪ್ರಾಥಮಿಕ ಮತ್ತು ಪ್ರೌಢಶಾಲಾ ಬಾಲಕರ/ಬಾಲಕಿಯರು) ಒಟ್ಟು ೭೨ ಆಟಗಾರರು ರಾಷ್ಟ್ರಮಟ್ಟದ ಪಂದ್ಯಕ್ಕೆ ಆಯ್ಕೆಯಾಗಿದ್ದಾರೆ. ಮುಂದಿನ ದಿನಗಳಲ್ಲಿ ನಡೆಯುವ ರಾಷ್ಟ್ರ ಮಟ್ಟದ ಪಂದ್ಯದಲ್ಲಿ ಆಯ್ಕೆಯಾದ ಆಟಗಾರರು ಪಾಲ್ಗೊಳ್ಳಲಿದ್ದಾರೆ.
ಪ್ರಶಸ್ತಿ ವಿವರ: ನಾಲ್ಕು ವಿಭಾಗದ ವಿಜೇತ ತಂಡಕ್ಕೆ ಆಕರ್ಷಕ ಟ್ರೋಪಿ ನೀಡಿ ಗೌರವಿಸಲಾಯಿತು.17 ವರ್ಷ ವಯೋಮಿತಿ ಬಾಲಕರ ಬೆಳಗಾವಿ ತಂಡದ ರಾಜು,17 ವರ್ಷ ವಯೋಮಿತಿ ಬಾಲಕಿಯರ ಮೈಸೂರು ವಿಭಾಗದ ನಿತ್ಯ ರೂಬಿಣಿ,14 ವರ್ಷ ವಯೋಮಿತಿ ಬಾಲಕ ಮೈಸೂರು ವಿಭಾಗದ ಪ್ರೀತಮ್, 14 ವರ್ಷ ವಯೋಮಿತಿ ಬಾಲಕಿಯ ಮೈಸೂರು ವಿಭಾಗದ ಮನಸ್ವಿ ಉತ್ತಮ ಆಟಗಾರ ಪ್ರಶಸ್ತಿ ಪಡೆದರು.
ಚಾಮರಾಜನಗರ : ತಾಲ್ಲೂಕಿನ ನಂಜೇದೇವಪುರ ಬಳಿ ನಾಲ್ಕು ಮರಿಗಳ ಜೊತೆ ತಾಯಿ ಹುಲಿ ಕಾಣಿಸಿಕೊಂಡಿದ್ದ ಹಿನ್ನೆಲೆಯಲ್ಲಿ ಅವುಗಳ ಸೆರೆಗಾಗಿ ಕೂಂಬಿಂಗ್…
ಮೈಸೂರು : ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಮಲ್ಲಿಕಾರ್ಜುನ ಬಾಲದಂಡಿ ಗುರುವಾರ ಅಧಿಕಾರ ಸ್ವೀಕಾರ ಮಾಡಿದರು. ಮಂಡ್ಯ ಜಿಲ್ಲೆಯ ಎಸ್‌ಪಿ…
ಗುಂಡ್ಲುಪೇಟೆ: ತಾಲ್ಲೂಕಿನ ಅಭಿವೃದ್ಧಿಗೆ ಶ್ರಮಿಸಿ ಏಳು ಬಾರಿ ಶಾಸಕಿ ,ಸಚಿವೆಯಾಗಿ ಮೊದಲ ಮಹಿಳಾ ಸ್ಪೀಕರ್ ಆದಂತಹ ಗಟ್ಟಿಗಿತ್ತಿ ಕೆ.ಎಸ್.ನಾಗರತ್ನಮ್ಮ ಅವರ…
ಗುಂಡ್ಲುಪೇಟೆ: ಪಟ್ಟಣದ ಕೂತನೂರು ಗುಡ್ಡ ಹಾಗೂ ತೆರಕಣಾಂಬಿ ಭಾಗದಿಂದ ಅಧಿಕ ಭಾರಹೊತ್ತು ಸಾಗುವ ಟಿಪ್ಪರ್ ಗಳ ಸಂಚಾರ ನಡೆಸುತಿದ್ದರು ಆರ್…
ಗುಂಡ್ಲುಪೇಟೆ: ಮೋಟರ್ ಆನ್ ಮಾಡುವ ಸಂದರ್ಭದಲ್ಲಿ ವಿದ್ಯುತ್ ಸ್ಪರ್ಶಿಸಿ ಕೂಲಿ ಕಾರ್ಮಿಕ ಮೃತಪಟ್ಟಿರುವ ಘಟನೆ ತಾಲೂಕಿನ ತೆರಕಣಾಂಬಿ ಗ್ರಾಮದ ತೋಟವೊಂದರಲ್ಲಿ…
ಬೆಂಗಳೂರು : 2026ರ ಹೊಸವರ್ಷವನ್ನು ಅದ್ದೂರಿಯಾಗಿ ಬರಮಾಡಿಕೊಳ್ಳಲಾಗಿದೆ. ರಾಜ್ಯದಲ್ಲಿ ಯಾವುದೆ ಅಹಿತಕರ ಘಟನೆ ನಡೆಯದೆ ಸುರಕ್ಷಿತವಾಗಿ ಹೊಸ ವರ್ಷಕ್ಕೆ ಕಾಲಿಟ್ಟಿದ್ದೇವೆ.…