ಮೈಸೂರು: ನಗರದ ಊಟಿ ರಸ್ತೆಯ ಜೆಎಸ್‌ಎಸ್ ಕಾಲೇಜು ಬಳಿ ಕೆ.ಆರ್. ಸಂಚಾರ ವಿಭಾಗದ ಪೊಲೀಸರು ಶನಿವಾರ ರಾತ್ರಿ ಡ್ರಂಕನ್ ಅಂಡ್ ಡ್ರೈವ್ ತಪಾಸಣೆ ವೇಳೆ ಬೀದಿದೀಪ ನಂದಿಸಿ ಕಾರ್ಯಾಚರಣೆ ನಡೆಸಿರುವ ವಿಚಾರ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ನಾಗರಿಕರೊಬ್ಬರು ಪೊಲೀಸರು ಆರಿಸಿದ್ದ ಬೀದಿದೀಪಗಳನ್ನು ಪುನಃ ಹೊತ್ತಿಸಿದರೂ ಮೂರೇ ನಿಮಿಷಗಳಲ್ಲೇ ಮತ್ತೆ ನಂದಿಸಿ ತಪಾಸಣೆ ನಡೆಸಿದುದ್ದಕ್ಕೆ ಆಕ್ರೋಶ ವ್ಯಕ್ತವಾಗಿದೆ.
ಜೆಎಸ್‌ಎಸ್ ಕಲಾ, ವಾಣಿಜ್ಯ ಮತ್ತು ವಿಜ್ಞಾನ ಕಾಲೇಜಿನಿಂದ ಮಧುವನ ಕಾಮತ್ ಹೋಟೆಲ್ ತನಕ ಬೀದಿ ದೀಪ ಆಫ್ ಮಾಡಿ ಕತ್ತಲೆಯಲ್ಲಿ ನಿಂತು ಡ್ರಂಕನ್ ಅಂಡ್ ಡ್ರೈವ್ ತಪಾಸಣೆ ಮಾಡಿದ್ದಾರೆ. ತಾವು ತಪಾಸಣೆ ಮಾಡುವುದು ವಾಹನ ಸಂಚಾರಿಗಳಿಗೆ ಗೊತ್ತಾಗಬಾರದೆಂಬ ಉದ್ದೇಶ ಈ ರೀತಿ ಮಾಡಿದ್ದಾರೆ ಎಂಬುದಾಗಿ ಬೀದಿದೀಪ ಹೊತ್ತಿಸಿ ಸ್ಥಳದಲ್ಲಿಯೇ ನಿಂತು ನೋಡಿದ ನಾಗರಿಕ ತಾವು ಚಿತ್ರೀಕರಿಸಿರುವ ವೀಡಿಯೋದಲ್ಲಿ ಹೇಳಿಕೊಂಡಿದ್ದಾರೆ.
ಕಳೆದ ಜೂನ್ ತಿಂಗಳಲ್ಲಿ ಮೈಸೂರಿನಲ್ಲಿ ನಡೆದಿದ್ದ ವಿಶ್ವ ಯೋಗ ದಿನಾಚರಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಲು ಆಗಮಿಸಿದ್ದ ವೇಳೆ ಊಟಿ ರಸ್ತೆಯುದ್ದಕ್ಕೂ ಹೊಸದಾಗಿ ಬೀದಿದೀಪಗಳನ್ನು ಅಳವಡಿಸಲಾಗಿತು. ಶನಿವಾರ ಡಿಡಿ ಕೇಸ್ ಹಾಕುವಾಗ ಈ ಬೀದಿ ದೀಪಗಳ ಸೌಲಭ್ಯವಿಲ್ಲದೆ ವಾಹನ ಸಂಚಾರಿಗಳು ಕತ್ತಲೆಯಲ್ಲೇ ಓಡಾಡುವಂತಾಯಿತು. ರಾತ್ರಿ ೯ ಗಂಟೆಗೆ ಆರಂಭವಾದ ಡಿಡಿ ತಪಾಸಣೆಯು ಮಧ್ಯರಾತ್ರಿ ೧೨ ಗಂಟೆಯ ತನಕವೂ ನಡೆದಿದೆ. ಅಷ್ಟೂ ಸಮಯ ಬೀದಿದೀಪ ನಂದಿಸಲಾಗಿತ್ತು ಎಂದು ವೀಡಿಯೋ ಮಾಡಿದ ನಾಗರಿಕರು ‘ಆಂದೋಲನ’ಕ್ಕೆ ತಿಳಿಸಿದ್ದಾರೆ.
ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್‌ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್‌ಗಳು ಈಗ ಇನ್‌ಸ್ಟಾಗ್ರಾಂ…
ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್‌ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…
ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…
ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…
ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…