ಮೈಸೂರು: ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದ ವತಿಯಿಂದ 2022ರ ಸೆ.16 ರಂದು 66/11 ಕೆ.ವಿ ದೂರ (ಮೈಸೂರು) ವಿದ್ಯುತ್ ವಿತರಣಾ ಕೇಂದ್ರದಲ್ಲಿ ಕ.ವಿ.ಪ್ರ.ನಿ.ನಿ. ವತಿಯಿಂದ 2ನೇ ತ್ರ್ತ್ಯೈಮಾಸಿಕ ಅವಧಿಯ ನಿರ್ವಹಣಾ ಕಾಮಗಾರಿಯನ್ನು ಹಮ್ಮಿಕೊಳ್ಳಲಾಗಿದೆ. ಈ ಸಂಬಂಧ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ನಿಲುಗಡೆಯಾಗಲಿದೆ.
ವಿದ್ಯುತ್ ವ್ಯತ್ಯಯವಾಗಲಿರುವ ಮುಖ್ಯ ಪ್ರದೇಶಗಳು:ದೂರ, ತಳೂರು, ಮುರುಡಗಳ್ಳಿ, ದೊಡ್ಡಕಾಟೂರು, ಚಿಕ್ಕ ಕಾಟೂರು, ಸಿಂಧುವಳ್ಳಿ ಗ್ರಾಮ ಹಾಗೂ ಸುತ್ತ-ಮುತ್ತಲಿನ ಪ್ರದೇಶಗಳು.ನಂಜನಗೂಡು ವಿಭಾಗ ವ್ಯಾಪ್ತಿಗೆ ಒಳಪಡುವ ಪ್ರದೇಶಗಳು: ಹಳ್ಳಿಕೆರೆಹುಂಡಿ, ಬಿದರಗೂಡು, ಮೂಡಲಹುಂಡಿ (ಕಾಟೂರು) ನೀರು ಸರಬರಾಜು ಕೇಂದ್ರಗಳಲ್ಲಿ ಬೆಳಿಗ್ಗೆ 10 ರಿಂದ ಸಂಜೆ 5.30 ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ನಿಲುಗಡೆಯಾಗಲಿದೆ ಎಂದು ನ.ರಾ.ಮೊಹಲ್ಲಾ ಕಾರ್ಯ ಮತ್ತು ಪಾಲನೆ ವಿಭಾದ ಕಾರ್ಯನಿರ್ವಾಹಕ ಇಂಜಿನಿಯರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.





