ಮೈಸೂರು: ಎಚ್.ಡಿ. ಕೋಟೆಯ ಕಬಿನಿ ಹಿನ್ನೀರು ಪ್ರದೇಶದ ಸಫಾರಿ ಹಾದಿಯಲ್ಲಿ ಸಲಗವೊಂದು ಪ್ರವಾಸಿಗರ ವಾಹನವನ್ನು ಅಟ್ಟಿಸಿಕೊಂಡು ಬರುತ್ತಿರುವ ಘಟನೆ ವೈರಲ್ ಆಗಿದೆ.
ಗುರುವಾರ ಬೆಳಗ್ಗಿನ ಸಫಾರಿ ವೇಳೆ ಈ ಘಟನೆ ನಡೆದಿದೆ. ಜಂಗಲ್ ಲಾಡ್ಜಸ್ಗೆ ಸೇರಿದ ಈ ವಾಹನದ ಚಾಲಕ ಪ್ರಕಾಶ್ ಅನುಭವಿಯಾಗಿದ್ದರಿಂದ ಸಮಯ ಪ್ರಜ್ಞೆ ಮೆರೆದು ಚಾಕಚಕ್ಯತೆಯಿಂದ ವಾಹನ ಚಲಾಯಿಸಿ ಅಪಾಯದಿಂದ ಪಾರಾಗಿದ್ದಾರೆ.
ಯಾವುದೋ ಕಾರಣಕ್ಕೆ ಕೋಪಗೊಂಡ ಸಲಗವು ಸಫಾರಿ ಹಾದಿಯಲ್ಲಿ ಬರುತ್ತಿದ್ದ ಜೀಪಿನ ಮೇಲೆ ದಾಳಿ ಮಾಡಲು ಮುಂದಾಗಿದೆ. ಮುಂದಿನಿಂದ ಅಟ್ಟಿಸಿಕೊಂಡು ಬರುತ್ತಿದ್ದ ಸಲಗವನ್ನುಕಂಡ ಚಾಲಕ ರಿವರ್ಸ್ ಡ್ರೈವ್ ಮಾಡಿಕೊಂಡು ಪಾರಾಗುವ ಪ್ರಯತ್ನ ನಡೆಸಿದ್ದಾರೆ.
ಸುಮಾರು 50-60 ಮೀಟರ್ ಗಳವರೆಗೆ ಸಲಗವು ಜೀಪನ್ನು ಅಟ್ಟಿಸಿಕೊಂಡು ಬಂದಿದೆ. ಕೊನೆಯಲ್ಲಿ ಹಿಂದಕ್ಕೆ ಚಲಿಸಲಾಗದೆ ನಿಂತ ವಾಹನದ ಮೇಲೆ ದಾಳಿ ಮಾಡದೆ ಸಲಗ ಕಾಡಿನತ್ತ ಓಡಿ ಹೋಗಿದೆ. ಸ್ವಲ್ಪದರಲ್ಲೇ ಪ್ರವಾಸಿಗರು ಅಪಾಯದಿಂದ ಪಾರಾಗಿದ್ದಾರೆ. ಜೀಪು ಚಾಲಕನ ದೈರ್ಯಕ್ಕೆ ಎಲ್ಲೆಡೆ ಪ್ರಶಂಶೆ ವ್ಯಕ್ತವಾಗಿದೆ. ಡಿ.ಬಿ.ಕುಪ್ಪೆ ಅರಣ್ಯ ವಲಯದಲ್ಲಿ ನಡೆದ ಈ ಘಟನೆಯನ್ನು ವಲಯ ಅರಣ್ಯಾಧಿಕಾರಿ ಸಿದ್ದರಾಜು ಮತ್ತು ಕಾರಾಪುರ ಜಂಗಲ್ ಲಾಡ್ಜಸ್ ವ್ಯವಸ್ಥಾಪಕ ಅನಿಕೇತನ್ ಈ ಘಟನೆಯನ್ನು ಖಚಿತಪಡಿಸಿದ್ದಾರೆ.
ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ -1 ಫಲಿತಾಂಶದ ದಿನಾಂಕ ಪ್ರಕಟಣೆ ಗೊಂದಲಕ್ಕೆ ತೆರೆ ಬಿದ್ದಿದ್ದು, ಕರ್ನಾಟಕ ಪರೀಕ್ಷಾ ಮಂಡಳಿಯು ಇದೇ…
ಮೈಸೂರು: ವರುಣ ಕ್ಷೇತ್ರದ ಕೃಷಿ ಭೂಮಿಯಲ್ಲಿ ನಿಮ್ಹಾನ್ಸ್ ನಿರ್ಮಾಣ ವಿಚಾರಕ್ಕೆ ಸಂಬಂಧಿಸಿದಂತೆ ರೈತರಿಂದ ಪ್ರತಿಭಟನೆ ಜೋರಾದ ಹಿನ್ನೆಲೆಯಲ್ಲಿ ಜಿಲ್ಲಾಡಳಿತವು ಗುಡುಮಾದನಹಳ್ಳಿಯಲ್ಲಿ…
ಬೆಂಗಳೂರು: ರಾಜ್ಯ ಸಾರಿಗೆ ನೌಕರರು ಸರ್ಕಾರದ ವಿರುದ್ಧ ಸೆಡ್ಡು ಹೊಡೆದಿದ್ದು, ಮತ್ತೆ ಪ್ರತಿಭಟನೆ, ಹೋರಾಟಕ್ಕೆ ಮುಂದಾಗಿದ್ದಾರೆ. 38 ತಿಂಗಳ ವೇತನ…
ಮೈಸೂರು: ಪಿಡಬ್ಲ್ಯೂಡಿ ಅಧಿಕಾರಿ ಜಿ.ಕೆ.ರೇವನ್ ಕುಮಾರ್ ಮನೆ ಹಾಗೂ ಕಚೇರಿಗೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ. ಬಂದರು ಮತ್ತು ಒಳನಾಡಿನ…
ಬೆಂಗಳೂರು: ಬೆಂಗಳೂರು ಸೇರಿದಂತೆ ರಾಜ್ಯದ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.…
ಮಂಡ್ಯ: ಕಳೆದ ನಾಲ್ಕು ದಿನಗಳ ಹಿಂದೆ ಕಾಣೆಯಾಗಿದ್ದ ಪ್ರಥಮ ದರ್ಜೆ ಗುತ್ತಿಗೆದಾರ ಕಾವೇರಿ ನದಿಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ಮಂಡ್ಯ…