Mysore
26
light rain

Social Media

ಶನಿವಾರ, 13 ಜೂನ್ 2026
Light
Dark

ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ವಿತರಿಸಿದ ಜಿಟಿಡಿ

ಮೈಸೂರು: ಕೊಡಗು ಗೌಡ ಕ್ಷೇಮಾಭಿವೃದ್ಧಿ ಸಂಘದಿಂದ ಆಯೋಜಿಸಿದ್ದ ಕ್ರೀಡಾ, ಪ್ರತಿಭಾಪುರಸ್ಕಾರ ಹಾಗೂ ಸಂಘದ ವಾರ್ಷಿಕೋತ್ಸವ ಸಮಾರಂಭದಲ್ಲಿ ಶಾಸಕ ಜಿ.ಟಿ.ದೇವೇಗೌಡ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ವಿತರಿಸಿದರು. ವಿಜಯನಗರ ಎರಡನೇ ಹಂತದಲ್ಲಿರುವ ಕೊಡಗು ಗೌಡ ಸಮಾಜದಲ್ಲಿ ಭಾನುವಾರ ಆಯೋಜಿಸಿದ್ದ ಸಮಾರಂಭವನ್ನು ಉದ್ಘಾಟಿಸಿದ ಶಾಸಕ ಜಿ.ಟಿ.ದೇವೇಗೌಡ ಮಕ್ಕಳಿಗೆ ಪ್ರತಿಭಾಪುರಸ್ಕಾರ ಮಾಡಿದರು. ಬಳಿಕ ಮಾತನಾಡಿದ ಜಿ.ಟಿ.ದೇವೇಗೌಡ, ಕೊಡಗು ಸಮಾಜದವರು ಮೈಸೂರಿನಲ್ಲಿ ನೆಲೆಸಿ ಎಲ್ಲರೊಂದಿಗೆ ಬೆರೆತು ಜೀವನ ಮಾಡುತ್ತಿದ್ದಾರೆ. ವಿದ್ಯಾರ್ಥಿಗಳು ಉತ್ತಮ ಅಂಕಗಳನ್ನು ಪಡೆದುಕೊಳ್ಳುವ ಜೊತೆಗೆ ಸರ್ಕಾರಿ ಉದ್ಯೋಗ ಪಡೆಯುವ ಗುರಿ ಹೊಂದಬೇಕು ಎಂದರು.ಸಂಘದ ಅಧ್ಯಕ್ಷ ನಡುಮನೆ ಚಂಗಪ್ಪ ವಹಿಸಿದ್ದರು.ಉಪಾಧ್ಯಕ್ಷ ಬೆಪ್ಪುರನ ಗಾಯಿತ್ರಿ,ಗೌರವ ಕಾರ್ಯದರ್ಶಿ ಬೋಳನ ಜಯಪ್ರಸಾದ್,ಸಹಕಾರ್ಯದರ್ಶಿ ನಿಡ್ಯಮಲೆ ನಂದೇಶ್,ಖಜಾಂಚಿಪೊನ್ನಪ್ಪನ ಅಪ್ಪಯ್ಯ ಹಾಜರಿದ್ದರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!