ಮೈಸೂರು: ನಗರದ ಕೊಳಚೆ ಪ್ರದೇಶಗಳಲ್ಲಿ ವಾಸ ಮಾಡುತ್ತಿರುವವರಿಗೆ ನಿವೇಶನ ಹಂಚಿಕೆ ಮಾಡಲು ಸಾಧ್ಯವಾಗದ ಕಾರಣ ಗುಂಪು ಮನೆಗಳನ್ನು ನಿರ್ಮಾಣ ಮಾಡಲು ಭೂಮಿಯನ್ನು ಮೀಸಲಿಡಬೇಕು ಎಂದು ಸಂಸದ ಪ್ರತಾಪ್ ಸಿಂಹ ಸೂಚನೆ ನೀಡಿದರು. ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ನಡೆದ ಜಿಲ್ಲಾ ಅಭಿವೃದ್ಧಿ ಸಮನ್ವಯ ಹಾಗೂ ಉಸ್ತುವಾರಿ ಸಮಿತಿ ಸಭೆಯಲ್ಲಿ ಆತನಾಡಿದ ಅವರು ಏಕಲವ್ಯನಗರದಲ್ಲಿ ನಿರ್ಮಾಣ ಮಾಡಿರುವ ಮನೆಗಳಿಗೆ ಫಲಾನುಭವಿಗಳನ್ನು ಆಯ್ಕೆ ಮಾಡಲಾಗಿದೆ. ಆದ್ದರಿಂದ ಅನರ್ಹರು ಬಂದು ವಾಸ ಮಾಡುತ್ತಿರುವವರನ್ನು ಖಾಲಿ ಮಾಡಿಸಬೇಕು. ನೀವು ಸಂಸದರು,ಶಾಸಕರು ಎನ್ನುವ ಕಥೆಯನ್ನು ಹೇಳದೆ ಮೊದಲು ಖಾಲಿ ಮಾಡಿಸಿ ಎಂದು ತಾಕೀತು ಮಾಡಿದರು. ಸೈಟ್ ಹೊಂದಿ ಮನೆ ಇಲ್ಲದವರಿಗೆ ಪ್ರಧಾನಮಂತ್ರಿ ಅವಾಜ್ ಯೋಜನೆಯಡಿ ಮನೆಗಳನ್ನು ಒದಗಿಸುವುದು ಮತ್ತು ನಿವೇಶನ ಇಲ್ಲದವರಿಗೆ ಗುಂಪು ಮನೆಗಳನ್ನು ಕಟ್ಟಲು ಯೋಜನೆ ರೂಪಿಸಬೇಕು ಎಂದು ಸ್ಲಂ ಬೋರ್ಡ್ ಮತ್ತು ರಾಜೀವ್ ಗಾಂದಿ ಗೃಹ ನಿರ್ಮಾಣ ಮಂಡಳಿ ಅಧಿಕಾರಿಗಳಿಗೆ ಸೂಚನೆ ನೀಡಿದರು. ಮೈಸೂರು ಜಿಪಂ ಸಭಾಂಗಣದಲ್ಲಿ ಸೋಮವಾರ ನಡೆದ ಜಿಲ್ಲಾ ಅಭಿವೃದ್ಧಿ ಸಮನ್ಚಯ ಹಾಗೂ ಉಸ್ತುವಾರಿ ಸಮಿತಿಸಭೆಯಲ್ಲಿ ಸಂಸದ ಪ್ರತಾಪ್ ಸಿಂಹ,ಶಾಸಕ ಎಸ್.ಎ.ರಾಮದಾಸ್,ಜಿಪಂ ಸಿಇಒ ಬಿ.ಆರ್.ಪೂರ್ಣಿಮಾ ಹಾಜರಿದ್ದರು.
- ಮುಖಪುಟ
- ಮೈಸೂರು
- ಜಿಲ್ಲೆಗಳು
- ರಾಜ್ಯ
- ದೇಶ- ವಿದೇಶ
- ರಾಜಕೀಯ
- ಅಪರಾಧ
- ಮಹಿಳೆ
- ಕೃಷಿ
- ವಿಜ್ಞಾನ ತಂತ್ರಜ್ಞಾನ
- ಕ್ರೀಡೆ
- ವಾಣಿಜ್ಯ
- ಚಿತ್ರಸಂತೆ
- ವಿಶೇಷ
- ಆಂದೋಲನ ಪುರವಣಿ
- ಎಡಿಟೋರಿಯಲ್
- ಆಂದೋಲನ 50
- ಜಾಹೀರಾತು
- Cricket
Subscribe to Updates
Get the latest creative news from FooBar about art, design and business.