ಬೆಂಗಳೂರು : ಕಾಂಗ್ರೆಸ್ ವತಿಯಿಂದ ಆಯೋಜನೆ ಮಾಡಲಾಗಿರುವ ಭಾರತ್ ಜೋಡೊ ಯಾತ್ರೆಯು ಅ. 2ರಂದು ನಂಜನಗೂಡಿನ ಬದನವಾಳುವಿನಲ್ಲಿ ಮಹಾತ್ಮ ಗಾಂಧೀಜಿ ಅವರು ಸ್ಥಾಪಿಸಿದ ಖಾದಿ ಕೇಂದ್ರದಲ್ಲಿ ರಾಹುಲ್ ಗಾಂಧಿ ಅವರು ಗಾಂಧಿ ಜಯಂತಿಯನ್ನು ಆಚರಣೆ ಮಾಡಲಿದ್ದಾರೆ. ಈ ಮೂಲಕವಾಗಿ ಸಾಂಸ್ಕೃತಿಕ ನಗರಿ ಮೈಸೂರಿಗ ಜೋಡೋ ಯಾತ್ರೆಯು ಆಗಮಿಸಲಿದೆ. ಮೈಸೂರಿನಲ್ಲಿ ನಮ್ಮ ಯಾತ್ರೆಯು ಒಂದು ಐತಿಹಾಸಿಕ ಘಟನೆಗೆ ಸಾಕ್ಷಿಯಾಗಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಮಾತನಾಡಿದರು.
ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು ಸಮಾಜದ ಪ್ರತೀ ವರ್ಗದವರನ್ನೂ ಕೂಡ ರಾಹುಲ್ ಗಾಂಧಿ ಅವರು ಭೇಟಿ ಮಾಡಿ ಅವರ ಕಷ್ಟ ಸುಖ ವಿಚಾರಿಸಲಿದ್ದಾರೆ. ಮಹಿಳೆಯರು, ಸಿವಿಲ್ ಸೊಸೈಟಿಗಳು, ಹೋರಾಟಗಾರರು ಮೊದಲಾದವರು ಯಾತ್ರೆಯಲ್ಲಿ ಪಾಲ್ಗೊಳ್ಳುವಂತೆ ಈಗಾಗಲೇ ಕರೆ ನೀಡಿದ್ದೇವೆ. ನೀವೂ ಬನ್ನಿ ನಿಮ್ಮ ಕುಟುಂಬದವರನ್ನೂ ಕರೆತನ್ನಿ ಎಂದು ಮಾಧ್ಯಮಗಳ ಮೂಲಕ ಜನಸಾಮಾನ್ಯರಿಗೆ ಕರೆ ನೀಡಿದರು.
ಕರ್ನಾಟಕದಲ್ಲಿ ಸೆ.30ರಿಂದ ಭಾರತ್ ಜೋಡೋ: ರಾಜ್ಯದಲ್ಲಿ ಈ ಯಾತ್ರೆ ಸೆ.30 ರಂದು ಬೆಳಗ್ಗೆ 9 ಗಂಟೆಗೆ ಗುಂಡ್ಲುಪೇಟೆಯಿಂದ ಆರಂಭವಾಗಲಿದೆ. ಅ. 2 ರಂದು ಬದನವಾಳು ಗ್ರಾಮದಲ್ಲಿ ಗಾಂಧಿ ಜಯಂತಿ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ. ದಸರಾ ಹಬ್ಬದ ಪ್ರಯುಕ್ತ 2 ದಿನಗಳ ಕಾಲ ಯಾತ್ರೆಗೆ ಬಿಡುವು ನೀಡಲಾಗುವುದು.
ಬಳಿಕ ಸುದ್ದಿಗೋಷ್ಠಿಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಮಾತನಾಡಿ, ಇಂದು ಭಾರತ ಐಕ್ಯತಾ ಯಾತ್ರೆಯ ಸಿದ್ಧತಾ ಪರಿಶೀಲನಾ ಸಭೆ ಮಾಡಿದ್ದೇವೆ. ಪ್ರದೇಶ ಕಾಂಗ್ರೆಸ್ ಹಾಗೂ ರಾಜ್ಯ ನಾಯಕರು ಮಾಡಿರುವ ಎಲ್ಲಾ ಸಿದ್ಧತೆಗಳು ಎಐಸಿಸಿಗೆ ತೃಪ್ತಿ ತಂದಿದೆ. ನಮ್ಮ ಪ್ರಧಾನ ಕಾರ್ಯದರ್ಶಿಗಳಾದ ರಣದೀಪ್ ಸಿಂಗ್ ಸುರ್ಜೇವಾಲ ಅವರು ನಿತ್ಯ ತಯಾರಿ ಕುರಿತು ಪರಿಶೀಲನೆ ನಡೆಸುತ್ತಿದ್ದು, ರಾಜ್ಯದಲ್ಲಿನ ಯಾತ್ರೆ ಅತ್ಯಂತ ಯಶಸ್ವಿಯಾಗಲಿದೆ ಎಂಬ ವಿಶ್ವಾಸ ಇದೆ ಎಂದರು.
ಮೈಸೂರು: ಸಕ್ಕರೆ ನಾಡು ಮಂಡ್ಯದಲ್ಲಿ ಇಂದಿನಿಂದ (ಡಿ.20) 87ನೇ ಕನ್ನಡ ಸಾಹಿತ್ಯ ಸಮ್ಮೇಳನ ಶುರುವಾಗಿದೆ. ಆದರೆ ಈ ಸಮ್ಮೇಳನವನ್ನು ಯಾವ…
ಮಂಡ್ಯ: ಹಾಸ್ಯ ಸಾಹಿತ್ಯ ಆಧುನಿಕ ಬದುಕಿನಗೆ ಔಷಧಿಯಾಗಿದೆ ಎಂದು ಪ್ರಾಧ್ಯಾಪಕ ಡಾ.ಜೆ.ಕರಿಯಪ್ಪ ಮಾಳಿಗೆ ಹೇಳಿದರು. 87ಅಖಿಲ ಭಾರತ ಕನ್ನಡ ಸಾಹಿತ್ಯ…
ಮಡಿಕೇರಿ: ಸಿ ಮತ್ತು ಡಿ ಭೂಮಿಗೆ ಸಂಬಂಧಿಸಿದಂತೆ ಕಂದಾಯ ಸಚಿವರು ಉನ್ನತ ಮಟ್ಟದ ಸಮಿತಿ ರಚನೆಗೆ ಮುಂದಾಗಿದ್ದು, ಸಮಸ್ಯೆ ಪರಿಹಾರವಾಗಲಿ…
ಬೆಂಗಳೂರು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಅಕ್ಷೇಪಾರ್ಹ ಪದ ಬಳಸಿದ್ದಾರೆ ಎಂಬ ಆರೋಪದ ಮೇಲೆ ಎಂಎಲ್‌ಸಿ ಸಿ.ಟಿ.ರವಿಯವರನ್ನು ಪೊಲೀಸರೇ ಕೊಲೆ…
ವಿರಾಜಪೇಟೆ: ಗೋಣಿಕೊಪ್ಪ-ಕೇರಳ ಹೆದ್ದಾರಿಯ ಬಿಟ್ಟಂಗಾಲ ಆಟೋ ನಿಲ್ದಾಣದ ಬಳಿ ಚಿರತೆ ಬೆಕ್ಕೊಂದು ಅಪಘಾತಕೀಡಾಗಿ ಸಾವನಪ್ಪಿದ ಘಟನೆ ಶುಕ್ರವಾರ ರಾತ್ರಿ 9…
ಮೈಸೂರು: ನಟ ದರ್ಶನ್ ಅವರು ಮೈಸೂರಿನ ತಿ.ನರಸೀಪುರ ಮುಖ್ಯರಸ್ತೆಯಲ್ಲಿರುವ ಕೆಂಪಯ್ಯನಹುಂಡಿ ಬಳಿಯ ತಮ್ಮ ಫಾರ್ಮ್‌ಹೌಸ್‌ನಲ್ಲಿ ವಾಸ್ತವ್ಯ ಹೂಡಿದ್ದಾರೆ. ಶುಕ್ರವಾರ ಇಲ್ಲಿಗ…