Light
Dark

ಮೈಸೂರು : ಸನ್ನಡತೆಯ ಆಧಾರದ ಮೇಲೆ 20 ಕೈದಿಗಳಿಗೆ ಬಿಡುಗಡೆ ಭಾಗ್ಯ

ಮೈಸೂರು : ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸಂದರ್ಭದಲ್ಲಿ ಸನ್ನಡತೆಯ ಆಧಾರದ ಮೇಲೆ ಮೈಸೂರು ಕೇಂದ್ರ ಕಾರಾಗೃಹದಿಂದ 20 ಕೈದಿಗಳು ಬಿಡುಗಡೆಗೊಂಡರು.

ಸರ್ಕಾರದ ನಿರ್ದೇಶನದ ಮೇರೆಗೆ 20 ಮಂದಿ ಸಜಾ ಕೈದಿಗಳನ್ನು ಬಿಡುಗಡೆ ಮಾಡಲಾಗಿದೆ. ಒಟ್ಟಾರೆ ರಾಜ್ಯದಲ್ಲಿ ಇಂದು 81 ಕೈದಿಗಳನ್ನು ಬಿಡುಗಡೆ ಮಾಡಲಾಗಿದೆ.

ಸ್ವಾತಂತ್ರ್ಯೋತ್ಸವದ ಈ ಸಂದರ್ಭದಲ್ಲಿ ಅಮೃತ ಮಹೋತ್ಸವಕ್ಕೆ ಸಾಕ್ಷಿಯಾದರು ಎಂದು ಕಾರಾಗೃಹದ ಅಧೀಕ್ಷಕಿ ದಿವ್ಯಶ್ರೀ ತಿಳಿಸಿದ್ದಾರೆ.

ಈ ಬಗ್ಗೆ ಮಾತನಾಡಿದ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ದೇವರಾಜ್ ಭೂತೆ ಅವರು ಪ್ರತಿ ವರ್ಷವೂ ಸನ್ನಡತೆಯ ಆಧಾರದ ಮೇಲೆ ಕೈದಿಗಳನ್ನು ಬಿಡುಗಡೆ ಮಾಡಲಾಗುತ್ತಿತ್ತು ಆದರೆ ಈ ಬಾರಿ ಅಲ್ಪಾವಧಿ ಶಿಕ್ಷೆ ಅನುಭವಿಸುತ್ತಿದ್ದ ಕೈದಿಗಳನ್ನು ಬಿಡುಗಡೆ ಮಾಡಲಾಗಿದೆ ಎಂದರು. ಬಿಡುಗಡೆಗೊಂಡ ಕೈದಿಗಳಿಗೆ ಮುಂದೆ ಸಮಾಜದಲ್ಲಿ ಉತ್ತಮ ನಾಗರಿಕರಾಗಿ ಜೀವನ ನಡೆಸುವಂತೆ ಸಲಹೆ ನೀಡಿದರು.

 

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ