ಜಿಲ್ಲೆಗಳು

ಮೈಸೂರು : ಗರಡಿಮನೆಗಳಿಂದ ಸಜ್ಜಾಗಿ ಅಖಾಡಕ್ಕಿಳಿಯುತ್ತಿರುವ ಪೈಲ್ವಾನರು

ಮೈಸೂರು : ನಾಡ ಕುಸ್ತಿ ಜೋಡಿ ಕಟ್ಟುವ ಕಾರ್ಯಕ್ರಮಕ್ಕೆ ಇಂದು ಚಾಲನೆ  ನೀಡಲಾಯಿತು.
ಕರ್ನಾಟಕ ವಸ್ತುಪ್ರದರ್ಶನ ಪ್ರಾಧಿಕಾರ ಆವರಣದಲ್ಲಿ ಹಮ್ಮಿಕೊಂಡಿದ್ದ ನಾಡ ಕುಸ್ತಿ ಕಾರ್ಯಕ್ರಮಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಸೋಮಶೇಖರ್‌ರಿಂದ ಚಾಲನೆ ನೀಡಿದರು. ಸಂಸದ ಪ್ರತಾಪ್ ಸಿಂಹ, ಶಾಸಕ ಜಿ.ಟಿ.ದೇವೇಗೌಡ, ಮೇಯರ್ ಶಿವಕುಮಾರ್, ಎಸ್.ಪಿ.ಚೇತನ್, ಹಲವರು ಉಪಸ್ಥಿತರಿದ್ದರು.

ಕುಸ್ತಿ ಬಗ್ಗೆ ನಿಮಗೆಷ್ಟು ಗೊತ್ತು ? 
ಮೈಸೂರನ್ನು ಗರಡಿಮನೆಗಳ ನಗರಿ ಎಂದರೆ ತಪ್ಪಾಗಲಾರದು. ಏಕೆಂದರೆ ಬೇರೆಲ್ಲೂ ಇಲ್ಲದಷ್ಟು ಗರಡಿಮನೆಗಳು ಇಲ್ಲಿವೆ. ದಸರಾ ಬರುತ್ತಿದ್ದಂತೆಯೇ ಈ ಗರಡಿಮನೆಗಳಲ್ಲಿ ಸಂಚಲನ ಉಂಟಾಗುವುದರೊಂದಿಗೆ ಪೈಲ್ವಾನ್‌ಗಳು ದಸರಾ ಕುಸ್ತಿಗೆ ಸಜ್ಜಾಗುತ್ತಾರೆ. ಹಾಗೆನೋಡಿದರೆ ದಸರಾ ಸಂದರ್ಭ ನಡೆಯುವ ವಿವಿಧ ಕಾರ್ಯಕ್ರಮಗಳ ನಡುವೆ ಕುಸ್ತಿಗೂ ಮಹತ್ವದ ಸ್ಥಾನವಿದೆ. ಕುಸ್ತಿ ಪಂದ್ಯಾವಳಿಗಳಿಗೆ ರಾಜಮಹಾರಾಜರ ಕಾಲದ ಇತಿಹಾಸವಿದೆ. ರಾಜರ ಕಾಲದಲ್ಲಿ ಪೈಲ್ವಾನ್‌ರನ್ನು ಕರೆಸಿ ಪ್ರತಿ ವಾರವೂ ಕುಸ್ತಿ ನಡೆಸಲಾಗುತ್ತಿತ್ತು. ಅಲ್ಲದೆ, ದಸರಾ ಸಂದರ್ಭ ಅರಮನೆಯ ಕರಿಕಲ್ಲು ತೊಟ್ಟಿಯಲ್ಲಿ ನಡೆಯುತ್ತಿದ್ದ ವಜ್ರಮುಷ್ಠಿ ಕಾಳಗ ಖ್ಯಾತಿ ಪಡೆದಿತ್ತು. ಪೈಲ್ವಾನರಿಗೆ ರಾಜರೇ ಆಶ್ರಯ ನೀಡಿ ಪ್ರೋತ್ಸಾಹಿಸುತ್ತಿದ್ದರು. ಹೀಗಾಗಿ ನಗರದಾದ್ಯಂತ ಗರಡಿಮನೆಗಳು ಹುಟ್ಟಿಕೊಂಡಿದ್ದವು. ಮುಂಜಾನೆ ಚುಮುಚುಮು ಚಳಿಯಲ್ಲಿಯೇ ಗರಡಿ ಮನೆಗೆ ಹೋಗಿ ಅಭ್ಯಾಸ ನಡೆಸುತ್ತಿದ್ದರು. ದಸರಾ ಸಂದರ್ಭ ನಡೆಯುವ ಕುಸ್ತಿ ಪಂದ್ಯದಲ್ಲಿ ತನ್ನ ಬಲ ಪ್ರದರ್ಶಿಸಿ ಜಯಶಾಲಿಯಾದ ಪೈಲ್ವಾನರಿಗೆ ದಸರಾ ಕೇಸರಿ, ದಸರಾ ಕಂಠೀರವ, ದಸರಾ ಕುಮಾರ ಪ್ರಶಸ್ತಿ ನೀಡಲಾಗುತ್ತಿತ್ತು.

ಗರಡಿಗಳ ಆಗರ: ರಾಜರ ಕಾಲದ ನಂತರದ ದಿನಗಳನ್ನು ನೋಡಿದರೆ ಗರಡಿಮನೆಗಳು ತಮ್ಮ ಅಸ್ತಿತ್ವ ಕಳೆದು ಕೊಳ್ಳುತ್ತಿರುವುದನ್ನು ನಾವು ಕಾಣಬಹುದು. ಇತ್ತೀಚೆಗಿನ ವೈಜ್ಞಾನಿಕ ಜಿಮ್‌ಗಳು ಗರಡಿಮನೆಗಳ ಮೇಲೆ ಪರಿಣಾಮ ಬೀರುತ್ತಿವೆಯೇನೋ ಎಂಬ ಸಂಶಯ ನಮ್ಮನ್ನು ಕಾಡುತ್ತಿದೆ. ಆದರೆ ನಗರಕ್ಕೊಂದು ಸುತ್ತು ಹೊಡೆದರೆ ಸುಮಾರು ನೂರಕ್ಕೂ ಹೆಚ್ಚು ಗರಡಿಮನೆಗಳು ಕಾಣಸಿಗುತ್ತವೆ. ಅಶೋಕಪುರಂ ಚಿಕ್ಕಗರಡಿ, ದೊಡ್ಡಗರಡಿ, ಸುಣ್ಣದಕೇರಿ ನಾಲಾ ಬೀದಿಯ ಗೋಪಾಲಸ್ವಾಮಿ ಗರಡಿ, ಬಸವೇಶ್ವರ ರಸ್ತೆಯ ಮಹಾಲಿಂಗೇಶ್ವರ ಮಠದ ಗರಡಿ, ಕೆ.ಜಿ.ಕೊಪ್ಪಲು, ಪಡುವಾರಹಳ್ಳಿಯ ಹತ್ತೂ ಜನರ ಗರಡಿ, ಹುಲ್ಲಿನ ಬೀದಿಯ ಈಶ್ವರರಾಯನ ಗರಡಿ, ಫಕೀರ್ ಅಹಮ್ಮದ್ ಸಾಹೇಬರ ಗರಡಿ ಹೀಗೆ ಗರಡಿ ಮನೆಗಳ ಹೆಸರು ಮುಂದುವರೆಯುತ್ತಾ ಹೋಗುತ್ತದೆ. ಇಂತಹ ಗರಡಿಮನೆಗಳಿಂದ ಪೈಲ್ವಾನ್‌ಗಳಾದ ಅಶೋಕಪುರಂ ಕೃಷ್ಣ, ಪೈ.ದೀಪಕ್‌ಕಿರಣ್‌, ಪೈ.ಸುನೀಲ್‌ಕುಮಾರ್‌, ಪೈ.ಅಭಿ, ಪೈ.ದಿವಾಕರ್‌, ಪೈ.ಬೆಟ್ಟದ ಚಿಕ್ಕಣ್ಣ, ಪೈ.ಪಾಪಣ್ಣ, ಪೈ.ಶಂಕರ್ ಚಕ್ರವರ್ತಿ, ಅವರಂತಹ ನೂರಾರು ಪೈಲ್ವಾನ್‌ಗಳು ಪ್ರತಿಭೆ ಪ್ರದರ್ಶಿಸಿ ಮೈಸೂರಿನ ಖ್ಯಾತಿಯನ್ನು ಇಮ್ಮಡಿಸುವಲ್ಲಿ ಯಶಸ್ವಿಯಾಗಿದ್ದಾರೆ. ನಾವು ಪೈಲ್ವಾನರ ಬಗ್ಗೆ ತಿಳಿಯುತ್ತಾ ಹೋದರೆ ಕುತೂಹಲ ಮೂಡುತ್ತದೆ. ಪೈಲ್ವಾನರ ನಿತ್ಯದ ದಿನಚರಿ, ಅವರ ಊಟ, ತಾಲೀಮು ಎಲ್ಲವೂ ವಿಭಿನ್ನವಾಗಿರುತ್ತದೆ. ದೇಹವನ್ನು ವ್ಯಾಯಾಮ, ಕಸರತ್ತಿನ ಮೂಲಕ ದಂಡಿಸುತ್ತಾರೆ. ಮುಂಜಾನೆ ಎದ್ದು ಗರಡಿಮನೆಗೆ ಹೋಗುವ ಪೈಲ್ವಾನರು ಅಲ್ಲಿರುವ ಪರಿಕರಗಳಾದ ಕಲ್ಲುಗುಂಡು, ಬಳೆ, ಗದೆ, ಕೊಂತ, ಕಂಬಕಟ್ಟೋದು, ಮಣ್ಣಿನಲ್ಲಿ ಪರಸ್ಪರ ಕುಸ್ತಿ ಅಭ್ಯಾಸ ನಡೆಸುವುದಲ್ಲದೆ, ಈ ಸಂದರ್ಭ ಹುಲಿಹೆಜ್ಜೆ, ಡೇಕ್ನಿ, ಕಟಾಪ್, ಹನುಮಾನ್ ದಂಡೆ, ಸುತ್ತಂಡೆ, ಚಪ್ಪಡಿದಂಡೆ, ಬಸ್ಕಿ ಮುಂತಾದ ಕಸರತ್ತುಗಳನ್ನು ಸಹ ನಡೆಸುತ್ತಾರೆ. ಗರಡಿಮನೆಯಿಂದ ತಾಲೀಮು ನಡೆಸಿ ಬರುವ ಪೈಲ್ವಾನರು ಮನೆಗೆ ಬರುತ್ತಿದ್ದಂತೆಯೇ ಲೀಟರ್‌ಗಟ್ಟಲೆ ಬಾದಾಮಿ ಬೀಜಗಳ ಮಿಶ್ರಣ ಮಾಡಿದ ಹಾಲು, ಬೆಲ್ಲ ಮತ್ತು ರವೆಯಿಂದ ಮಾಡಿದ ಸಿಹಿ ತಿನಿಸು, ಬೆಣ್ಣೆ ಮುಂತಾದ ಪೌಷ್ಠಿಕ ಆಹಾರಗಳನ್ನು ಸೇವನೆ ಮಾಡುತ್ತಾರೆ. ಮಧ್ಯಾಹ್ನ ಚಪಾತಿ, ರಾಗಿ ಮುದ್ದೆ, ಅನ್ನ ಸಾರು, ಹಾಲು, ಬೆಣ್ಣೆ, ಹಣ್ಣು ಹೀಗೆ ಸಾಗುತ್ತದೆ. ಮೊದಲೆಲ್ಲಾ ಪೈಲ್ವಾನ್ ಇದ್ದಾರೆಂದರೆ ಅದು ಊರಿಗೆ ಹೆಮ್ಮೆಯ ಸಂಗತಿಯಾಗಿರುತ್ತಿತ್ತು, ಅಲ್ಲದೆ, ಎಲ್ಲಾ ರೀತಿಯ ಪ್ರೋತ್ಸಾಹ ನೀಡಿ ಕಳುಹಿಸಲಾಗುತ್ತಿತ್ತು. ಪ್ರಸ್ತುತ ದಿನಗಳಲ್ಲಿ ಗರಡಿಮನೆಗಳಿಗೆ ತೆರಳುವವರ ಸಂಖ್ಯೆ ಕಡಿಮೆಯಾಗಿರಬಹುದೆನ್ನಲಾಗಿದೆ.

ದಸರಾ ಸಂದರ್ಭ ನಡೆಯುವ ವಿವಿಧ ಕಾರ್ಯಕ್ರಮಗಳ ನಡುವೆ ಕುಸ್ತಿಗೂ ಮಹತ್ವದ ಸ್ಥಾನವಿದೆ. ಕುಸ್ತಿ ಪಂದ್ಯಾವಳಿಗಳಿಗೆ ರಾಜಮಹಾರಾಜರ ಕಾಲದ ಇತಿಹಾಸವಿದೆ. ರಾಜರ ಕಾಲದಲ್ಲಿ ಪೈಲ್ವಾನ್‌ರನ್ನು ಕರೆಸಿ ಪ್ರತಿ ವಾರವೂ ಕುಸ್ತಿ ನಡೆಸಲಾಗುತ್ತಿತ್ತು. ಅವ್ಯವಸ್ಥೆ ಈಗಲೂ ನಡೆಯುತ್ತಿರುವುದು ಖುಷಿಯಾಗಿದೆ.
ಪೈ.ಸುನೀಲ್ ಕುಮಾರ್
ಅಶೋಕಪುರಂ ಮೈಸೂರು

 

andolanait

Recent Posts

ಇಶಾ ಫೌಂಡೇಶನ್‌ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂಕೋರ್ಟ್‌

ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್‌ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್‌ವಾಶ್‌ ಮಾಡಲಾಗಿದೆ ಎಂಬ…

1 hour ago

ಮಡಿಕೇರಿ: ಮಗನಿಂದಲೇ ತಂದೆಯ ಹತ್ಯೆ..

ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…

2 hours ago

ಮುಡಾ: ಇಡಿ ದಾಳಿಗೆ ರಾಜಕೀಯ ಕಾರಣವಲ್ಲ; ಅಶೋಕ್

ಜಾರಿ ನಿರ್ದೇಶನಾಲಯದ ದಾಳಿಗೆ ರಾಜಕೀಯ ಕಾರಣವಲ್ಲ, 3-4 ಸಾವಿರ ಕೋಟಿ ರೂ. ಅಕ್ರಮ ನಡೆದಿದೆ ಎಂದು ಹೇಳಿದ್ದೇ ಕಾಂಗ್ರೆಸ್‌ನವರು: ಪ್ರತಿಪಕ್ಷ…

2 hours ago

BJP ಟಿಕೆಟ್‌ ವಂಚನೆ: ಆರೋಪ ತಳ್ಳಿ ಹಾಕಿದ ಕೇಂದ್ರ ಸಚಿವ ಪ್ರಲ್ಹಾದ ಜೋಶಿ

ನವದೆಹಲಿ: ನನಗೆ ಸಹೋದರಿಯೇ ಇಲ್ಲ ಮತ್ತು ಗೋಪಾಲ್ ಜೋಶಿ ಮೇಲಿನ ಪ್ರಕರಣಕ್ಕೂ ತಮಗೂ ಯಾವುದೇ ಸಂಬಂಧವಿಲ್ಲ ಎಂದು ಕೇಂದ್ರ ಸಚಿವ…

2 hours ago

ಮಂಡ್ಯ ಟೂ ಇಂಡಿಯಾ: ಬೃಹತ್‌ ಉದ್ಯೋಗ ಮೇಳಕ್ಕೆ ಮೊದಲ ದಿನ ಅಭೂತಪೂರ್ವ ಸ್ಪಂದನೆ

ಮಂಡ್ಯ ಟೂ ಇಂಡಿಯಾ; ಸಕ್ಕರೆ ನಾಡಿನಲ್ಲಿ 2 ದಿನಗಳ ಬೃಹತ್ ಉದ್ಯೋಗ ಮೇಳ 150ಕ್ಕೂ ಹೆಚ್ಚು ಕಂಪನಿಗಳ ಭಾಗಿ, ಸಾವಿರಾರು…

3 hours ago

ಮುಡಾ ಮೇಲೆ ಇಡಿ ದಾಳಿ: ಸಿಬಿಐ ತನಿಖೆ ನಡೆಸುವರೆಗೂ ಹೋರಾಟ ಮುಂದುವರಿಕೆ: ಸ್ನೇಹಮಯಿ ಕೃಷ್ಣ

ಮೈಸೂರು: ಮುಡಾ ಮೇಲಿನ ಇಡಿ ಕಾರ್ಯಾಚರಣೆ ಕೇವಲ ಸಿಎಂ ಸಿದ್ದರಾಮಯ್ಯ ಅವರ ಕುಟುಂಬದವರ ಪ್ರಕರಣವಲ್ಲ. ಸಂಪೂರ್ಣ ಮುಡಾ ಅಕ್ರಮದ ಬಗ್ಗೆ…

3 hours ago